ಸ್ಯಾಂಟ್ರೋ ರವಿ ಪತ್ನಿ ವಿಚಾರಣೆಗೆ ಹಾಜರು
Team Udayavani, Jan 22, 2023, 6:20 AM IST
ಬೆಂಗಳೂರು: ಸರಕಾರಿ ಅಧಿಕಾರಿಗಳ ವರ್ಗಾವಣೆ, ವೇಶ್ಯಾವಾಟಿಕೆ ದಂಧೆ ಹಾಗೂ ಪತ್ನಿಗೆ ಗರ್ಭಪಾತ ಮಾಡಿಸಿದ್ದು ಮುಂತಾದ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿರುವ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪತ್ನಿ ರಶ್ಮಿ ಶನಿವಾರ ಸಿಐಡಿ ವಿಚಾರಣೆಗೆ ಹಾಜರಾಗಿದ್ದರು.
ಮತ್ತೊಂದೆಡೆ ರವಿಯನ್ನು ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕಳೆದೊಯ್ಯಲಾಗಿತ್ತು. ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಗೆ ಬೆಳಗ್ಗೆ 11 ಗಂಟೆಗೆ ಪರಿಚಯಸ್ಥರ ಜತೆ ಆಗಮಿಸಿದ ರಶ್ಮಿಯನ್ನು ಡಿವೈಎಸ್ಪಿ ಅಂಜುಮಾಲಾ ನಾಯಕ್ ವಿಚಾರಣೆಗೆ ನಡೆಸಿದರು. ಅಪರಾಹ್ನ 12.30ರ ಸುಮಾರಿಗೆ ಶೇಷಾದ್ರಿಪುರಂನಲ್ಲಿರುವ ರವಿ ಜತೆ ವಾಸವಾಗಿದ್ದ ಫ್ಲ್ಯಾಟ್‌ನಲ್ಲಿ ಸ್ಥಳ ಮಹಜರು ಮಾಡಲಾಯಿತು. ಅನಂತರ ಗರ್ಭಪಾತ ಮಾಡಿಸಿದ ಆಸ್ಪತ್ರೆಗೆ ಕರೆದೊಯ್ದು ಮಾಹಿತಿ ಸಂಗ್ರಹಿಸಲಾಯಿತು. ಬಳಿಕ ಸಿಐಡಿ ಕಚೇರಿಯಲ್ಲಿ ಸಂಜೆ 6 ಗಂಟೆವರೆಗೂ ವಿಚಾರಣೆ ನಡೆಸಲಾಗಿದೆ.
ರವಿ ತನ್ನ ಮೇಲೆ ಎಸಗಿರುವ ದೌರ್ಜನ್ಯಗಳ ಬಗ್ಗೆ ರಶ್ಮಿ ವಿವರವಾದ ಮಾಹಿತಿ ನೀಡಿದ್ದಾರೆಂದು ಹೇಳಲಾಗಿದೆ. ಈ ಹಿಂದೆ ಬೆಂಗಳೂರಿನಲ್ಲಿ ವಾಸವಿದ್ದ ಸಂದರ್ಭದಲ್ಲಿ ಯಾವ ರೀತಿ ದೈಹಿಕ ಮತ್ತು ಮಾನಸಿಕ ದೌರ್ಜನ್ಯ ಎಸಗಿದ್ದಾನೆ. ಯಾವ ಕಾರಣಕ್ಕೆ ಗರ್ಭಪಾತ ಮಾಡಿಸಿದ್ದಾನೆ. ಬೇರೆ ಯುವತಿಯರ ಸಂಪರ್ಕ ಇರುವುದು ನಿಜವೇ? ವೇಶ್ಯಾವಾಟಿಕೆ ಅಡ್ಡೆ ನಡೆಸಲು ಯಾವ ರಾಜ್ಯಗಳಿಂದ ಯುವತಿಯರನ್ನು ಕರೆಸುತ್ತಿದ್ದ ಎಂಬೆಲ್ಲ ಮಾಹಿತಿ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪತಿ ರವಿ ವಿರುದ್ಧ ಮೈಸೂರಿನ ವಿಜಯನಗರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ, ಗರ್ಭಪಾತ, ವೇಶ್ಯಾವಾಟಿಕೆ ಆರೋಪದ ಮೇಲೆ ರಶ್ಮಿ ದೂರು ನೀಡಿದ್ದರು.
ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ
ಸಿಐಡಿ ವಶದಲ್ಲಿರುವ ರವಿಗೆ ಶನಿವಾರ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಮಧುಮೇಹ ಹಾಗೂ ಇತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ರವಿಗೆ ಆಗಾಗ್ಗೆ ವೈದ್ಯಕೀಯ ತಪಾಸಣೆ ಅಗತ್ಯವಿದೆ ಎಂದು ಸಿಐಡಿ ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.