ಗ್ರಾಮಸ್ಥರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

ಡಿಸಿ ರಘುನಂದನ್‌ ಮೂರ್ತಿ ಸ್ಪಷ್ಟನೆ; ಹಾನಗಲ್ಲ ತಾಲೂಕು ಉಪ್ಪಣಸಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ  

Team Udayavani, Jan 22, 2023, 2:52 PM IST

8-grama-vasthavya

ಹಾವೇರಿ: ಜಿಲ್ಲಾ ಹಂತದಲ್ಲಿ ಇತ್ಯರ್ಥಪಡಿಸುವ ಗ್ರಾಮದ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಗುವುದು. ಸರ್ಕಾರದ ಹಂತದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳನ್ನು ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು ಎಂದು ಜಿಲ್ಲಾ ಧಿಕಾರಿ ರಘುನಂದನ್‌ ಮೂರ್ತಿ ಹೇಳಿದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ಶನಿವಾರ ಹಾನಗಲ್ಲ ತಾಲೂಕು ಉಪ್ಪಣಸಿ ಗ್ರಾಮದಲ್ಲಿ ಆಯೋಜಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು.

ಕೆಲವು ರೈತರ ಜಮೀನಿಗೆ ಹೋಗಲು ದಾರಿಗಳಿಲ್ಲ ಎಂಬ ಬಗ್ಗೆ ಅರ್ಜಿಗಳು ಬಂದಿವೆ. ಆದರೆ ಪ್ರಸ್ತುತ ಸಾಗುವಳಿ ಮಾಡುತ್ತಿರುವ ಜಮೀನುಗಳು ರೈತರ ಖಾಸಗಿ ಜಮೀನುಗಳಾಗಿವೆ. ಈ ಸಮಸ್ಯೆಯನ್ನು ಸರ್ಕಾರದ ಹಂತದಲ್ಲಿ ಇತ್ಯರ್ಥಪಡಿಸಬೇಕಾಗುತ್ತದೆ. ಈ ಕುರಿತಂತೆ ಸರ್ಕಾರದ ಹಂತದಲ್ಲಿ ಚಿರ್ಚಸಲಾಗುವುದು ಎಂದರು.

ಬಾಕಿ ಪಟ್ಟಾ ನೀಡಲು ಮನವಿ: ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿಗಳೊಂದಿಗೆ ತಾಲೂಕಿನ ಎಲ್ಲ ಅಧಿಕಾರಿಗಳು ಸೇರಿ ಆಯಾ ತಾಲೂಕು ಮಟ್ಟದ ಗ್ರಾಮಗಳಲ್ಲಿ ಜನಸಾಮಾನ್ಯರಿಗೆ ಸ್ಪಂದಿಸುತ್ತಿರುವುದು ಸರ್ಕಾರದ ಮಹತ್ವದ ನಿರ್ಧಾರವಾಗಿದೆ. ಕಂದಾಯ ಇಲಾಖೆಯಿಂದ ಇನ್ನೂ ಕೆಲವು ಪಟ್ಟಾಗಳನ್ನು ಕೊಡುವ ಪ್ರಕ್ರಿಯೆ ಬಾಕಿ ಇದ್ದು, ಅದನ್ನು ಪರಿಹರಿಸಿ ಹಕ್ಕುಪತ್ರ ನೀಡಬೇಕೆಂದು ಮನವಿ ಮಾಡಿದರು.

ಕೋವಿಡ್‌ನಿಂದ ಮೃತರಾದವರಿಗೆ ಪರಿಹಾರ ಬಾಕಿ, ಬೆಳೆ ನಷ್ಟ ಪರಿಹಾರ, ಜಮೀನುಗಳಿಗೆ ದಾರಿ, ಪಟ್ಟಾ ನೀಡುವಿಕೆ, ಉತಾರ, ಮನೆಗಳ ಮಂಜೂರಾತಿ ಸೇರಿದಂತೆ ಹಲವು ಸಮಸ್ಯೆಗಳ ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು.

ಅಂಗನವಾಡಿ ಮಕ್ಕಳ ಜನ್ಮದಿನಾಚರಣೆ, ವಿವಿಧ ಇಲಾಖಾ ಜಾಗೃತಿ ಹಾಗೂ ಪ್ರಚಾರ ಮಳಿಗೆಗಳಿಗೆ ಚಾಲನೆ ನೀಡಲಾಯಿತು.

ತಹಶೀಲ್ದಾರ್‌ ಪಿ.ಎಸ್‌.ಯರೇಸ್ವಾಮಿ ಮಾಹಿತಿ ನೀಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಿಕರಿಂದ ಒಟ್ಟು 148 ಅರ್ಜಿಗಳು ಸ್ವೀಕೃತವಾಗಿದ್ದು, ಇವುಗಳಲ್ಲಿ ಸ್ಥಳದಲ್ಲಿಯೇ 34 ಅರ್ಜಿಗಳಿಗೆ ಪರಿಹಾರ ನೀಡಲಾಗಿದೆ. ಇನ್ನುಳಿದ ಅರ್ಜಿಗಳನ್ನು ಪರಿಶೀಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸವಣೂರು ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನೀಲ್‌ ಕುಮಾರ್‌, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಮಲ್ಲದಾಳ, ಉಪಾಧ್ಯಕ್ಷೆ ಶಮಶಾದ್‌ ಬೇಗಮ್‌ ಸೇರಿದಂತೆ ವಿವಿಧಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.