ಬಿಜೆಪಿಯವರು ಮಾನಗೆಟ್ಟವರು: ಸಿದ್ದರಾಮಯ್ಯ

Team Udayavani, Jan 22, 2023, 2:57 PM IST

9-siddaramaiaya

ಹಾಸನ: ಬಿಜೆಪಿಯವರಿಗೆ ಆಡಿದ ಮಾತಿನ ಮೇಲೆ ನಿಗಾ ಇಲ್ಲ, ಅವರಿಗೆ ನಾಲಿಗೆನೇ ಇಲ್ಲ, ಮಾನಗೆಟ್ಟವರು, ಲಜ್ಜೆಗೆಟ್ಟವರು ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಾಗ್ಧಾಳಿ ನಡೆಸಿದರು.

ನಗರದ ತಣ್ಣೀರು ಹಳ್ಳದ ದೊಡ್ಡಮಂಡಿಗನಹಳ್ಳಿ ಸಮೀಪ ಏರ್ಪಡಿಸಿದ್ದ ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ಹಾಳಾಗಲಿ ಎಂದು ಶಪಿಸಿದರು.

ಬಿಜೆಪಿಯವರು ಕಳೆದ ಚುನಾವಣೆಯಲ್ಲಿ 600 ಭರವಸೆಗಳನ್ನು ನೀಡಿದ್ದರು. ಆದರೆ ಅದರಲ್ಲಿ ಈಡೇರಿಸಿದ್ದು, 50 ರಿಂದ 60 ಭರವಸೆಗಳನ್ನಷ್ಟೆ. ಆದರೆ ನಾನು ಮುಖ್ಯಮಂತ್ರಿಯಾಗುವ ಮುನ್ನ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆ. ನುಡಿದಂತೆ ನಡೆಯುವುದು ಕಾಂಗ್ರೆಸ್‌, ನುಡಿದದ್ದನ್ನೂ ನೆನಪಿಸಕೊಳ್ಳದ ಪಕ್ಷ ಬಿಜೆಪಿ ಎಂದು ಟೀಕಿಸಿದರು.

ಬಿಜೆಪಿಯವರ ಪಾಪದ ಪುರಾಣ ಬಹಿರಂಗ: ಪ್ರಜಾಧ್ವನಿ ಯಾತ್ರೆ ಮೂಲಕ ಬಿಜೆಪಿಯವರ ಪಾಪದ ಪುರಾಣವನ್ನು ಬಹಿರಂಗ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಲಂಚ ನಿರ್ಮೂಲನೆ, ಭ್ರಷ್ಟಾಚಾರ ರಹಿತ ಜನಪರ ಆಡಳಿತ ಕೊಡುವ ವಾಗ್ಧಾನ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆಪರೇಷನ್‌ ಕಮಲದ ಮೂಲಕ ಅಧಿಕಾರಕ್ಕೆ ಬಂದ ಕಳಂಕಿತ ಸರ್ಕಾರ ಕೊರೊನಾ ನಿಯಂತ್ರಣ ಕಾರ್ಯಕ್ರಮದಲ್ಲಿಯೂ ಲೂಟಿ ಮಾಡಿತು. ಸರ್ಕಾರಿ ನೌಕರರ ನೇಮಕಾತಿಯಲ್ಲಿ ಲಂಚ, ನೌಕರರ ವರ್ಗಾವಣೆಯಲ್ಲಿ ಲಂಚ ವಸೂಲಿ ಮಾಡಿ ಕರ್ನಾಟಕ್ಕೆ ಕಳಂಕ ಹಚ್ಚಿದೆ ಎಂದು ದೂರಿದರು.

ಜೆಡಿಎಸ್‌, ಬಿಜೆಪಿಗೆ ಅವಕಾಶ ಕೊಟ್ಟಾಗಿದೆ. ನನ್ನ ಮತ್ತು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಪಕ್ಷಕ್ಕೆ ಒಮ್ಮೆ ಸರ್ಕಾರ ರಚನೆಯ ಅವಕಾಶ ಕೊಟ್ಟರೆ ಕಳಂಕ ರಹಿತ ಆಡಳಿತ ಕೊಡುತ್ತೇವೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಿತು. ಆದರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಎಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್‌ಗೆ ಅಧಿಕಾರ ನಡೆಸಲು ಕಾಂಗ್ರೆಸ್‌ ತ್ಯಾಗ ಮಾಡಿತು. ಆದರೆ ಅವರು 14 ತಿಂಗಳು ಸರ್ಕಾರ ನಡೆಸುವಷ್ಟರಲ್ಲಿಯೇ ವಿಫ‌ಲರಾದರು. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೊಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಮೆಚ್ಚುಗೆ ವ್ಯಕ್ತಪಡಿಸಿದ ಕೈ ಮುಖಂಡರು ಜೆಡಿಎಸ್‌ ಭದ್ರಕೋಟೆ ಹಾಸನ ಜಿಲ್ಲೆಗೆ ಶನಿವಾರ ಆಗಮಿಸಿದ ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಅಭೂತ ಪೂರ್ವ ಸ್ವಾಗತ ನೀಡಿದರು. ಜಿಲ್ಲೆಯ ಕಾಂಗ್ರೆಸ್‌ ಕಾರ್ಯಕರ್ತರ ಉತ್ಸಾಹ, ಸಮಾವೇಶದಲ್ಲಿ ಸೇರಿದ್ದ ಜನಸ್ತೋಮ ಕಂಡು ಕಾಂಗ್ರೆಸ್‌ ಉಸ್ತುವಾರಿ ಸುರ್ಜೆವಾಲ, ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.