ನಿಲ್ಲದ ನೇಮಕ ಮುನಿಸು: ಹಳೆಯ ವಿಡಿಯೋ ಹಂಚಿಕೊಂಡ ಕಾನೂನು ಸಚಿವ ರಿಜಿಜು

Team Udayavani, Jan 23, 2023, 8:00 AM IST

1-wwqewqewqe

ನವದೆಹಲಿ: ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳಿಗೆ ನೇಮಕ ಮಾಡುವ ವಿಚಾರದಲ್ಲಿ ಕೇಂದ್ರ ಹಾಗೂ ಸುಪ್ರೀಂಕೋರ್ಟ್‌ ನಡುವಿನ ಭಿನ್ನಾಭಿಪ್ರಾಯ ಇನ್ನೂ ತಣ್ಣಗಾಗಿಲ್ಲ. “ನ್ಯಾಯಮೂರ್ತಿಗಳ ನೇಮಕ ವಿಚಾರದಲ್ಲಿ ಸುಪ್ರೀಂಕೋರ್ಟ್‌ ಸಂವಿಧಾನವನ್ನು ಹೈಜಾಕ್‌ ಮಾಡಿದೆ’ ಎಂದು ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್‌.ಎಸ್‌.ಸೋಧಿ ಸಂದರ್ಶನವೊಂದರಲ್ಲಿ ಹೇಳಿದ್ದ ಅಂಶವನ್ನು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಟ್ವೀಟ್‌ ಮಾಡಿದ್ದಾರೆ. “ಇದು ಜಡ್ಜ್ ಒಬ್ಬರ ಅಭಿಪ್ರಾಯ. ಹೆಚ್ಚಿನವರೂ ಕೂಡ ಇದೇ ರೀತಿಯ ಅಭಿಪ್ರಾಯ ಹೊಂದಿರಬಹುದು’ ಎಂದು ಬರೆದುಕೊಂಡಿದ್ದಾರೆ.

“ದೇಶದ ಜನರು ಹೊಂದಿರುವ ಸ್ವಯಂ ಆಡಳಿತದಲ್ಲಿಯೇ ಪ್ರಜಾಪ್ರಭುತ್ವದ ವಿಜಯ ಇದೆ. ಅದಕ್ಕಾಗಿ ಅವರು ತಮ್ಮ ಪ್ರತಿನಿಧಿಗಳನ್ನು ಅವಲಂಬಿಸಿರುತ್ತಾರೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಹಳೆಯ ಸಂದರ್ಶನವೊಂದರಲ್ಲಿ ನಿವೃತ್ತ ನ್ಯಾಯಮೂರ್ತಿ ಆರ್‌.ಎಸ್‌.ಸೋಧಿ “ಕಾನೂನುಗಳನ್ನು ಬದಲು ಮಾಡುವ ಅಧಿಕಾರ ಸಂಸತ್‌ಗೆ ಸೇರುತ್ತದೆ. ಸುಪ್ರೀಂಕೋರ್ಟ್‌ಗೆ ಅಂಥ ಅಧಿಕಾರವೇ ಇಲ್ಲ. ಸಂವಿಧಾನವನ್ನು ತಿದ್ದುಪಡಿ ಮಾಡುವ ಅಧಿಕಾರ ಕೂಡ ಸುಪ್ರೀಂಕೋರ್ಟ್‌ಗೆ ಇಲ್ಲ. ಅದು ಸಂಸತ್‌ನ ಪರಮಾಧಿಕಾರ. ಸುಪ್ರೀಂಕೋರ್ಟ್‌ ಸಂವಿಧಾನವನ್ನು ಹೈಜಾಕ್‌ ಮಾಡಿದೆ. ಈ ಮೂಲಕ ಅದು ನ್ಯಾಯಮೂರ್ತಿಗಳನ್ನು ನೇಮಕ ಮಾಡುತ್ತಿದೆ. ಸದ್ಯ ಸರ್ಕಾರದ ಪಾತ್ರ ಏನೂ ಇಲ್ಲ’ ಎಂದು ಹೇಳಿದ್ದರು’ ಎಂದು ಹೇಳಿದ್ದಾರೆ.

ಇತ್ತೀಚೆಗೆ ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ನ್ಯಾಯಾಂಗದ ಬಗ್ಗೆ ಆಕ್ಷೇಪ ಮಾಡಿದ್ದರು. ಕಾನೂನು ಸಚಿವರು ಕೊಲಿಜಿಯಂ ವ್ಯವಸ್ಥೆ ಹಳೆಯ ಪದ್ಧತಿ ಎಂದು ಹೇಳಿದ್ದರು. ಈ ಅಂಶ ಟೀಕೆಗೆ ಕೂಡ ಗುರಿಯಾಗಿತ್ತು.

ಶೀಘ್ರವೇ ತೀರ್ಮಾನ
ನ್ಯಾಯಮೂರ್ತಿಗಳ ನೇಮಕದ ಮೊದಲು ಅವರ ಹಿನ್ನೆಲೆಯನ್ನು ಶೋಧಿಸುವ ಬಗ್ಗೆ ಗುಪ್ತಚರ ವರದಿಗಳನ್ನು ಬಹಿರಂಗ ಮಾಡುವ ವಿಚಾರವೂ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ನಿಟ್ಟಿನಲ್ಲಿ ನ್ಯಾಯಮೂರ್ತಿಗಳು ವ್ಯಕ್ತಪಡಿಸುವ ಅಭಿಪ್ರಾಯವನ್ನು ಕೇಂದ್ರ ಸರ್ಕಾರ ಪರಿಶೀಲಿಸಲಿದೆ. ಈ ಬಗ್ಗೆ ಮುಂದಿನ ವಾರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳು ಇವೆ ಎಂದು ಹೇಳಲಾಗಿದೆ. ನ್ಯಾಯಮೂರ್ತಿ ಹುದ್ದೆಗೆ ಪರಿಶೀಲನೆಯಲ್ಲಿದ್ದ ಸೋಮಶೇಖರ್‌ ಸುಂದರೇಶನ್‌, ಆರ್‌.ಜಾನ್‌ ಸತ್ಯನ್‌ ಮತ್ತು ಸೌರಭ್‌ ಕೃಪಾಲ್‌ ಅವರ ಬಗ್ಗೆ ಗುಪ್ತಚರ ಸಂಸ್ಥೆಗಳು ನಡೆಸಿದ್ದ ತನಿಖೆಯ ವರದಿಯನ್ನು ಬಹಿರಂಗಗೊಳಿಸಲಾಗಿತ್ತು.

ಟಾಪ್ ನ್ಯೂಸ್

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Hagga movie review

Hagga movie review: ರೋಚಕ ರಹಸ್ಯದ ಕಥಾನಕ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.