ನರಭಕ್ಷಕ ಚಿರತೆ ದಾಳಿಗೆ ಬಾಲಕ ಸಾವು: ಕಂಡಲ್ಲಿ ಗುಂಡಿಕ್ಕಲು ಅರಣ್ಯ ಇಲಾಖೆ ಆದೇಶ

Team Udayavani, Jan 23, 2023, 8:05 AM IST

ನರಭಕ್ಷಕ ಚಿರತೆ ದಾಳಿಗೆ ಬಾಲಕ ಸಾವು: ಕಂಡಲ್ಲಿ ಗುಂಡಿಕ್ಕಲು ಅರಣ್ಯ ಇಲಾಖೆ ಆದೇಶ

ತಿ. ನರಸೀಪುರ/ಮೈಸೂರು: ನರಭಕ್ಷಕ ಚಿರತೆಯ ಹಾವಳಿ ಹೆಚ್ಚಾಗಿದ್ದು, ತಿ. ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದ 11 ವರ್ಷದ ಬಾಲಕನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ. ಮೂರು ದಿನಗಳಲ್ಲೇ ಇಬ್ಬರನ್ನು ಚಿರತೆ ಕೊಂದು ಹಾಕಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಚಿರತೆ ದಾಳಿಗೆ ಇದು ನಾಲ್ಕನೇ ಸಾವಾಗಿದ್ದು, ಶುಕ್ರವಾರವಷ್ಟೇ ಕನ್ನಾಯಕನಹಳ್ಳಿ ಗ್ರಾಮದ ಸಿದ್ದಮ್ಮ ಎಂಬವರನ್ನು ಚಿರತೆ ಕೊಂದಿತ್ತು. ಈ ಹಿಂದೆ ಉಕ್ಕಲಗೆರೆ ಮಂಜುನಾಥ, ಎಂ. ಕೆಬ್ಬೆಹುಂಡಿಯ ಮೇಘನಾ ಎಂಬಾಕೆಯನ್ನು ಚಿರತೆ ದಾಳಿ ಮಾಡಿ ಸಾಯಿಸಿತ್ತು. ಶನಿವಾರ ರಾತ್ರಿ ಬಾಲಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ.

ಶನಿವಾರ ತಡರಾತ್ರಿ ಬಾಲಕ ಜಯಂತ್‌ (11) ನಾಪತ್ತೆಯಾಗಿದ್ದ. ಗ್ರಾಮಸ್ಥರು ಹುಡುಕಾಟ ನಡೆಸಿದಾಗ ರವಿವಾರ ಗ್ರಾಮದಿಂದ ಒಂದು ಕಿ.ಮೀ. ದೂರವಿರುವ ಪೊದೆಯೊಂದಲ್ಲಿ ಮೃತದೇಹ ಪತ್ತೆಯಾಗಿದೆ. ಬಾಲಕನ ಮೃತದೇಹದ ಅರ್ಧ ಭಾಗ ಮಾತ್ರ ದೊರೆತಿದ್ದು, ತಲೆ ಭಾಗವನ್ನು ಚಿರತೆ ತಿಂದಿರಬಹುದೆಂದು ಅನುಮಾನ ಹುಟ್ಟುಕೊಂಡಿದೆ.

ಕಾರ್ಯಾಚರಣೆಗೆ ವೇಗ

6 ಕಿ.ಮೀ. ವ್ಯಾಪ್ತಿಯಲ್ಲಿ  ಚಿರತೆ ದಾಳಿಯಿಂದ ಮೂವರು ಸಾವನ್ನಪ್ಪಿದ್ದು, ಪ್ರಕರಣಗಳಲ್ಲಿ ಸಾಮ್ಯತೆ ಕಂಡು ಬಂದಿದೆ. ಹೀಗಾಗಿ ಒಂದೇ ಚಿರತೆ ಈ ಮೂವರನ್ನು ಹತ್ಯೆ ಮಾಡಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಚಿರತೆ ನರಭಕ್ಷಕ ಆಗಿದ್ದು, ಕಾರ್ಯಾಚರಣೆ ವೇಳೆ ಕಂಡಲ್ಲಿ ಗುಂಡಿಕ್ಕಲು ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚಿರತೆಯ ಹುಡುಕಾಟಕ್ಕೆ ವಿಶೇಷ ತಂಡ ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅರಣ್ಯಾಧಿಕಾರಿಗಳಿಗೆ ವಿಶೇಷ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಹುಲಿ ದಾಳಿ: ವ್ಯಕ್ತಿ ಸಾವು

ಎಚ್‌.ಡಿ. ಕೋಟೆ: ಕಟ್ಟಿಗೆ ತರಲು ಅರಣ್ಯಕ್ಕೆ ಹೋಗಿದ್ದ ಆದಿವಾಸಿಗಗಳ ಗುಂಪಿನ ಮೇಲೆ ಹುಲಿಯೊಂದು ದಾಳಿ ನಡೆಸಿದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿತರರು ಆಶ್ಚರ್ಯಕರ ರೀತಿಯಿಂದ ಪಾರಾಗಿರುವ ಘಟನೆ ತಾಲೂಕಿನ ಬಳ್ಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬಳ್ಳೆ ಹಾಡಿಯ ಮಂಜು (18) ಮೃತಪಟ್ಟ ನತದೃಷ್ಟ.

ಚಿರತೆ ದಾಳಿ ಪ್ರಕರಣಗಳು

– 01ಅ. 31 – ಬನ್ನೂರು ಸಮೀಪದ ಮಲ್ಲಿಕಾರ್ಜುನ ಬೆಟ್ಟದಲ್ಲಿ ಕಾಲೇಜು ವಿದ್ಯಾರ್ಥಿ

– 02ಡಿ. 01 – ಬನ್ನೂರು ಬಳಿಯ ಎಂ.ಎಲ್‌. ಹುಂಡಿಯಲ್ಲಿ  ಕಾಲೇಜು ವಿದ್ಯಾರ್ಥಿನಿ ಮೇಲೆ ದಾಳಿ

– 03ಜ. 20 – ತಿ.ನರಸೀಪುರ ತಾಲೂಕಿನ ಕನ್ನನಾಯಕನಹಳ್ಳಿಯಲ್ಲಿ ವೃದ್ಧೆ ಮೇಲೆ ದಾಳಿ

– 04ಜ. 21 – ತಿ. ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಬಾಲಕನ ಮೇಲೆ ದಾಳಿ

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.