ದಿಲ್ಲಿಯ ಕರ್ತವ್ಯ ಪಥದಲ್ಲಿ 26ಕ್ಕೆ ಅನಾವರಣಗೊಳ್ಳಲಿದೆ ನಾರೀಶಕ್ತಿ!
ಮಹಿಳೆಯರ ಸಾಧನೆ ಆಧರಿಸಿದ ಟ್ಯಾಬ್ಲೋ
Team Udayavani, Jan 23, 2023, 7:15 AM IST
ಹೊಸದಿಲ್ಲಿ: ಜ.26ರಂದು ಕರ್ತವ್ಯಪಥದಲ್ಲಿ ನಡೆಯಲಿರುವ 74ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಈ ಬಾರಿ ಬಹುತೇಕ ರಾಜ್ಯಗಳ ಸ್ತಬ್ಧಚಿತ್ರ ನಾರೀಶಕ್ತಿಯನ್ನು ಪ್ರದರ್ಶಿಸಲಿದೆ. ರಾಜಪಥವನ್ನು ಕರ್ತವ್ಯ ಪಥವೆಂದು ಹೊಸತಾಗಿ ಹೆಸರು ಇರಿಸಿದ ಬಳಿಕ ನಡೆಯುತ್ತಿರುವ ಮೊದಲ ಗಣರಾಜ್ಯೋತ್ಸವ ಇದಾಗಿದೆ. ಭಾರತದ ಸಾಂಸ್ಕೃತಿಕ ಪರಂಪರೆ, ಆರ್ಥಿಕ, ಸಾಮಾಜಿಕ ಪ್ರಗತಿಯನ್ನು ಬಿಂಬಿಸುವ ಪರೇಡ್‌ನಲ್ಲಿ ಈ ಬಾರಿ ದೇಶದ ನಾರಿಶಕ್ತಿಯ ಪ್ರದರ್ಶನ ವಾಗಲಿದೆ. ಕೆಲವೊಂದು ಈಗಾಗಲೇ ಸಿದ್ಧಗೊಂಡಿದ್ದರೆ, ಇನ್ನು ಕೆಲವು ಸಿದ್ಧತೆಯ ಹಂತದಲ್ಲಿವೆ.
ದುರ್ಗಾಪೂಜೆ ಪ್ರದರ್ಶನ
ಯುನೆಸ್ಕೋ ಸಾಂಸ್ಕೃತಿಕ ಪರಂಪರೆಗೆ ಸೇರ್ಪಡೆ ಗೊಂಡಿರುವ ಪಶ್ಚಿಮ ಬಂಗಾಲದ ದುರ್ಗಾಪೂಜೆಯನ್ನೇ ಈ ಬಾರಿ ಸ್ತಬ್ಧಚಿತ್ರವಾಗಿ ಪಶ್ಚಿಮ ಬಂಗಾಲ ಪ್ರದರ್ಶಿಸಲಿದೆ. ಈ ಮೂಲದ ದೇಶದ ನಾರೀಶಕ್ತಿಯ ವಿರಾಟ ರೂಪವನ್ನು ಪ್ರದರ್ಶಿಸಲು ನಿರ್ಧರಿಸಿದೆ.
ಯಾವೆಲ್ಲ ರಾಜ್ಯ ಭಾಗಿ?
ಕರ್ನಾಟಕ, ಮಹಾರಾಷ್ಟ್ರ, ಅಸ್ಸಾಂ, ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್, ಗುಜರಾತ್, ಪಶ್ಚಿಮ ಬಂಗಾಲ ಸಹಿತ ಇನ್ನೂ ಹಲವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿವೆ.
ಯಾವ ಸಚಿವಾಲಯದಿಂದ ಎಷ್ಟು ?
ಸರಕಾರದ ವಿವಿಧ ಸಚಿವಾಲಯಗಳಿಂದ ಒಟ್ಟು 6 ಸ್ತಬ್ಧ ಚಿತ್ರಗಳು ಪ್ರದರ್ಶ ನಗೊಳ್ಳಲಿವೆ. ಕೇಂದ್ರ ಗೃಹ ಸಚಿವಾಲಯದ ಎನ್‌ಸಿಬಿ , ಸಿಎಪಿಎಫ್ನಿಂದ ತಲಾ 1 ಸ್ತಬ್ಧ ಚಿತ್ರ. ಕೃಷಿ ಸಚಿವಾಲಯ ,ಬುಡಕಟ್ಟು ವ್ಯವಹಾರ ಹಾಗೂ ಸಂಸ್ಕೃತಿ ಸಚಿವಾಲಯ ಮತ್ತು ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದಿಂದ ತಲಾ 1 ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.