ಕೋಟ: ಕುಖ್ಯಾತ ಕಳ್ಳರ ಬಂಧನ… 19 ಲಕ್ಷ ರೂ. ಮೌಲ್ಯದ ಸೊತ್ತುಗಳು ವಶಕ್ಕೆ
Team Udayavani, Jan 23, 2023, 9:13 PM IST
ಕೋಟ: ಸಾಸ್ತಾನ ಪಾಂಡೇಶ್ವರ ಗ್ರಾಮದ ಮಠದ ತೋಟ ಎನ್ನುವಲ್ಲಿ ಬೆಂಗಳೂರಿನಲ್ಲಿ ಹೋಟೇಲ್ ಉದ್ಯಮ ನಡೆಸುತ್ತಿದ್ದ ರಾಜೇಶ ಪೂಜಾರಿಯವರ ಮನೆಯಲ್ಲಿ 2022 ಸೆಪ್ಟಂಬರ್ ತಿಂಗಳಿನಲ್ಲಿ ನಡೆದ ಲಕ್ಷಾಂತರ ರೂ ಚಿನ್ನಾಭರಣ ಹಾಗೂ ನಗದು ಕಳ್ಳತನದ ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಜಿಲ್ಲೆಯ ವಿಶೇಷ ಪೊಲೀಸರ ತಂಡ ಯಶಸ್ವಿಯಾಗಿದ್ದು, ವಿಚಾರಣೆ ವೇಳೆ ಇವರು ಜಿಲ್ಲೆ ಹಾಗೂ ಹೊರ ಜಿಲ್ಲೆಯ ಮನೆಕಳವು, ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ.
ಕಾಪು ಎಲ್ಲೂರು, ಮಂಜರಬೆಟ್ಟು ನಿವಾಸಿ ರಾಜೇಶ್ ದೇವಾಡಿಗ (38) ಹಾಗೂ ಕಾರ್ಕಳದ ಈದು ಹೊಸ್ಮಾರಿನ ನಿವಾಸಿ ಮೊಹಮ್ಮದ್ ರಿಯಾಜ್ ಹೊಸ್ಮಾರ್ (39) ಬಂಧಿತ ಆರೋಪಿಗಳು.
ಜಿಲ್ಲಾ ಎಸ್.ಪಿ.ಯವರಿಂದ ನಿಯೋಜಿತಗೊಂಡ ಪೊಲೀಸ್ ತಂಡವು ರಾತ್ರಿ ಮನೆ ಕಳ್ಳತನ ಪ್ರಕರಣದ ಹಳೆಯ ಆರೋಪಿಗಳು, ಜೈಲಿನಿಂದ ಬಿಡುಗಡೆಯಾದವರ ಮಾಹಿತಿಯನ್ನು ಕಲೆಹಾಕಿ ಅವರ ಚಲನವಲನ ಮೇಲೆ ನಿಗಾ ಇರಿಸಿತ್ತು ಹಾಗೂ ತಾಂತ್ರಿಕ ಮಾಹಿತಿ ಹಾಗೂ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿ ಸಂಶಯಾಸ್ಪದ ಆರೋಪಿಗಳ ಮೇಲೆ ನಿಗಾವಹಿಸಲಾಗಿತ್ತು. ಅದರಂತೆ ಜ.22ರಂದು ಕೋಟ ಠಾಣಾ ವ್ಯಾಪ್ತಿಯ ಸಾೖಬ್ರಕಟ್ಟೆ ಬಳಿ ಖಚಿತ ಮಾಹಿತಿಯಂತೆ ವಾಹನ ತಪಾಸಣೆ ನಡೆಸುವ ಸಂದರ್ಭ ಪೋರ್ಡ್ ಮಾಂಡಿಯೋ ಕಾರನಲ್ಲಿ ರಾಜೇಶ ದೇವಾಡಿಗ ಮತ್ತು ಮೊಹಮ್ಮದ್ ರಿಯಾಜ್ ಹೊಸ್ಮಾರ್ ಪ್ರಯಾಣಿಸುತ್ತಿರುವುದು ಪ್ರಯಾಣಿಸುತ್ತಿರುವುದು ಕಂಡು ಬಂದಿದ್ದು, ಅವರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಯಾವುದೇ ದಾಖಲೆಯಿಲ್ಲದ ಚಿನ್ನಾಭರಣಗಳು ಇರುವುದು ಕಂಡುಬಂದಿರುತ್ತದೆ. ಈ ಬಗ್ಗೆ ವಿಚಾರಿಸಿದಾಗ ಸಾಸ್ತಾನದ ಚರ್ಚ್ ಬಳಿ ಒಂದು ಮನೆಯಿಂದ ಕಳವು ಮಾಡಿದ ಚಿನ್ನಾಭರಣಗಳಾಗಿರುವುದಾಗಿ ಅವುಗಳನ್ನು ಮಾರಾಟ ಮಾಡಲು ಶಿವಮೊಗ್ಗ ಕಡೆಗೆ ಹೋಗುತ್ತಿರುವುದಾಗಿ ಒಪ್ಪಿಕೊಂಡಿರುತ್ತಾರೆ.
ಹಲವು ಪ್ರಕರಣಗಳ ಆರೋಪಿ:
ರಾಜೇಶ್ ದೇವಾಡಿಗ ಈ ಹಿಂದೆ ಜೈಲುವಾಸ ಅನುಭವಿಸಿ ಬಿಡುಗಡೆಗೊಂಡಿರುತ್ತಾನೆ. ಈಗಾಗಲೇ ಈತನ ಮೇಲೆ ಕಾಪು ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ 3 ಪ್ರಕರಣ, ಶಿರ್ವ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ 4 ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 12 ಕಳ್ಳತನ ಪ್ರಕರಣ ದಾಖಲಾಗಿದೆ. ಮೊಹಮ್ಮದ್ ರಿಯಾಜ್ ಹೊಸ್ಮಾರ್ ಕಾರ್ಕಳದ ಪ್ಲೋರಿನ್ ಮಚಾದೋ ರವರ ಕೊಲೆ ಹಾಗೂ ಸುಲಿಗೆ ಪ್ರಕರಣ ಹಾಗೂ 2021 ರಲ್ಲಿ ಕಾಸರಗೊಡು ಜಿಲ್ಲೆಯಲ್ಲಿ ನಡೆದ ಪ್ರಮುಖ ಪ್ರಕರಣವಾದ ಮಂಜೇಶ್ವರದ ರಾಜಧಾನಿ ಜ್ಯುವೆಲರ್ಸ್ ದರೋಡೆ ಪ್ರಕರಣದ ಆರೋಪಿಯಾಗಿರುತ್ತಾನೆ. ಈ ಇಬ್ಬರು ಆರೋಪಿಗಳು ಹಿರಿಯಡ್ಕ ಜೈಲಿನಲ್ಲಿರುವಾಗ ಪರಿಚಯವಾಗಿದ್ದು ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ರಾತ್ರಿ ಹೊತ್ತು ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ನಡೆಸಲು ಸಂಚು ನಡೆಸುತ್ತಿದ್ದರು.
19 ಲಕ್ಷ ಮೌಲ್ಯದ ಸ್ವತ್ತು ವಶ:
ಆರೋಪಿಗಳಿಂದ ಕಳ್ಳತನ ನಡೆಸಿದ ಸುಮಾರು 15 ಲಕ್ಷದ ಚಿನ್ನಾಭರಣ, ಕಳ್ಳತನದ ಹಣದಿಂದ ಖರೀದಿಸಿದ ಸುಮಾರು 2 ಲಕ್ಷ 50 ಸಾವಿರ ಮೌಲ್ಯದ ಪೋರ್ಡ್ ಮಾಂಡಿಯೋ ಕಾರು, ಸುಮಾರು 1 ಲಕ್ಷ ಮೌಲ್ಯದ ಹಿರೋ ಕಂಪೆನಿಯ ಡೆಸ್ಟೀನಿ ಬೆ„ಕ್ ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 50 ಸಾವಿರ ಮೌಲ್ಯದ ಹೊಂಡಾ ಆ್ಯಕ್ಟೀವ್ ಸ್ಕೂಟರ್ ಸೇರಿದಂತೆ ಒಟ್ಟು 19 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಯಚರಣೆಗೆ ವಿಶೇಷ ತಂಡ :
ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ಅ ಧೀಕ್ಷಕ ಅಕ್ಷಯ ಎಂ.ಎಚ್., ಹೆಚ್ಚುವರಿ ಪೊಲೀಸ್ ಅ ಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ರವರ ಮಾರ್ಗದರ್ಶನದಂತೆ, ಪೊಲೀಸ್ ಉಪಾಧೀಕ್ಷಕ ದಿನಕರ ಪಿ.ಕೆ., ನಿರ್ದೇಶನದಂತೆ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ, ಕೋಟ ಠಾಣೆ ಪಿ.ಎಸ್. ಐ. ಮಧು ಬಿ.ಈ., ತನಿಖಾ ಪಿ.ಎಸ್.ಐ. ಪುಷ್ಪಾ, ಪ್ರೋಬೇಷನರಿ ಪಿ.ಎಸ್.ಐ. ನೂತನ್ ಡಿ.ಈ., ಕೋಟ ಠಾಣಾ ಠಾಣೆ ಸಿಬಂದಿ ಎ.ಎಸ್.ಐ ರವಿಕುಮಾರ್, ರಾಘವೇಂದ್ರ, ಪ್ರಸನ್ನ, ಬ್ರಹ್ಮಾವರ ಠಾಣೆಯ ವೆಂಕಟರಮಣ ದೇವಾಡಿಗ, ಸಂತೋಷ ರಾಥೋಡ್, ಬ್ರಹ್ಮಾವರ ವೃತ್ತ ಕಚೇರಿಯ ಎ.ಎಸ್.ಐ ಕೃಷ್ಣಪ್ಪ, ಪ್ರದೀಪ ನಾಯಕ್ ಮತ್ತು ಜಿಲ್ಲಾ ಸಿಡಿಆರ್ ವಿಭಾಗದ ನಿತಿನ್, ದಿನೇಶ್ ಹಾಗೂ ಚಾಲಕರಾದ ಗೋಪಾಲ ಮತ್ತು ಶೇಖರ ಸೇರುಗಾರ್ ಅವರ ವಿಶೇಷ ತಂಡ ಕಾರ್ಯಚರಣೆಯಲ್ಲಿ ಭಾಗಿಯಾಗಿದೆ.
ಇದನ್ನೂ ಓದಿ: ಲಂಡನ್‌ನಲ್ಲಿ ಕನ್ನಡ ಹಿರಿಮೆ ಸಾರಿದ ಅಧಿಶ್: ಪದವಿ ಪಡೆವ ವೇಳೆ ಕನ್ನಡ ಬಾವುಟ ಪ್ರದರ್ಶನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.