ಕುಂದಾಪುರ: ಹೆದ್ದಾರಿಯಲ್ಲಿ ಅಪಾಯಕಾರಿ ಬ್ಯಾರಿಕೇಡ್; ಸವಾರರ ಪ್ರಾಣಕ್ಕೆ ಎರವಾಗುವ ಭೀತಿ
ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ತಿಳಿಯದ ಸ್ಥಿತಿಯಿದೆ.
Team Udayavani, Jan 26, 2023, 11:27 AM IST
ಕುಂದಾಪುರ: ಬೈಂದೂರಿನಿಂದ ಕುಂದಾಪುರದವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ಪ್ರಮುಖ ಜಂಕ್ಷನ್‌ಗಳಲ್ಲಿ ಇಡಲಾದ ಬ್ಯಾರಿಕೇಡ್‌ಗಳ ಪೈಕಿ ಕೆಲವೆಡೆಗಳಲ್ಲಿ ದುಸ್ಥಿತಿಯಲ್ಲಿದ್ದು, ರಾತ್ರಿ ವೇಳೆ ವಾಹನ ಸವಾರರ ಪ್ರಾಣಕ್ಕೆ ಎರವಾಗುವ ಭೀತಿಯೂ ಇದೆ.
ಕುಂದಾಪುರದ ಸಂಗಮ್‌ನಿಂದ ಆರಂಭಗೊಂಡು ಬೈಂದೂರು, ಶಿರೂರು ವರೆಗಿನ ಹೆದ್ದಾರಿಯ ಹಲವೆಡೆಗಳ ಜಂಕ್ಷನ್‌ಗಳಲ್ಲಿ ವಾಹನ ಮುಂಜಾಗ್ರತೆಯಿಂದ ಚಲಿಸಲು, ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಆದರೆ ಕೆಲವೆಡೆಗಳಲ್ಲಿ ಇಡಲಾದ ಬ್ಯಾರಿಕೇಡ್‌ಗಳು ಅರ್ಧಂಬರ್ಧ ತುಂಡಾದ ಸ್ಥಿತಿಯಲ್ಲಿದ್ದು, ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ತಿಳಿಯದ ಸ್ಥಿತಿಯಿದೆ.
ಸಂಗಮ್, ತಲ್ಲೂರು, ಹೆಮ್ಮಾಡಿ, ಮುಳ್ಳಿಕಟ್ಟೆ, ತ್ರಾಸಿ, ಮರವಂತೆ, ನಾವುಂದ, ಕಂಬದಕೋಣೆ, ನಾಗೂರು, ಕಿರಿಮಂಜೇಶ್ವರ, ಉಪ್ಪುಂದ, ಯಡ್ತರೆ, ಬೈಂದೂರು ಹೀಗೆ ಹೆದ್ದಾರಿಯುದ್ದಕ್ಕೂ ಹಲವೆಡೆಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಆದರೆ ಸಂಗಮ್ ಸೇರಿದಂತೆ ವಿವಿಧೆಡೆಗಳಲ್ಲಿ ಕೆಲ ಬ್ಯಾರಿಕೇಡ್‌ಗಳು ದುಸ್ಥಿತಿಯಲ್ಲಿದ್ದು, ವಾಹನಗಳ ಬೆಳಕು ಬಿದ್ದಾಗ ರಿಫ್ಲೆಕ್ಟರ್ ಆಗದಿರುವುದರಿಂದ ಅಪಾಯ ಎದುರಾಗುವ ಸಾಧ್ಯತೆಗಳು ಇವೆ.
ಬದಲಾಯಿಸಲು ಆಗ್ರಹ
ಹೆದ್ದಾರಿಯಲ್ಲಿ ಹಗಲು – ರಾತ್ರಿಯೆನ್ನದೆ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಅದರಲ್ಲೂ ಈಗ ಬೆಳಗ್ಗಿನ ಜಾವ ಮಂಜು ಮುಸುಕಿದ ಹೆದ್ದಾರಿಯಲ್ಲಿ ಇಂತಹ ತುಂಡಾದ ಬ್ಯಾರಿಕೇಡ್‌ಗಳಂತೂ ಪ್ರಾಣಕ್ಕೆ ಅಪಾಯ ತಂದೊಡ್ಡುವ ಆತಂಕವೂ ಇದೆ. ದ್ವಿಚಕ್ರ ವಾಹನ ಸವಾರರಂತೂ ಎಚ್ಚರಿಕೆಯಿಂದ ಸಂಚರಿಸಬೇಕಾಗಿದೆ. ಆದಷ್ಟು ಬೇಗ ಸಂಬಂಧಪಟ್ಟ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಗ್ರಾ.ಪಂ.ನವರು ಈ ಬಗ್ಗೆ ಎಚ್ಚೆತ್ತುಕೊಂಡು, ಹೊಸ ಬ್ಯಾರಿಕೇಡ್‌ಗಳನ್ನು ಇಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Lawyer Jagadish: ಮತ್ತೆ ಬಿಗ್ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್ ಜಗದೀಶ್ ಎಂಟ್ರಿ..!
Bengaluru: 54 ಎಂಜಿನಿಯರಿಂಗ್ ಸೀಟ್ ಬ್ಲಾಕ್: ಕೆಇಎ ಶಂಕೆ
Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.