ಮುದ್ದೇಬಿಹಾಳ: ಖೈದಿ ಸುಳಿವು ನೀಡಿದರೆ ಲಕ್ಷ ರೂ. ಬಹುಮಾನ !
Team Udayavani, Jan 27, 2023, 11:38 AM IST
ಮುದ್ದೇಬಿಹಾಳ: ಜೀವಾವಧಿ ಶಿಕ್ಷೆಗೊಳಗಾಗಿದ್ದ ತಾಲೂಕಿನ ಮುದ್ನಾಳದ ರಮೇಶ ಯಮನಪ್ಪ ಪರಪ್ಪಗೋಳ ಎಂಬವನು ಪರೋಲ್ ಮೇಲೆ ಹೊರ ಬಂದು ಮರಳಿ ಕೇಂದ್ರ ಕಾರಾಗೃಹಕ್ಕೆ ಹೋಗಿ ಶರಣಾಗದೆ ತಲೆಮರೆಸಿಕೊಂಡಿದ್ದು, ಇವನ ಸುಳಿವು ನೀಡಿದವರಿಗೆ ಜಿಲ್ಲಾ ಎಸ್ಪಿ ಅವರು ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.
ಎಸ್.ಸಿ.ನಂಬರ್ 81/2008ರ ಪ್ರಕರಣವೊಂದರಲ್ಲಿ ವಿಜಯಪುರದ ಒಂದನೇ ತ್ವರಿತ ನ್ಯಾಯಾಲಯದ ನ್ಯಾಯಾಧೀಶರು ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರು.
ವಿಜಯಪುರದ ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿ ಅಪರಾಧಿಯಾಗಿದ್ದ. 2017ರ ಆಗಸ್ಟ್ 16 ರಂದು ಪರೋಲ್ ರಜೆಯ ಮೇಲೆ ತನ್ನ ಸ್ವಂತ ಊರು ಮುದ್ನಾಳ ಗ್ರಾಮಕ್ಕೆ ಬಂದಿದ್ದು, ಸೆಪ್ಟೆಂಬರ್ 16 ರಂದು ಪರೋಲ್ ರಜೆ ಅವಧಿ ಮುಗಿದು ಕೇಂದ್ರ ಕಾರಾಗೃಹಕ್ಕೆ ಹಾಜರಾಗಿ ಶರಣಾಗಬೇಕಿತ್ತು. ಆದರೆ ಆತ ಹಾಗೆ ಮಾಡದೆ ಅಂದಿನಿಂದಲೇ ತಲೆಮರೆಸಿಕೊಂಡಿದ್ದಾನೆ.
ಭಾವಚಿತ್ರದಲ್ಲಿರುವ ಅಪರಾಧಿಯ ಸುಳಿವು ನೀಡಿದರೆ ಅವರಿಗೆ ಲಕ್ಷ ರೂ. ನಗದು ಬಹುಮಾನ ನೀಡಲಾಗುತ್ತದೆ. ಈತನ ಸುಳಿವು ಪತ್ತೆಯಾದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು, ಇಲ್ಲವೇ ಪೊಲೀಸ್ ಕಂಟ್ರೋಲ್ ರೂಂ ಸಂಪರ್ಕಿಸಬೇಕು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಮಾಹಿತಿ ನೀಡಲು ಜಿಲ್ಲಾ ಎಸ್ಪಿ ಮೋ: 9480804201, ಪೊಲೀಸ್ ಕಂಟ್ರೋಲ್ ರೂಂ: ದೂ: 0852- 250948, ಬಸವನ ಬಾಗೇವಾಡಿ ಉಪ ವಿಭಾಗ ಡಿವೈಎಸ್ಪಿ ಮೋ: 9480804221, ಮುದ್ದೇಬಿಹಾಳ ಸಿಪಿಐ ಮೋ:9480804221, ದೂರವಾಣಿ: 08356-220332 ಸಂಪರ್ಕಿಸಲು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.