![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 31, 2023, 7:05 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ನಗರದ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿಗೊಳಪಡಿಸಿ ಹಂತ ಹಂತವಾಗಿ ಖಾಯಂಗೊಳಿಸುವಂತೆ ಆಗ್ರಹಿಸಿ ಕಸ ಸಾಗಿಸುವ ವಾಹನಗಳ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್, ಒಳಚರಂಡಿ ಕಾರ್ಮಿಕರು ಫೆ. 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘದ ಕರಾವಳಿ ವಿಭಾಗದ ಸಂಚಾಲಕ ಬಿ.ಕೆ. ಅಣ್ಣಪ್ಪ ಕಾರೆಕ್ಕಾಡು ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ 15 ಸಾವಿರಕ್ಕೂ ಅಧಿಕ ಹೊರಗುತ್ತಿಗೆ ಕಾರ್ಮಿಕರಿದ್ದಾರೆ. ರಾಜ್ಯದ 330 ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರೂ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆ. 1ರಿಂದ ಕುಡಿಯುವ ನೀರು ಸರಬರಾಜು ಮತ್ತು ಸ್ವತ್ಛತೆ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು. ಜಿಲ್ಲೆಯಲ್ಲಿಯೂ ಸುಮಾರು 900ಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಮಂಗಳೂರಿನಲ್ಲಿ ಜಾಥಾ ಹಾಗೂ ಧರಣಿ ನಡೆಸಲಾಗುವುದು ಎಂದರು.
ಪೌರ ಕಾರ್ಮಿಕರ ನೇರ ನೇಮಕಾತಿ ಮಾಡಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಹೊರ ಗುತ್ತಿಗೆ ನೌಕರರ ನ್ಯಾಯಬದ್ಧ ಹಕ್ಕಿಗಾಗಿ ನಾವು ಆಗ್ರಹಿಸುತ್ತೇವೆ. ಒಂದೇ ಇಲಾಖೆಯಲ್ಲಿ ಕೆಲಸ ಮಾಡುವವರ ಮಧ್ಯೆ ಒಡೆದು ಆಳುವ ನೀತಿ ಸರಿಯಲ್ಲ. ಈ ಲೋಪವನ್ನು ಸರಿಪಡಿಸಿ ಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ಒಳಪಡಿಸಿ ಹಂತ ಹಂತವಾಗಿ ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು. ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.