ಇವರಿಗೆ ಪಕ್ಷದಲ್ಲಿ ಚುನಾವಣೆ ಸಮಿತಿ ಇಲ್ಲವೇ: ಭವಾನಿ ರೇವಣ್ಣ ವಿಚಾರಕ್ಕೆ ಈಶ್ವರಪ್ಪ ವ್ಯಂಗ್ಯ
Team Udayavani, Jan 31, 2023, 1:19 PM IST
ಶಿವಮೊಗ್ಗ: ಒಂದು ರಾಜಕೀಯ ಪಕ್ಷಕ್ಕೆ ರಾಜ್ಯಾಧ್ಯಕ್ಷರು, ಸಂವಿಧಾನ, ಚುನಾವಣೆ ಸಮಿತಿ ಇರುತ್ತದೆ. ಅದು ಬಿಟ್ಟು ಇವರೇ ನಾನೇ ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಿದ್ದಾರೆ. ಅನಿತಾ ಕುಮಾರಸ್ವಾಮಿಯವರು ಮಗ ನಿಖಿಲ್ ಅಭ್ಯರ್ಥಿ ಘೋಷಣೆ, ಭವಾನಿ ರೇವಣ್ಣ ನಾನೇ ಅಭ್ಯರ್ಥಿಯೆಂದು ಘೋಷಣೆ, ಸಿದ್ದು ಕೋಲಾರಕ್ಕೆ ನಾನೇ ಅಭ್ಯರ್ಥಿ ಘೋಷಣೆ. ಅದನ್ನು ಹೇಳಲು ಇವರು ಯಾರು? ಅವರಿಗೆ ಪಕ್ಷ, ಚುನಾವಣೆ ಸಮಿತಿ ಇಲ್ಲವೇ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕುಟುಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವ ಅಂತ ಮಾತನಾಡುವ ವ್ಯಕ್ತಿಗೆ ಅದರ ಬಗ್ಗೆ ನಂಬಿಕೆ ಇಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪಕ್ಷ ನೋಡಿದರೆ ಗೊತ್ತಾಗುತ್ತದೆ. ಯಾವ ಶಕುನಿಗಳು ಬೆನ್ನತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಲಿ. ಅವರು ತಿದ್ದಿಕೊಳ್ಳಲಿ. ಅವರ ಪಕ್ಷದ ಆಂತರಿಕ ವಿಚಾರ ಎಂದರು.
ಇದನ್ನೂ ಓದಿ:ಸಿದ್ದು ಹೆಣವನ್ನು ನಾಯಿನೂ ಮೂಸುವುದಿಲ್ಲ, ಅದನ್ನು ನಾವು ಯಾಕೆ ಮುಟ್ಟಬೇಕು: ಈಶ್ವರಪ್ಪ
ರಮೇಶ್ ಜಾರಳಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆಡಿಯೋ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಇಲ್ಲಿಯವರೆಗೆ ಡಿಕೆ ಶಿವಕುಮಾರ್ ಯಾವುದೇ ಉತ್ತರ ಕೊಟ್ಟಿಲ್ಲ. ತಲೆಹರಟೆ ಮಾತು ಏನೇನೋ ಹೇಳುತ್ತಿದ್ದಾರೆ. ಆ ಆಡಿಯೋ ಕುರಿತು ಉತ್ತರ ಏನು? ಆಡಿಯೋದಲ್ಲಿ ಡಿಕೆ ಶಿವಕುಮಾರ್ ಅವರು 40 ಮತ್ತು 50 ಕೋಟಿ ಕುರಿತು ಅವರೇ ಒಪ್ಪಿಕೊಂಡಿದ್ದಾರೆ. ಅದು ಅವರ ವೈಯಕ್ತಿಕ ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.
ರಮೇಶ್ ಜಾರಕಿಹೊಳಿ ಹೇಳಿಕೆ ಮೊದಲು ಉತ್ತರ ಕೊಡಲಿ. ಇದು ಸರಿನೋ ತಪ್ಪೋ ಎಂದ ಮೊದಲು ಉತ್ತರ ನೀಡಲಿ. ಅದು ಬಿಟ್ಟು ಬೇರೆ ಬೇರೆ ಉತ್ತರ ಕೊಡುತ್ತಿರುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.