ಗ್ರಾಚ್ಯುಟಿಗೆ ಒಪ್ಪಿಗೆ: ಧರಣಿ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು
Team Udayavani, Feb 1, 2023, 9:48 PM IST
ಬೆಂಗಳೂರು: ಬೇಡಿಕೆ ಈಡೇರಿಕೆಗಾಗಿ ಕಳೆದ ಹಲವು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿಗೆ ಕೊನೆಗೂ ಜಯ ಸಿಕ್ಕಿದ್ದು, ಗ್ರಾಚ್ಯುಟಿ ನೀಡಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದ ಬೆನ್ನಲ್ಲೇ ಬುಧವಾರ ಪ್ರತಿಭಟನೆ ಹಿಂಪಡೆದಿದ್ದಾರೆ.
ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯೆಕ್ಷೆ ಎಸ್.ವರಲಕ್ಷ್ಮೀ ಈ ಕುರಿತು ಮಾತನಾಡಿ, ಗ್ರಾಚ್ಯುಟಿಗೆ ಸಂಬಂಧಿಸಿದಂತೆ ಫೆ.1ರಂದು ಮುಖ್ಯಮಂತ್ರಿಗಳ ಸಲಹೆಯಂತೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಯಿತು. ಸುಪ್ರಿಂ ಕೋರ್ಟಿನ ತೀರ್ಪಿನಂತೆ ಗ್ರಾಚ್ಯುಟಿ ಕಾಯ್ದೆ 1972ರ ಪ್ರಕಾರ ಉಪಧನ (ಗ್ರಾಚ್ಯುಟಿ) ನೀಡುವ ಕುರಿತು ಮುಖ್ಯಮಂತ್ರಿಗಳ ಅನುಮೋದನೆಯ ಮೇರೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಂಘವು ಕಳೆದ 10 ದಿನಗಳಿಂದ ಹಮ್ಮಿಕೊಂಡಿರುವ ಶಾಂತಿಯುತ ಅನಿರ್ದಿಷ್ಟಾವಧಿ ಹೋರಾಟವನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಶಾಲಾಪೂರ್ವ ಶಿಕ್ಷಣಕ್ಕಾಗಿ ಬೆಳಗ್ಗೆ 10 ರಿಂದ 1 ಗಂಟೆಯ ವರೆಗೆ ನಿರ್ದಿಷ್ಟ ಸಮಯ ಮೀಸಲಿರಿಸಿದ ಸ್ಪಷ್ಟ ಆದೇಶ ಲಿಖಿತವಾಗಿ ನೀಡಿದೆ. ಮಿನಿ ಅಂಗನವಾಡಿ ಹಾಗೂ ಸಹಾಯಕಿಯರ ಪದೋನ್ನತಿಯ ಕುರಿತು ಲೋಪದೋಷಗಳಿರುವ ಆದೇಶ ವಾಪಸ್ ಪಡೆದು, ಮಾರ್ಪಡಿಸಿದ ತಿದ್ದುಪಡಿ ಆದೇಶವನ್ನು ಲಿಖಿತವಾಗಿ ಪಡೆಯಲಾಗಿದೆ. ಕಟ್ಟಡದ ವೆಚ್ಚ 12 ಲಕ್ಷದಿಂದ 20 ಲಕ್ಷಕ್ಕೆ ಏರಿಕೆಗೆ ಒಪ್ಪಿಗೆ, ಮಕ್ಕಳಿಗೆ ಶೂ, ಸಮವಸ್ತ್ರ ಹಾಗೂ ಮೂಲಸೌಕರ್ಯ ಹೆಚ್ಚಿಸಲು ಒಪ್ಪಿಗೆ, ಅಂಗನವಾಡಿಗಳಲ್ಲಿ ಶಾಲಾಪೂರ್ವ ಶಿಕ್ಷಣ ಪಡೆದ ದೃಢೀಕರಣ ಪತ್ರ ನೀಡಲು ಸಮ್ಮತಿಸಿದ್ದಾರೆ. ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತುಕತೆಯ ವೇಳೆಯಲ್ಲಿ ಇನ್ನುಳಿದ ಬೇಡಿಕೆಗಳೊಂದಿಗೆ ರಾಜ್ಯದ ಎಲ್ಲಾ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಪೂರ್ಣ ಆರೋಗ್ಯ ತಪಾಸಣೆ ಇತ್ಯಾದಿ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರಕಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.