ಹನುಮಸಾಗರ: ಮಾರ್ಚ 4, 5 ಎರಡು ದಿನಗಳ ಕನ್ನಡ ನುಡಿ ಹಬ್ಬ

ಸೈಬರ್ ತಜ್ಞ ಡಾ.ಉದಯ್ ಪುರಾಣಿಕ- ಸಮ್ಮೇಳನದ ನುಡಿಸಿರಿಗೆ ಸರ್ವಾಧ್ಯಕ್ಷತೆ ಗೌರವ

Team Udayavani, Feb 2, 2023, 3:30 PM IST

5-kushtagi1

ಕುಷ್ಟಗಿ: ಕೋವಿಡ್-19 ಎರಡನೇ ಅಲೆ ಹಿನ್ನೆಲೆ ಹನುಮಸಾಗರದಲ್ಲಿ ಮುಂದೂಡಿಕೆಯಾಗಿದ್ದ 2ನೇ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾರ್ಚ 4 ಮತ್ತು‌5 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಜಿಲ್ಲಾ ಕಸಾಪ ಹಿಂದಿನ ಅಧ್ಯಕ್ಷ ರಾಜಶೇಖರ ಅಂಗಡಿ ನೇತೃತ್ವದಲ್ಲಿ 2021, ಏಪ್ರಿಲ್ 1 ಹಾಗೂ 2ರಂದು ನಡೆಸಲು ನಿರ್ಧರಿಸಲಾಗಿತ್ತು. ಅಂತೆಯೇ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಮಾಹಿತಿ ತಂತ್ರಜ್ಞಾನದ ‌ಸಲಹೆಗಾರ ಡಾ‌. ಉದಯ ಪುರಾಣಿಕ ಅವರನ್ನು ನೇಮಿಸಿತ್ತು.  ಆದರೆ ಆ ಸಂದರ್ಭದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಗಂಭೀರವಾಗಿ ಪರಿಗಣಿಸಿದ್ದರಿಂದ ಜಿಲ್ಲಾಡಳಿತ ಈ ಸಮ್ಮೇಳನವನ್ನು ಮುಂದೂಡಿತು.

ನಂತರ 2021ರ ನವೆಂಬರ್ ಕಸಾಪ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಗೆ ಹೊಸ ಅಧ್ಯಕ್ಷ ಶರಣಗೌಡ ಪಾಟೀಲ ಹೇರೂರು ಅಧ್ಯಕ್ಷರಾದ ಮೇಲೆ ಅರ್ಧಕ್ಕೆ ನಿಂತ ಸಮ್ಮೇಳನ ನಡೆಸಲು ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಅವರಿಂದ ಅನುಮತಿ ಸಿಗಲಿಲ್ಲ.

ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳಿಕ ಹನುಮಸಾಗರ 9ನೇ ಜಿಲ್ಲಾ ಸಮ್ಮೇಳನ ಆಯೋಜಿಸಲು ಇದೀಗ ಸಮ್ಮತಿ ಸಿಕ್ಕಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ಸಮ್ಮೇಳನ ಆಯೋಜಿಸಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಗುರುವಾರ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರನ್ನು ಭೇಟಿ ಮಾಡಿದ್ದು, ಅದರಂತೆ ಅವರು ಮಾರ್ಚ್ 4‌,5 ರಂದು ದಿನಾಂಕ ಸೂಚಿಸಿದ್ದು, ಅದೇ ದಿನಾಂಕ ಆಯೋಜಿಸುವ ಸಾದ್ಯತೆಗಳಿವೆ.

ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಶೇಖರಗೌಡ ಮಾಲಿ ಪಾಟೀಲ, ಜಿಲ್ಲಾ ತಾಲೂಕು ಅಧ್ಯಕ್ಷ ಹನುಮಸಾಗರ ಹೋಬಳಿ ಘಟಕ ಅಧ್ಯಕ್ಷರು ಹಾಜರಿದ್ದರು.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಹನುಮಸಾಗರ ಹೋಬಳಿ‌ ಕಸಾಪ ಘಟಕದವರು ಫೆ.3ರಂದು ಹನುಮಸಾಗರದಲ್ಲಿ ಸ್ಥಳೀಯ ಗ್ರಾ.ಪಂ. ಸ್ಥಳೀಯರು ಹಾಗೂ ಜಿಲ್ಲಾ ಕಾರ್ಯಕಾರಿ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಸಮ್ಮೇಳನವನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಯೋಜಿಸಲು ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಹನುಮಸಾಗರ: ಮಾರ್ಚ 4, 5 ಎರಡು ದಿನಗಳ ಕನ್ನಡ ನುಡಿ ಹಬ್ಬ

ಹನುಮಸಾಗರಕ್ಕೆ 2ನೇ ಜಿಲ್ಲಾ ಸಮ್ಮೇಳನ ಭಾಗ್ಯ

ಹನುಮಸಾಗರದಲ್ಲಿ ಇದು ಎರಡನೇ ಜಿಲ್ಲಾ ಕಸಾಪ ಸಮ್ಮೇಳನ ಇದಾಗಿದೆ. ಕುಷ್ಟಗಿ ತಾಲೂಕಿನಲ್ಲಿ, ಜಿಲ್ಲಾ ಸಮ್ಮೇಳನ ಆಯೋಜನೆ 3 ನೇ ಬಾರಿ ಎನಿಸಿದೆ.

ಕಳೆದ 2007 ರಲ್ಲಿ ಡಿ.29 ಹಾಗೂ 29 ರಂದು ಡಾ. ‌ಮಹಾಂತೇಶ ಮಲ್ಲನಗೌಡ್ರು ಆಧ್ಯಕ್ಷತೆಯಲ್ಲಿ ಜಿಲ್ಲಾ ಸಮ್ಮೇಳನ ನಡೆದಿತ್ತು. 16 ವರ್ಷಗಳ‌ ಬಳಿಕ ಇದೀಗ 9ನೇ ಸಮ್ಮೇಳನದ ಇದೇ ಗ್ರಾಮದಲ್ಲಿ ಆಯೋಜನೆ ಆಗುತ್ತಿದೆ.

ಈ‌ ನಡುವೆಯೂ ಒಂದೇ ಗ್ರಾಮಕ್ಕೆ ಎರಡು ಜಿಲ್ಲಾ ಸಮ್ಮೇಳನ ಆಯೋಜನೆ ಭಾಗ್ಯ ಎನ್ನುವ ವಿಶೇಷತೆ ಇದೆ. ಕೆಲ ಸಾಹಿತಿಗಳು ಒಂದೇ ಊರಲ್ಲಿ ಎರಡು ಬಾರಿ ಸಮ್ಮೇಳನ ಬೇಡ ಬೇರೆ ಊರಲ್ಲಿ ನಡೆಸಿ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.

-ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.