ಸರಕಾರಿ ಶಾಲಾ ಮಕ್ಕಳ ಬಗೆಗೆ ಯಾಕಿಷ್ಟು ನಿರ್ಲಕ್ಷ್ಯ?


Team Udayavani, Feb 3, 2023, 6:00 AM IST

ಸರಕಾರಿ ಶಾಲಾ ಮಕ್ಕಳ ಬಗೆಗೆ ಯಾಕಿಷ್ಟು ನಿರ್ಲಕ್ಷ್ಯ?

ಬದಲಾಗುತ್ತಿರುವ ಕಾಲಘಟ್ಟಕ್ಕೆ ತಕ್ಕಂತೆ ಸರಕಾರಿ ಶಾಲೆಗಳೂ ಮಾರ್ಪಾಡು ಹೊಂದಿ ಹತ್ತು ಹಲವು ಕೊರತೆಗಳ ಹೊರತಾಗಿಯೂ ಮಕ್ಕಳಿಗೆ ಉತ್ತಮ ಗುಣ ಮಟ್ಟದ ಶಿಕ್ಷಣ ಒದ ಗಿಸುತ್ತಿವೆ. ಸರಕಾರ ಕೂಡ ಈ ಶಾಲೆಗಳನ್ನು ನಮ್ಮ ಶಿಕ್ಷಣ ವ್ಯವಸ್ಥೆಯ ಆಧಾರಸ್ತಂಭಗಳು ಎಂಬುದನ್ನು ಮನಗಂಡು ಹಲವಾರು ವಿನೂತನ ಉಪಕ್ರಮ, ಯೋಜ ನೆಗಳ ಮೂಲಕ ಈ ಶಾಲೆಗಳ ಉನ್ನತೀಕರಣಕ್ಕೆ ನಿರಂತರವಾಗಿ ಪ್ರಯತ್ನಿಸು ತ್ತಲೇ ಬಂದಿದೆ. ಆದ ರೂ ರಾಜ್ಯದಲ್ಲಿರುವ ಸರಕಾರಿ ಶಾಲೆಗಳ ಒಟ್ಟಾರೆ ಪರಿಸ್ಥಿತಿಯನ್ನು ಅವಲೋಕಿಸಿದಾಗ ಕೊರತೆಗಳ ಪಟ್ಟಿ ದೊಡ್ಡದಾಗಿ ಕಾಣುತ್ತದೆ. ಇದಕ್ಕೆ ಬಲುಮುಖ್ಯ ಕಾರಣವೆಂದರೆ ಸರಕಾರಿ ಶಾಲೆಗಳ ಬಗೆಗಿನ ಸರಕಾರ, ಅಧಿಕಾರಿ ವರ್ಗದ ಅಸಡ್ಡೆ ಮತ್ತು ನಿರ್ಲ ಕ್ಷ್ಯದ ಧೋರಣೆ.

ಸರಕಾರಿ ಶಾಲಾ ಮಕ್ಕಳಿಗೆ 2 ಜತೆ ಸಮವಸ್ತ್ರ, ಒಂದು ಜತೆ ಶೂ ಮತ್ತು 2 ಜತೆ ಸಾಕ್ಸ್‌ ವಿತರಣೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಪರಿಯನ್ನು ನೋಡಿದಾಗ ಕೇವಲ ಸರಕಾರ ಮಾತ್ರವಲ್ಲ ಸಂಬಂಧ ಪಟ್ಟ ಅಧಿಕಾರಿಗಳು ತಮ್ಮ ಮುಖಕ್ಕೆ ತಾವೇ ಹೊಡೆದುಕೊಂಡಂತಾಗಿದೆ. 2019ರಲ್ಲಿ ಹೈಕೋರ್ಟ್‌ ಈ ವಿಚಾರವಾಗಿ ನೀಡಿದ ಆದೇಶವನ್ನು ಸಮರ್ಪಕವಾಗಿ ಪಾಲನೆ ಮಾಡದಿರುವ ಹಿನ್ನೆಲೆಯಲ್ಲಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಸಂದರ್ಭ ದಲ್ಲಿ ವಿಭಾಗೀಯ ನ್ಯಾಯಪೀಠ ಸರಕಾರದ ಒಟ್ಟಾರೆ ಧೋರಣೆ, ಮನಃಸ್ಥಿತಿ ಯನ್ನು ಕಟು ಮಾತುಗಳಲ್ಲಿ ಟೀಕಿಸಿತು. ಈ ವಾಗ್ಧಾಳಿ ಒಟ್ಟಾರೆಯಾಗಿ ಇಡೀ ಆಡಳಿತ ವ್ಯವಸ್ಥೆಯ ಜಿಡ್ಡುಗಟ್ಟಿದ  ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿ ಯುವಂತಿತ್ತು. ಶಿಕ್ಷಣ, ಸರಕಾರಿ ಶಾಲೆಗಳು ಎಂದಾಕ್ಷಣ ಉದ್ಧಾರ, ಆಮೂಲಾಗ್ರ ಬದಲಾವಣೆ, ಖಾಸಗಿ ಶಾಲೆಗಳ ಮಾದರಿಯಲ್ಲಿ ಅಭಿವೃದ್ಧಿ, ಸರಕಾರಿ ಶಾಲೆಗಳ ಮಕ್ಕಳಿಗಾಗಿ ಹತ್ತು ಹಲವು ಸೌಲಭ್ಯಗಳು, ಶಿಕ್ಷಕರ ಸಹಿತ ಅಗತ್ಯ ಸಿಬಂದಿಯ ನೇಮಕ… ಹೀಗೆ ಪುಂಖಾನುಪುಂಖವಾಗಿ ಮಾತನಾಡುವವರು ಹೈಕೋರ್ಟ್‌ ನೀಡಿದ ಎಚ್ಚರಿಕೆಯ ಮತ್ತು ಅತ್ಯಂತ ತೀಕ್ಷ್ಣ ಮಾತುಗಳಿಗೆ ಈಗ ಕಿವಿಗೊಡಲೇ ಬೇಕಿದೆ.

ಯಾವೊಂದೂ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶ ದಿಂದ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿ ಯೂಟ, ಶೂ, ಸಾಕ್ಸ್‌ ವಿತರಣೆಯಂತಹ ಯೋಜನೆಗಳನ್ನು ಸರಕಾರ ಹಂತ ಹಂತಗಳಲ್ಲಿ ಜಾರಿಗೆ ತಂದು ಬಡ ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸುವಲ್ಲಿ ಮತ್ತು ತನ್ನ ನೈಜ ಉದ್ದೇಶವನ್ನು ಈಡೇರಿಸುವಲ್ಲಿ ಭಾಗಶಃ ಸಫ‌ಲವಾಯಿತು. ಆದರೆ ಸರಕಾರ ಜಾರಿಗೊಳಿಸಿದ ಬಹುತೇಕ ಯೋಜನೆಗಳು ಆರಂಭಶೂರತನಕ್ಕೆ ಸೀಮಿತ ವಾಯಿತೇ ಹೊರತು ಅವುಗಳ ಸಮರ್ಪಕ ಅನುಷ್ಠಾನದಲ್ಲಿ ನಿರಂತರತೆಯನ್ನು ಕಾಯ್ದುಕೊಳ್ಳಲು ಸರಕಾರಕ್ಕೆ ಸಾಧ್ಯವಾಗದೇ ಇರುವುದು ಬಲುದೊಡ್ಡ ದುರಂತ. ಪ್ರತೀ ವರ್ಷವೂ ಇವೆಲ್ಲವೂ ಒಂದಿಷ್ಟು ವಿವಾದಕ್ಕೀಡಾಗುವುದು ಮಾಮೂಲು. ಗ್ರಾಮೀಣ ಪ್ರದೇಶಗಳಲ್ಲಿನ ಸರಕಾರಿ ಶಾಲೆಗಳ ಸ್ಥಿತಿ ಇಂದಿಗೂ ಆಯೋಮಯ ವಾಗಿದೆ. ಪ್ರತೀ ವರ್ಷ ಹೊಸ ಯೋಜನೆಗಳನ್ನು ಘೋಷಿಸುತ್ತ ಬರಲಾಗುತ್ತಿದೆ ಯಾದರೂ ಜಾರಿಯಲ್ಲಿರುವ ಯೋಜನೆಗಳ ಸದ್ಯದ ಸ್ಥಿತಿಗತಿಯೇನು ಎಂಬ ಬಗೆಗೆ ಸರಕಾರವಾಗಲಿ, ಶಿಕ್ಷಣ ಇಲಾಖೆಯಾಗಲಿ ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಅಸಡ್ಡೆಯ ಧೋರಣೆಯಿಂದಾಗಿ ಮಕ್ಕಳ ಮನಸ್ಸಿನ ಮೇಲೆ ಗಾಢ ಪರಿಣಾಮ ಬೀರಿ ಅವರ ಭವಿಷ್ಯ ಮಂಕಾಗುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲ ಎಂದಾದರೆ ಇಂಥ ಯೋಜನೆಗಳನ್ನು ಘೋಷಿಸುವುದು ಯಾಕೆ ಎಂಬುದೇ ಹೈಕೋರ್ಟ್‌ನ ಪ್ರಶ್ನೆ. ಅಷ್ಟು ಮಾತ್ರವಲ್ಲದೆ ಮಕ್ಕಳ ಹಕ್ಕು ಮತ್ತು ಶಿಕ್ಷಣ ಸರಕಾರದ ಸಾಂವಿಧಾನಿಕ ಹೊಣೆಗಾರಿಕೆಯಾಗಿದ್ದು  ಮಕ್ಕಳ ಕಲಿಕೆಗೆ ಅಗತ್ಯವಾದ, ಪೂರಕವಾಗಿರುವ ಸೌಕರ್ಯ ಮತ್ತು ಸೌಲಭ್ಯಗಳನ್ನು ಒದಗಿಸಿಕೊಡುವುದು ಸರಕಾರದ ಕರ್ತವ್ಯ ಕೂಡ. ಇದನ್ನು ಸರಕಾರ ಮತ್ತು ಅಧಿಕಾರಿಗಳು ಮೊದಲು ಅರ್ಥೈಸಿಕೊಳ್ಳಬೇಕು.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ

Canada

Canada Temple Attack: ಕೆನಡಾ ದೇಗುಲ ದಾಳಿ: ಜಾಗತಿಕ ವಿರೋಧ ಪ್ರತಿಧ್ವನಿಸಲಿ

Flight

Hoax Call: ಹುಸಿ ಬಾಂಬ್‌ ಬೆದರಿಕೆ ಮರುಕಳಿಸದಿರಲಿ

kannadiga

Editorial: ಕನ್ನಡಿಗರ ನಿಂದನೆಗೆ ಕಠಿನ ಕ್ರಮ: ಸ್ತುತ್ಯರ್ಹ ನಿಲುವು

4-editorial

Editorial: ಸುವರ್ಣ ಕರ್ನಾಟಕ: ವಿಕಾಸಕ್ಕೆ ಕಾರ್ಯಸೂಚಿ ಅಗತ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.