ಟಾಲಿವುಡ್ ರಂಗದ ʼಕಲಾ ತಪಸ್ವಿʼ, ದಿಗ್ಗಜ ನಿರ್ದೇಶಕ ಕೆ.ವಿಶ್ವನಾಥ್ ನಿಧನ
Team Udayavani, Feb 3, 2023, 12:40 AM IST
ಹೈದ್ರಾಬಾದ್: ಟಾಲಿವುಡ್ ಸಿನಿಮಾ ರಂಗದ ದಿಗ್ಗಜ, ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ (92) ಗುರುವಾರ ರಾತ್ರಿ ವಯೋಸಹಜ ಕಾಯಿಲೆಯಿಂದ ನಿಧನರಾದರು.
ಟಾಲಿವುಡ್ ನಲ್ಲಿ ‘ಕಲಾ ತಪಸ್ವಿ’ ಎಂದೇ ಹೆಸರುವಾಸಿಯಾಗಿದ್ದ ಕೆ.ವಿಶ್ವನಾಥ್ ಕಳೆದ ಕೆಲ ಸಮಯದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
1951 ರಲ್ಲಿ ತೆಲುಗು-ತಮಿಳು ಚಲನಚಿತ್ರ ʼಪಾತಾಳ ಭೈರವಿʼಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು 1965 ರಲ್ಲಿ ʼ ಆತ್ಮ ಗೌರವಂʼ ಮೂಲಕ ನಿರ್ದೇಶಕನಾಗಿ ಕಾಲಿಟ್ಟರು. ಆ ಬಳಿಕ ಅವರ ನಿರ್ದೇಶನದ ʼ ಶಂಕರಾಭರಣಂʼ ಸಿನಿಮಾ ಆ ಕಾಲದಲ್ಲಿ ಸೂಪರ್ ಹಿಟ್ ಆಗಿ, ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿತು.
ಟಾಲಿವುಡ್ ನಲ್ಲಿ ʼಸಪ್ತಪದಿʼ, ʼಸಿರಿವೆನ್ನೆಲʼ, ʼಸೂತ್ರಧಾರಳುʼ, ʼಶುಭಲೇಖʼ, ʼಶ್ರುತಿಲಯಲುʼ, ಶುಭ ಸಂಕಲ್ಪʼ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದೂ ಮಾತ್ರವಲ್ಲದೆ, ಹಿಂದಿಯಲ್ಲಿ ʼಈಶ್ವರ್ʼ, ʼಸಂಜೋಗ್ʼ,ʼ ಸುರ್ ಸಂಗಮ್ʼ, ʼಸಂಗೀತ್ʼ, ʼಧನ್ವನ್ʼ ಮುಂತಾದ ಸಿನಿಮಾಗಳನ್ನು ಮಾಡಿದ್ದಾರೆ.
ಹತ್ರ ಹತ್ರ ಸುಮಾರು 50 ಚಿತ್ರಗಳನ್ನು ನಿರ್ದೇಶನ ಮಾಡಿರುವ ಅವರಿಗೆ 7 ರಾಜ್ಯ ನಂದಿ ಪ್ರಶಸ್ತಿ, 10 ಫಿಲ್ಮ್ ಫೇರ್ ಹಾಗೂ 2017 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯೂ ಅವರಿಗೆ ಲಭಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.