ಬೈಂದೂರು:ಒತ್ತಿನೆಣೆ ಅಪಾಯಕಾರಿ ತಿರುವಿಗೆ ಮುಕ್ತಿ ಎಂದು?

ಕಾರ್ಯನಿರ್ವಾಹಕ ಕಂಪೆನಿ ಈ ಬಗ್ಗೆ ಗಮನಹರಿಸಿ ತಾತ್ಕಾಲಿಕ ಕ್ರಮ ನಿರ್ವಹಿಸಬೇಕಿದೆ.

Team Udayavani, Feb 3, 2023, 3:20 PM IST

ಬೈಂದೂರು:ಒತ್ತಿನೆಣೆ ಅಪಾಯಕಾರಿ ತಿರುವಿಗೆ ಮುಕ್ತಿ ಎಂದು?

ಬೈಂದೂರು: ಬೈಂದೂರು ಸಮೀಪದ ಒತ್ತಿನೆಣೆ ತಿರುವು ಅಪಘಾತಗಳಿಗೆ ಆಹ್ವಾನ ನೀಡುವ ಸ್ಥಳವಾಗಿ ಮಾರ್ಪಟ್ಟಿದೆ. ಹಲವಾರು ಅಪಘಾತ ನಡೆದರೂ ಸಹ ಇಲಾಖೆ ಇದುವರೆಗೆ ದುರಸ್ತಿಗೆ ಕ್ರಮ  ಕೈಗೊಳ್ಳದ ಹಿನ್ನೆಲೆಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ನಿರಂತರ ರಸ್ತೆ ಅಪಘಾತ ಹೆದ್ದಾರಿ ಕಾಮಗಾರಿ ನಡೆಸುವ ಕಂಪೆನಿಗೆ ಬೈಂದೂರು ಒತ್ತಿನೆಣೆ ಸವಾಲಾಗಿ ಪರಿಣಮಿಸಿದೆ. ಜೇಡಿ ಮಣ್ಣಿನಿಂದಾವೃತವಾದ ಗುಡ್ಡವನ್ನು ಕೊರೆದು ರಸ್ತೆ ನಿರ್ಮಾಣ ಮಾಡಿರುವುದು ಆರಂಭದಲ್ಲಿ ಹಲವು ಸಮಸ್ಯೆಗಳಿಗೆ ಎಡೆ ಮಾಡಿಕೊಟ್ಟಿತ್ತು. ಗುಡ್ಡ ಕುಸಿತ ಉಂಟಾಗಿ ರಾಜ್ಯಮಟ್ಟದಲ್ಲಿ ಸುದ್ದಿಯಾಗಿತ್ತು.

ಬಳಿಕ ಸಂಸದರು, ಶಾಸಕರು ಹಾಗೂ ಜನಪ್ರತಿನಿಧಿಗಳ ನಿರಂತರ ಒತ್ತಡದಿಂದ ಸುಗಮ ರಸ್ತೆ ನಿರ್ಮಾಣವಾದರೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ನಿರಂತರ ಅಪಘಾತಗಳು ನಡೆಯುತ್ತಿದೆ. ಹೀಗಾಗಿ ಹೆದ್ದಾರಿ ಪ್ರಾಧಿಕಾರ ಅಪಾಯಕಾರಿ ತಿರುವುಗಳನ್ನು ಸರಿಪಡಿಸಿ ರಸ್ತೆ ಅಪಘಾತ ನಿಯಂತ್ರಿಸುವ ಕ್ರಮ ಕೈಗೊಳ್ಳಬೇಕಿದೆ ಎನ್ನುವುದು ಸಾರ್ವಜನಿಕ ಅಭಿಪ್ರಾಯವಾಗಿದೆ.

6 ತಿಂಗಳಲ್ಲಿ 8ಕ್ಕೂ ಹೆಚ್ಚು ಅಪಘಾತ ಶಿರೂರು ಕಡೆಯಿಂದ ಬೈಂದೂರು ಮಾರ್ಗವಾಗಿ ಸಾಗುವಾಗ ಎಡಭಾಗದ ರಸ್ತೆ ಸಾಕಷ್ಟು ಎತ್ತರದಲ್ಲಿದೆ. ಇಳಿಜಾರಿನಲ್ಲಿ ಒಮ್ಮೆಲೆ ತಿರುವು ಎದುರಾಗುವುದರಿಂದ ವಾಹನಗಳು ಚಾಲಕನ ನಿಯಂತ್ರಣ ತಪ್ಪಿ ಬಲಭಾಗದ ರಸ್ತೆಗೆ ಉರುಳುತ್ತಿದೆ. ಕಳೆದ ಆರು ತಿಂಗಳಲ್ಲಿ ಎಂಟಕ್ಕೂ ಅಧಿಕ ಘಟನೆಗಳು ನಡೆದಿದೆ. ಹೀಗಾಗಿ ಇಲಾಖೆ ಮತ್ತು ಕಾರ್ಯನಿರ್ವಾಹಕ ಕಂಪೆನಿ ಈ ಬಗ್ಗೆ ಗಮನಹರಿಸಿ ತಾತ್ಕಾಲಿಕ ಕ್ರಮ ನಿರ್ವಹಿಸಬೇಕಿದೆ.

ಒತ್ತಿನೆಣೆ ಅಪಾಯದ ತಿರುವು ಹಾಗೂ ಅವೈಜ್ಞಾನಿಕ ಕಾಮಗಾರಿ ಕುರಿತು ಈ ಹಿಂದೆ ಆರಕ್ಷಕ ಇಲಾಖೆ ಹೆದ್ದಾರಿ ಪ್ರಾಧಿಕಾರದ ಗಮನಕ್ಕೆ ತಂದಿದೆ. ನಿರಂತರ ಅಪಘಾತ ನಡೆಯುವುದಕ್ಕೆ ಹೆದ್ದಾರಿ ಅಸಮರ್ಪಕತೆ ಕಾರಣವಾಗಿತ್ತು. ಸರಿಪಡಿಸಲು ಇಲಾಖೆಯ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಗಮನಹರಿಸುತ್ತೇವೆ ಎಂದು ಹೆದ್ದಾರಿ ಅಧಿಕಾರಿಗಳು ತಿಳಿಸಿದ್ದಾರೆ.
-ಸಂತೋಷ ಕಾಯ್ಕಿಣಿ, ವೃತ್ತನಿರೀಕ್ಷಕರು ಬೈಂದೂರು

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Kundapura: ಎಂಟು ಗಂಟೆ ಕಾಲ ನಡೆದ ಕುಂದಾಪುರ ಪುರಸಭೆ!

4

Mullikatte: ನಾಡಗುಡ್ಡೆಯಂಗಡಿ-ಸೇನಾಪುರ ರಸ್ತೆ ಹೊಂಡಮಯ

crime

Siddapura: ಬೈಕ್‌ಗೆ ಅಡ್ಡ ಬಂದ ಶ್ವಾನ; ಗಾಯ

4

Kundapura: ಅತಿಯಾದ ಮಾತ್ರೆ ಸೇವಿಸಿ ಮಹಿಳೆ ಸಾವು

death

Kundapura: ಕೊರ್ಗಿ; ಮಹಿಳೆ ಆತ್ಮಹ*ತ್ಯೆ; ಪ್ರಕರಣ ದಾಖಲು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.