ಗಜೇಂದ್ರಗಡ: ಮತದಾನ ಖಾತ್ರಿಗೆ ವಿವಿ ಪ್ಯಾಟ್‌ ಸಹಕಾರಿ

ಯಾವುದೇ ನೆಟ್‌ವರ್ಕ್‌ ಬಳಸಿ ವಿವಿ ಪ್ಯಾಟ್‌ ಉಪಕರಣದ ನಿರ್ವಹಣೆ ಮಾಡಲಾಗುವುದಿಲ್ಲ

Team Udayavani, Feb 4, 2023, 4:38 PM IST

ಗಜೇಂದ್ರಗಡ: ಮತದಾನ ಖಾತ್ರಿಗೆ ವಿವಿ ಪ್ಯಾಟ್‌ ಸಹಕಾರಿ

ಗಜೇಂದ್ರಗಡ: ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಬಳಕೆಯಾಗುತ್ತಿರುವ ವಿವಿ ಪ್ಯಾಟ್‌ ಕಾರ್ಯವೈಖರಿ ಕುರಿತು ಜನರಿಗೆ ಮಾಹಿತಿ ನೀಡುವ ಮೂಲಕ ಕಡ್ಡಾಯ ಮತದಾನಕ್ಕೆ ಅಣಿಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಪವಿಭಾಗಾಧಿಕಾರಿ ಅನ್ನಪೂರ್ಣಾ ಮುದಕಮ್ಮನವರ ಹೇಳಿದರು.

ಪಟ್ಟಣದ ಸರ್ಕಾರಿ ಮಾದರಿ ಕೇಂದ್ರ ಶಾಲೆ ನಂ. 1ರ ಮತಗಟ್ಟೆ ಕೇಂದ್ರದಲ್ಲಿ ಮತದಾನ ಕುರಿತು ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸಿ ಅವರು ಮಾತನಾಡಿದರು.

ಈ ಹಿಂದೆ ಚುನಾವಣೆಯಲ್ಲಿ ಇವಿಎಂ ಹಾಗೂ ಬ್ಯಾಲೆಟ್‌ ಯೂನಿಟ್‌ ಯಂತ್ರಗಳನ್ನು ಬಳಸಲಾಗುತ್ತಿತ್ತು. ಆದರೆ, ಸುಪ್ರೀಂಕೋರ್ಟ್‌ ಸೂಚನೆ ಮೇರೆಗೆ ಕೇಂದ್ರ ಚುನಾವಣಾ ಆಯೋಗ ಕಳೆದ ಹಲವು ವರ್ಷಗಳಿಂದ ವಿವಿ ಪ್ಯಾಟ್‌ ಬಳಕೆ ಮಾಡುತ್ತಿದೆ. ಮತದಾರರು ತಾವು ಚಲಾಯಿಸಿದ ಮತದ ಖಾತ್ರಿಗಾಗಿ ವಿವಿ ಪ್ಯಾಟ್‌ ಉಪಕರಣ ಅಭಿವೃದ್ಧಿಪಡಿಸಿರುವುದರಿಂದ ಇದರ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರಾತ್ಯಕ್ಷಿಕೆ ನಡೆಸಲಾಗುತ್ತಿದೆ ಎಂದರು.

ಯಾವುದೇ ನೆಟ್‌ವರ್ಕ್‌ ಬಳಸಿ ವಿವಿ ಪ್ಯಾಟ್‌ ಉಪಕರಣದ ನಿರ್ವಹಣೆ ಮಾಡಲಾಗುವುದಿಲ್ಲ. ಹೀಗಾಗಿ, ವಿವಿ ಪ್ಯಾಟ್‌ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವುದರಿಂದ ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಮತದಾನ ಮಾಡಿದ ಕುರಿತು ಖಾತ್ರಿಪಡಿಸಿಕೊಳ್ಳಲು ಚುನಾವಣಾ ಆಯೋಗ ಈ ಉಪಕರಣ ಒದಗಿಸಿದೆ ಎಂದರು.

ತಹಶೀಲ್ದಾರ್‌ ರಜನಿಕಾಂತ್‌ ಕೆಂಗೇರಿ ಮಾತನಾಡಿ, ದೇಶದಲ್ಲಿ ರಾಜಾಡಳಿವಿದ್ದಾಗ ರಾಜರನ್ನು ಆಯ್ಕೆ ಮಾಡುವ ಜನರಿಗೆ ಅವಕಾಶವಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಯಿಂದ ಹಿಡಿದು ಸಾಮಾನ್ಯ ವ್ಯಕ್ತಿಯೂ ಸಹ ಪ್ರತಿ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶವಿದೆ. ಮತದಾನ ಅತ್ಯಂತ ಪವಿತ್ರ ಕೆಲಸವಾಗಿದೆ. ಹೀಗಾಗಿ, ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ನಿಮಗೆ ಸೂಕ್ತ ಎನಿಸಿದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಚುನಾವಣೆ ಬಹುದೊಡ್ಡ ಅಸ್ತ್ರವಾಗಿದೆ. ಪ್ರತಿಯೊಬ್ಬರು ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಬೇಕೆಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ ಸಜ್ಜನರ, ಕಂದಾಯ ನಿರೀಕ್ಷಕಿ ಗೌರಮ್ಮ ಆನಂದಪ್ಪನವರ, ಚುನಾವಣಾ ನಿರ್ವಹಣಾಧಿಕಾರಿ ಬಸವರಾಜ ಗುಡಿಮುಂದಿನ, ಸೆಕ್ಟರ್‌ ಅಧಿಕಾರಿ ಎಂ.ಎ. ಫಣಿಬಂಧ, ಎಸ್‌.ಎಲ್‌. ಉಪ್ಪಾರ, ಬಿಎಲ್‌ಒ ಆರ್‌.ವಿ. ನಿರಂಜನ, ಜಿ.ಎನ್‌. ಕಾಳೆ, ಎಸ್‌.ಎಸ್‌. ಪಸಾರದ, ಪಿ.ಪಿ. ಅಂಬೋರೆ, ಮುಖ್ಯ ಶಿಕ್ಷಕಿ ಎಫ್‌. ಎಚ್‌. ಬಾಗವಾನ, ಶರಣಮ್ಮ ಅಂಗಡಿ, ಬಸವರಾಜ ಬಂಕದ, ಮುದಿಯಪ್ಪ ಮುಧೋಳ, ಮೂಕಪ್ಪ ನಿಡಗುಂದಿ, ಲೀಲಾವತಿ ಸವಣೂರ, ವಿಷ್ಣು ಅಂಬೋರೆ, ಮಾರುತಿ ಅವಧೂತ್‌ ಇದ್ದರು.

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.