ಜಿಲ್ಲೆಯಲ್ಲೂ ಗುಜರಿ ಸಂಗ್ರಹ ಕೇಂದ್ರ
Team Udayavani, Feb 5, 2023, 6:35 AM IST
ಬೆಂಗಳೂರು: ಗುಜರಿ ಕೇಂದ್ರದ ಜತೆಗೆ ರಾಜ್ಯದ ಇತರೆಡೆ ಸಾರ್ವಜನಿಕರ ಅನುಕೂಲಕ್ಕಾಗಿ “ಸಂಗ್ರಹ ಕೇಂದ್ರ’ಗಳನ್ನು ತೆರೆಯಲಿಕ್ಕೂ ಅವಕಾಶ ಇರಲಿದ್ದು, ಜಿಲ್ಲಾ ಮಟ್ಟದಲ್ಲೇ ವಾಹನಗಳನ್ನು ಗುಜರಿಗೆ ನೀಡಬಹುದು.
ಗುಜರಿ ಕೇಂದ್ರಗಳನ್ನು ತೆರೆಯುವ ಸಂಬಂಧ ಸಾರಿಗೆ ಇಲಾಖೆ ಅರ್ಹ ವ್ಯಕ್ತಿ ಅಥವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ್ದು, ಗುತ್ತಿಗೆ ಪಡೆಯುವ ಸಂಸ್ಥೆಯೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ “ಗುಜರಿ ಸಂಗ್ರಹ ಕೇಂದ್ರ’ಗಳನ್ನೂ ತೆರೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ಅವಧಿ ಮೀರಿದ ವಾಹನಗಳನ್ನು ಗುಜರಿಗೆ ಹಾಕಲು ಬೆಂಗಳೂರಿಗೇ ಬರಬೇಕೆಂದಿಲ್ಲ.
ಜಿಲ್ಲಾ ಮಟ್ಟದಲ್ಲಿ ಅವಧಿ ಮೀರಿದ ವಾಹನಗಳನ್ನು ಗುಜರಿಗೆ ಹಾಕುವ ಸಂಬಂಧ ಸದ್ಯಕ್ಕೆ ಸಾರಿಗೆ ಇಲಾಖೆ ಪ್ರತ್ಯೇಕ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನಿಸುತ್ತಿಲ್ಲ. ರಾಜಧಾನಿಯಲ್ಲೇ ಗುಜರಿ ಕೇಂದ್ರಗಳನ್ನು ತೆರೆಯುವ ಏಜೆನ್ಸಿಗಳು ಜಿಲ್ಲೆಗಳಲ್ಲಿ ಸಂಗ್ರಹ ಕೇಂದ್ರಗಳನ್ನು ತೆರೆಯಬಹುದು. ಅಲ್ಲಿ ಸ್ವಯಂಪ್ರೇರಿತವಾಗಿ ವಾಹನಗಳನ್ನು ತಂದುಬಿಡಬಹುದು. ಅವುಗಳನ್ನು ಏಜೆನ್ಸಿಗಳು ಕೇಂದ್ರಕ್ಕೆ ತಂದು ವೈಜ್ಞಾನಿಕವಾಗಿ ಸಾðéಪ್ ಮಾಡುತ್ತಾರೆ. ಇದಕ್ಕೆ ಪ್ರತಿಯಾಗಿ ತೆರಿಗೆ ರಿಯಾಯಿತಿ ಮುಂತಾದ ಎಲ್ಲ ಸೌಲಭ್ಯಗಳು ವಾಹನ ಸವಾರರಿಗೆ ದೊರೆಯಲಿವೆ ಎಂದು ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ ತಿಳಿಸಿದರು.
ಈ ಮಧ್ಯೆ ನೋಂದಾಯಿತ ವಾಹನ ಗುಜರಿ ಕೇಂದ್ರಗಳನ್ನು (ಆರ್‌ವಿಎಸ್‌ಎಫ್) ತೆರೆಯಲು ಸಾರಿಗೆ ಇಲಾಖೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಸಾರ್ವಜನಿಕರು ಗುಜರಿ ನಿಯಮದಡಿ ಕೇಂದ್ರ ಸರಕಾರದ ಪೋರ್ಟಲ್ http://www.nsws.gov.in ನಲ್ಲಿ ಏಕಗವಾಕ್ಷಿಯಲ್ಲಿ ನಿಯಮಾನುಸಾರ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಜಾಲತಾಣದಲ್ಲಿ ಪ್ರಕಟ
ನೋಂದಾಯಿತ ವಾಹನಗಳ “ಗುಜರಿ ನೀತಿ- 2022′ ಅನ್ನು ಜಾಲತಾಣದಲ್ಲಿ ಪ್ರಕಟಿಸಿದ್ದು, ಸಾರ್ವಜನಿಕರು ಇಲಾಖೆ ಜಾಲತಾಣ http://www.transport.karnataka.gov.in ನಲ್ಲಿ ನೀತಿಯನ್ನು ನೋಡಬಹುದು. ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಅಧಿಸೂಚನೆ ಅನ್ವಯ 2022ರ ಡಿಸೆಂಬರ್ 30ರಂದು ಯೋಜನೆಯನ್ನು ಜಾರಿಗೊಳಿಸಿದ್ದು, ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.