ಭೂಸ್ವಾಧೀನ ವಿರುದ್ಧ ಹೋರಾಡೋಣ


Team Udayavani, Feb 6, 2023, 2:34 PM IST

tdy-14

ಮೈಸೂರು: ರೈತಾಪಿ ಕುಟುಂಬದಿಂದ ಬಂದಿರುವ ಜನಪ್ರತಿನಿಧಿಗಳೇ ಕೃಷಿಕರ ಕುಟುಂಬಗಳನ್ನು ಬೀದಿಪಾಲು ಮಾಡುತ್ತಿದ್ದಾರೆ. ಭೂಸ್ವಾಧೀನ ವಿರುದ್ಧ ದೊಡ್ಡಮಟ್ಟದ ಹೋರಾಟ ರೂಪುಗೊಳ್ಳಬೇಕಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ನಗರದ ಧ್ವನ್ಯಾಲೋಕದಲ್ಲಿ ಭಾನುವಾರ ಆಯೋಜಿಸಿದ್ದ ಕೃಷಿಯ ಸುತ್ತ ಒಂದು ಚರ್ಚೆ ಕಾರ್ಯಕ್ರಮದಲ್ಲಿ ನಮ್ಮೂರ ಭೂಮಿ ನಮಗಿರಲಿ; ಅನ್ಯರಿಗಲ್ಲ ಬಳಗದಿಂದ ಪ್ರಕಟಿಸಿರುವ ಭೂಸ್ವಾಧೀನ ಒಳಸುಳಿಗಳು ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು,ರೈತರ ಕೃಷಿ ಭೂಮಿ ಸ್ವಾಧೀನದಲ್ಲಿ ರಾಜಕಾರಣಿಗಳು, ಪುಡಿರಾಜಕಾರಣಿಗಳೇ ರಿಯಲ್‌ ಎಸ್ಟೇಟ್‌ ಏಜೆಂಟರು. ಇವರೆಲ್ಲ ಕೃಷಿಕರ ಬದುಕು ಕಿತ್ತುಕೊಳ್ಳುವ ದಲ್ಲಾಳಿಗಳು ಎಂದರು.

ಉದ್ದಿಮೆಗೆ 5 ಕೋಟಿ ರೂ. ಮಾರಾಟ: ರೈತರಿಂದ ಸರ್ಕಾರ ಸ್ವಾಧೀನ ಪಡೆಸಿಕೊಂಡ ಭೂಮಿಯನ್ನು ಶೇ.70ರಷ್ಟು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತದೆ. 5 ವರ್ಷದಲ್ಲಿ ಉದ್ದೇಶಿತ ಕಾರ್ಯ ಜಾರಿಯಾಗದಿದ್ದರೆ ಭೂಮಿಯನ್ನು ರೈತರಿಗೆ ಮರಳಿಸಬೇಕು ಎಂಬ ಕಾಯ್ದೆ ಆಶಯವನ್ನೇ ಕೈಬಿಡಲಾಗಿದೆ. ಇದರಿಂದಾಗಿ ರೈತರಿಂದ ಪ್ರತಿ ಎಕರೆಗೆ 40 ಲಕ್ಷ ರೂಪಾಯಿಯಂತೆ ಖರೀದಿಸಿ, 5 ವರ್ಷದ ಬಳಿಕ ಅದೇಭೂಮಿಯನ್ನು ಇನ್ನೊಬ್ಬ ಉದ್ದಿಮೆಗೆ 5 ಕೋಟಿರೂ. ಮಾರಲಾಗುತ್ತಿದೆ. ಕೈಗಾರಿಕೋದ್ಯಮಿಗಳು ದುಡ್ಡು ಮಾಡಿಕೊಳ್ಳಲು ಸರ್ಕಾರವೇ ಅವಕಾಶ ನೀಡುತ್ತಿದೆ ಎಂದು ಆರೋಪಿಸಿದರು.

ಕೆಟ್ಟ ವ್ಯವಸ್ಥೆ ನಿರ್ಮಾಣ: ಕೆಐಎಡಿಬಿ ಬ್ರೋಕರ್‌ ಸಂಸ್ಥೆ: ವರುಣ ಬಳಿ ಕಂಪನಿಯೊಂದು ರೈತರಿಂದ ಪ್ರತಿ ಎಕರೆಗೆ 2 ಲಕ್ಷ ರೂ.ನಂತೆ ಭೂಮಿ ಖರೀದಿ ಮಾಡಿತ್ತು. ಅದೇ ಭೂಮಿ ಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ 47 ಲಕ್ಷ ರೂ. ಮಾರ ಲಾಗಿದೆ. ಇದೀಗಕೆಐಎಡಿಬಿ ರಿಯಲ್‌ ಎಸ್ಟೇಟ್‌ನ ಬ್ರೋಕರ್‌ ಸಂಸ್ಥೆಯಾಗಿದೆ. ಕೃಷಿ ಭೂಮಿ ಸ್ವಾಧೀನದಲ್ಲಿಶಾಸಕರು, ಸಂಸದರು ಸಹ ಕಮಿ ಷನ್‌ ಪಡೆಯುತ್ತಾರೆ. ಬ್ರಿಟಿಷರ ಕಾಲಕ್ಕಿಂತ ಕೆಟ್ಟ ವ್ಯವಸ್ಥೆ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.

ಚಿಂತಕ ಕೆ.ಪಿ.ಸುರೇಶ್‌ ಮಾತನಾಡಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಲ್ಲು ಇಲ್ಲದ ಹಾವಿನಂತಾಗಿದೆ. ಭೂಸ್ವಾಧೀನದಲ್ಲಿ ಪಾಲನೆಯಾಗಬೇಕಿದ್ದ ಸಾಮಾಜಿಕ ಉದ್ದೇಶವನ್ನೇಹಾಳುಗೇಡವಲಾಗಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಯೋಜನೆಗಳು ಸರ್ಕಾರದಿಂದ ಖಾಸಗಿಯವರಿಗೆ ಮಾಡುವ ಅನುಕೂಲಕರ ಯೋಜನೆಯಾಗಿದೆ. ಕಾನೂನಗಳನ್ನೇ ಅಸಹಾಯಕತೆಯ ಸ್ಥಿತಿ ತಂದು ನಿಲ್ಲಿಸಿ, ರೈತರಿಗೆನೆರವು ಸಿಗದಂತೆ ಮಾಡಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್‌ ಕಮ್ಮರಡಿ,ಕೃತಿಯ ಲೇಖಕಿ ಗಾಯಿತ್ರಿ, ಚಿಂತಕರಾದಯತಿರಾಜ್‌, ಸಂತೋಷ್‌ ಕೌಜಲಗಿ, ಜಲ ತಜ್ಞರವಿಕುಮಾರ್‌, ರೈತ ಮುಖಂಡ ಹೊಸಕೋಟೆಬಸವರಾಜು, ಕಾರ್ಯಕ್ರಮದ ಸಂಯೋಜಕ ಟಿ.ಜಿ.ಎಸ್‌.ಅವಿನಾಶ್‌ ಇನ್ನಿತರರು ಇದ್ದರು.

ಹೆದ್ದಾರಿಗಳು ಅಸಮಾನತೆ ಸೃಷ್ಟಿಸುವ ರಹದಾರಿ :

ಕೃಷಿ ಭೂಮಿ ಸ್ವಾಧೀನ ಪಡೆಸಿಕೊಂಡು ನಿರ್ಮಾಣವಾಗುವ ರಾಷ್ಟ್ರೀಯ ಹೆದ್ದಾರಿಗಳುಅಸಮಾನತೆ ಸೃಷ್ಟಿಸುವ ರಹದಾರಿ ಆಗಿದೆ. ಸಾಮಾಜಿಕ ತಾರತಮ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದೆ. ಬಂಡವಾಳದಾರರಿಗೆ ಕೈಗಾರಿಕೆ ಸ್ಥಾಪಿಸಲು ಭೂಮಿ, ನೀರು, ತೆರಿಗೆಯಲ್ಲಿ ರಿಯಾಯಿತಿಯಷ್ಟೇ ನೀಡುತ್ತಿಲ್ಲ. ಅವರಿಗೆ ಮೂಲ ಸೌಕರ್ಯ ಕಲ್ಪಿಸಲು ಸಹ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ.

ಅವರಿಗಾಗಿ ರಸ್ತೆ, ವಿಮಾನನಿಲ್ದಾಣ ನಿರ್ಮಿಸುವುದೇ ಅಭಿವೃದ್ಧಿಯಾಗಿದೆ ಎಂದು ಬಡಗಲಪುರ ನಾಗೇಂದ್ರ ಹೇಳಿ ದರು. ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದಿರುವುದು ಅಪಾಯಕಾರಿಯಾಗಿದೆ. ಆಹಾರ ಭದ್ರತೆ ಧಕ್ಕೆಯಾಗಲಿದೆ. ಇದೊಂದು ಭೂ ಕಬಳಿಕೆ ಕಾಯ್ದೆಯಾಗಿ ಪರಿವರ್ತನೆಯಾಗಿದೆ. ಸ್ವಾಧೀನದಿಂದ ಉಂಟಾಗುವ ಪರಿಸರ, ಸಾಮಾಜಿಕ ಪರಿಣಾಮಗಳು, ಭೂಮಿಕಳೆದುಕೊಂಡವರಿಗೆ ಪುನರ್‌ ವಸತಿ ಅಂಶಗಳೆಲ್ಲ ಕೈಬಿಡಲಾಗಿದೆ. ನರಭಕ್ಷಕ ವ್ಯವಸ್ಥೆ ರೂಪಗೊಳ್ಳುತ್ತಿದೆ. ಇದಕ್ಕೆ ಎಲ್ಲ ಪಕ್ಷದವರು ಬೆಂಬಲವಾಗಿ ನಿಂತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.