ಕೈನಿಂದ ಐದು ಸ್ಥಾನ ಗೆಲ್ಲಲು ಕಾರ್ಯತಂತ್ರ


Team Udayavani, Feb 6, 2023, 2:52 PM IST

tdy-15

ಮಳವಳ್ಳಿ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದು ಸ್ಥಾನಗಳನ್ನು ಗೆಲ್ಲುವ ಕಾರ್ಯತಂತ್ರ ರೂಪಿಸಿದ್ದು, ಆ ನಿಟ್ಟಿನಲ್ಲಿ ಪಕ್ಷದ ಸಂಘಟನೆಯತ್ತ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ಹೇಳಿದರು.

ಫೆ.11ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಾಲೂಕು ಪ್ರವಾಸ ಹಿನ್ನೆಲೆಯಲ್ಲಿ ಪಟ್ಟಣದ ಟಿಎಪಿಸಿಎಂಎಸ್‌ ರೈತ ಸಮುದಾಯದ ಭವನದಲ್ಲಿ ಭಾನುವಾರ ನಡೆದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಏಳು ಸ್ಥಾನಗಳನ್ನು ಸೋತಿದ್ದವು. ಇತ್ತೀಚಿಗೆ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಗೆಲ್ಲುವ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್‌ ಶಕ್ತಿ ಏನೆಂದು ತೋರಿಸಿದ್ದೇವೆ. ಈ ಬಾರಿ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಪಕ್ಷದ ನಾಯಕ ಸಿದ್ದರಾಮಯ್ಯ ಜೋಡೆತ್ತನಂತೆ ಪಕ್ಷ ಸಂಘಟನೆಗೆ ಮುಂದಾಗಿದ್ದು, ಈ ಬಾರಿ ನಾವು ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿದಂಲೂ ಸಾಧ್ಯವಿಲ್ಲ ಎಂದು ತಿಳಿಸಿದರು.

ಅದ್ದೂರಿ ಕಾರ್ಯಕ್ರಮ ಆಯೋಜನೆ: ಜಿಲ್ಲೆಯ ಎಲ್ಲಾ ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲ್ಲಿಸುವ ನಿಟ್ಟಿನಲ್ಲಿ ಎಲ್ಲರೂ ದುಡಿಯಬೇಕು. ಜಿಲ್ಲೆಯ ಚುನಾವಣಾ ಪ್ರವಾಸದ ಮೊದಲ ಭಾಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಮಳವಳ್ಳಿಯಿಂದಲೇ ಪ್ರಜಾಧ್ವನಿ ಯಾತ್ರೆ ಆರಂ ಭಿಸಿದ್ದು, ಇಲ್ಲಿದಂಲೇ ಗೆಲುವಿನ ಪ್ರಾರಂಭವನ್ನು ಕಾಣಲು ಮುಂದಾಗಬೇಕು, ಚುನಾವಣೆಯ ದೃಷ್ಟಿಯಿಂದ ತಾಲೂಕಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಮೊದಲ ಪ್ರವಾಸವಾಗಿರುವುದರಿಂದ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲು ನಿಮ್ಮದೇ ಆದ ಜವಾಬ್ದಾರಿಗಳನ್ನು ತೆಗೆದುಕೊಳ್ಳಬೇಕು. ಪ್ರಮುಖವಾಗಿ ಹಲಗೂರು, ಕಸಬಾ ಹೋಬಳಿಯ ಮುಖಂಡರು ಹೆಚ್ಚಿನ ಜವಾಬ್ದಾರಿಯೊಂದಿಗೆ ನೋಡಿಕೊಳ್ಳಬೇಕು. ಫೆ.11ರ ಮಧ್ಯಾಹ್ನ 2ಕ್ಕೆ ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಬೈಕ್‌ ರ್ಯಾಲಿ ಮೂಲಕ ಸ್ವಾಗತ: ತಾಪಂ ಮಾಜಿ ಅಧ್ಯಕ್ಷ ವಿ.ಪಿ.ನಾಗೇಶ್‌ ಮಾತನಾಡಿ, ಚುನಾವ ಣೆಯ ಸಂಘಟನೆಗೆ ಶಕ್ತಿ ತುಂಬುವ ಉದ್ದೇಶದಿಂದ ಆಗಮಿಸುತ್ತಿರುವ ಡಿ.ಕೆ.ಶಿವಕುಮಾರ್‌ ಅವರನ್ನು ಬೃಹತ್‌ ಬೈಕ್‌ ರ್ಯಾಲಿ ಮೂಲಕ ಸ್ವಾಗತಿಸಲಾಗುವುದು. ಹಲಗೂರಿನಿಂದ ಹಾಡ್ಲಿ ನಂತರ ಪಟ್ಟಣದ ಬಂದು ಬೃಹತ್‌ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಟಿಎಪಿಸಿಎಂಎಸ್‌ ಸದಸ್ಯ ಎಚ್‌.ಬಿ.ಬಸವೇಶ್‌ ಮಾತನಾಡಿ, ಭಾರತ್‌ ಜೋಡೋ ಪಾದಯಾ ತ್ರೆಯ ಯಶಸ್ವಿನಂತೆ ಪ್ರಜಾಧ್ವನಿ ಯಾತ್ರೆಗೂ ಗ್ರಾಪಂ ಮುಖಂಡರು ಜವಾಬ್ದಾರಿ ತೆಗೆದು ಕೊಂಡು ಕೆಲಸ ಮಾಡಬೇಕು ಎಂದು ತಿಳಿಸಿದರು.

ಕ್ಷೇತ್ರದ ಉಸ್ತುವಾರಿಗಳಾದ ಅಜ್ಜಹಳ್ಳಿ ರಾಮಕೃಷ್ಣ, ಪುಟ್ಟರಾಮು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಜೆ.ದೇವರಾಜು, ಎಸ್‌.ಪಿ.ಸುಂದರ್‌ ರಾಜ್‌, ಕಾರ್ಯಾಧ್ಯಕ್ಷ ಎಂ.ಬಿ.ಮಲ್ಲಯ್ಯ, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಟಿಎಪಿಸಿಎಂಎಸ್‌ ಅಧ್ಯಕ್ಷ ಕೆ.ಎಸ್‌.ದ್ಯಾಪೇಗೌಡ, ಸದಸ್ಯರಾದ ಎಂ.ಲಿಂಗರಾಜು, ಪ್ರಕಾಶ್‌, ತಾಪಂ ಮಾಜಿ ಅಧ್ಯಕ್ಷ ಆರ್‌.ಎನ್‌.ವಿಶ್ವಾಸ್‌, ಕುಂದೂರು ಪ್ರಕಾಶ್‌, ಸುಂದರೇಶ್‌, ಮಾಜಿ ಉಪಾಧ್ಯಕ್ಷ ಸಿ.ಮಾಧು, ಎಪಿಎಂಸಿ ಮಾಜಿ ಅಧ್ಯಕ್ಷ ಮುಟ್ಟನಹಳ್ಳಿ ಅಂಬರೀಶ್‌, ಮುಖಂಡರಾದ ಕುಳ್ಳಚನ್ನಂಕಯ್ಯ, ಪೆಟ್ರೋಲ್‌ ಬಂಕ್‌ ಮಹದೇವು, ದಿಲೀಪ್‌ ಕುಮಾರ್‌ ಇದ್ದರು.

ಟಾಪ್ ನ್ಯೂಸ್

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.