ಮಹಿಳಾ ಮತದಾರರ ಮೇಲೆ ಬಿಜೆಪಿ ಕಣ್ಣು!
"ಕಮಲ ದೂತ' ಅಭಿಯಾನಕ್ಕೆ ಮುಂದಾದ ಪಕ್ಷ ; ಕರ್ನಾಟಕ ಸೇರಿ 9 ಚುನಾವಣೆಗಳೇ ಗುರಿ
Team Udayavani, Feb 8, 2023, 7:30 AM IST
ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಮತ್ತು ದೇಶದ ಬೇರೆ ಬೇರೆ ಕಡೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳೂ ಮಹಿಳಾ ಮತದಾರರ ಓಲೈಕೆಗೆ ಮುಂದಾಗಿವೆ.
ಬಿಜೆಪಿ ಮಹಿಳಾ ಮೋರ್ಚಾ, ಪ್ರಸಕ್ತ ವರ್ಷದ ಕರ್ನಾಟಕ ಸಹಿತ 9 ವಿಧಾನಸಭೆ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಹಿಳಾ ಮತದಾರರನ್ನು ಸೆಳೆಯುವ ದೃಷ್ಟಿಯಿಂದ “ಕಮಲದೂತ’ ಅಭಿಯಾನ ನಡೆಸಲು ಮುಂದಾಗಿದೆ.
ಅದರಲ್ಲೂ ಬುಡಕಟ್ಟು ವರ್ಗದ ಮತ್ತು ಹಿಂದುಳಿದ ವರ್ಗಗಳ ಮಹಿಳೆಯರನ್ನೇ ಗುರಿಯಾಗಿಟ್ಟುಕೊಂಡು ಈ ಅಭಿಯಾನ ನಡೆಸಲಾಗುತ್ತಿದೆ. ಇದರಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳೆಯರನ್ನು ರಾಯಭಾರಿಗಳನ್ನಾಗಿ ಮಾಡಲಾಗುತ್ತದೆ. ಈ ಮೂಲಕ ಕೇಂದ್ರ ಮತ್ತು ಬಿಜೆಪಿ ಸರಕಾರಗಳ ಸಾಧನೆಗಳನ್ನು ಪ್ರಚುರ ಪಡಿಸಲು ಮುಂದಾಗಿದೆ. ಇವರಿಗೆ ತರಬೇತಿಯನ್ನೂ ನೀಡಲಾಗುತ್ತದೆ. ರಾಜ್ಯಾವಾರು ಅಭಿಯಾನ
ಈಗಾಗಲೇ ಈಶಾನ್ಯ ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗಿದ್ದು, ತಯಾರಿಯೂ ನಡೆಯುತ್ತಿದೆ. ಇದಕ್ಕೆ ಪೂರಕವಾಗಿ ಅಲ್ಲಿ ಮಹಿಳಾ ಮೋರ್ಚಾ ಕಡೆಯಿಂದ ಇಂಥದ್ದೇ ಅಭಿಯಾನ ನಡೆಸಲಾಗುತ್ತಿದೆ. ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ಗಳಲ್ಲಿ ಬುಡಕಟ್ಟು ಜನಾಂಗದವರೇ ಹೆಚ್ಚಾಗಿದ್ದು, ಇವರಿಗೆ ಸರಕಾರಿ ಯೋಜನೆಗಳ ಬಗೆಗೆ ಈ ಅಭಿಯಾನದ ಮೂಲಕ ತಿಳಿಸಿಕೊಡಲಾಗುತ್ತದೆ ಎಂದು ಮಹಿಳಾ ಮೋರ್ಚಾ ವಕ್ತಾರರು ಮತ್ತು ಮೇಘಾಲಯ ರಾಜ್ಯದ ಚುನಾವಣ ಸಹ ಉಸ್ತುವಾರಿ ನೀತು ದಬಾಸ್ ಹೇಳಿದ್ದಾರೆ. ಜತೆಗೆ ನಮ್ಮ ದೇಶದ ರಾಷ್ಟ್ರಪತಿ ಸಂಥಲ್ ಸಮುದಾಯಕ್ಕೆ ಸೇರಿದವರು ಎಂಬುದನ್ನೂ ನಾವು ಅರಿಯಬೇಕಿದೆ ಎಂದಿದ್ದಾರೆ.
ಹೀಗಾಗಿಯೇ ಬುಡಕಟ್ಟು ವರ್ಗದ ಮಹಿಳೆಯರನ್ನು ಗುರಿಯಾಗಿಸಿಕೊಂಡು, ಅವರನ್ನೂ ತಲುಪಲು ಬಿಜೆಪಿ ಮಹಿಳಾ ಮೋರ್ಚಾ ಮುಂದಾಗಿದೆ. ಬುಡಕಟ್ಟು ಜನಾಂಗದ ಕೆಲವು ಮಹಿಳೆಯರನ್ನು ಆರಿಸಿಕೊಂಡು ಇವರನ್ನು ಕಮಲ ದೂತರನ್ನಾಗಿ ಮಾಡಲಾಗುತ್ತದೆ. ಇವರ ಮೂಲಕವೇ ಸರಕಾರಿ ಕಾರ್ಯಕ್ರಮಗಳ ಪ್ರಚಾರ ನಡೆಸಲಾಗುತ್ತದೆ.
ಈ ತಿಂಗಳೇ ತರಬೇತಿ|
ಬಿಜೆಪಿ ಮಹಿಳಾ ಮೋರ್ಚಾ ಈ ತಿಂಗಳು ದೇಶಾದ್ಯಂತ ಮಹಿಳಾ ಕೇಡರ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಮೂಲಕ ಇವರಿಗೆಲ್ಲಾ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಇದಕ್ಕೆ ಕಾರಣವೂ ಇದೆ ಎಂದಿರುವ ಮಹಿಳಾ ಮೋರ್ಚಾ ಅಧ್ಯಕ್ಷೆ ವಾನತಿ ಶ್ರೀನಿವಾಸನ್, ನಮ್ಮ ಕಾರ್ಯಕರ್ತರಿಗೇ ಯೋಜನೆಗಳ ಬಗ್ಗೆ ಅರಿವು ಇರುವುದಿಲ್ಲ. ಹೀಗಾಗಿ ಅವರಿಗೆ ಮಾಹಿತಿ ನೀಡಬೇಕಾಗುತ್ತದೆ. ಆಗ ಈ ಕಾರ್ಯಕರ್ತರು ಜನಸಾಮಾನ್ಯರಿಗೆ ನಮ್ಮ ಯೋಜನೆಗಳ ಬಗ್ಗೆ ಚೆನ್ನಾಗಿ ತಿಳಿವಳಿಕೆ ನೀಡುತ್ತಾರೆ ಎಂದಿದ್ದಾರೆ. ನಮ್ಮ ತರಬೇತಿ ಕಾರ್ಯಕ್ರಮಗಳಿಂದಾಗಿ ಕಾರ್ಯಕರ್ತರಿಗೂ ಲಾಭವಿದೆ. ನಾವು ಹೆಚ್ಚೆಚ್ಚು ಮಂದಿಯನ್ನು ತಲುಪಬಹುದು ಎಂದು ವಾನತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WMO: 2025ರಲ್ಲೂ ದಾಖಲೆಯ ತಾಪಮಾನ: 10 ವರ್ಷಗಳಿಂದ ಹೆಚ್ಚುತ್ತಿದೆ ಬಿಸಿಯ ಮಾಪಕ
Wayanad ಭೂಕುಸಿತ ಭಾರೀ ಪ್ರಾಕೃತಿಕ ವಿಕೋಪ: 5 ತಿಂಗಳ ಬಳಿಕ ಕೇಂದ್ರ ಘೋಷಣೆ
Telgi stamp paper scam: ಕರ್ನಾಟಕದ ಓರ್ವ ಸೇರಿ 5 ಮಂದಿಗೆ ಸಜೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.