ಚುನಾವಣೆ ಸಂದರ್ಭದಲ್ಲಿ ಸಮಾಜ ವಿಭಜಿಸುವ ಜೆಡಿಎಸ್, ಕಾಂಗ್ರೆಸ್: ಸಚಿವ ಸುನಿಲ್ ಕುಮಾರ್ ಆರೋಪ

Team Udayavani, Feb 8, 2023, 1:13 PM IST

ಚುನಾವಣೆ ಸಂದರ್ಭದಲ್ಲಿ ಸಮಾಜ ವಿಭಜಿಸುವ ಜೆಡಿಎಸ್, ಕಾಂಗ್ರೆಸ್: ಸಚಿವ ಸುನಿಲ್ ಕುಮಾರ್ ಆರೋಪ

ಉಡುಪಿ:  ಕಾಂಗ್ರೆಸ್ ಮತ್ತು ಜೆಡಿಎಸ್ ಸಮಾಜದ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಯಾವುದೇ ಚುನಾವಣೆ ಮಾಡಿಲ್ಲ. ಜಾತಿಯ ಆಧಾರದಲ್ಲಿ ಎಲ್ಲ ಚುನಾವಣೆಯಲ್ಲೂ ಸಮಾಜವನ್ನು ವಿಭಜಿಸುವ ಕಾರ್ಯವನ್ನು ಹಿಂದಿನಿಂದಲೂ ಮಾಡುತ್ತಾ ಬಂದಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಆರೋಪಿಸಿದರು.

ಬುಧವಾರ ಉಡುಪಿ‌ ಎಂಜಿಎಂ ಕಾಲೇಜಿನ ಮೈದಾನದಲ್ಲಿ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರಕಾರ ಬರಲಿದೆ ಎಂಬುದನ್ನು ಎಚ್.ಡಿ.ಕುಮಾರಸ್ವಾಮಿಯವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಬಿಜೆಪಿ ಸರಕಾರ ಬಂದ ಅನಂತರದಲ್ಲಿ ಸಿಎಂ ಯಾರು ಆಗಬೇಕು ಎನ್ನುವುದನ್ನು ಪಕ್ಷ ತೀರ್ಮಾನಿಸಲಿದೆ. ಬ್ರಾಹ್ಮಣರು ಅಥವಾ ಯಾವುದೇ ಜಾತಿಯ ಹೆಸರಿನಲ್ಲಿ ಕೀಳಾಗಿ ಮಾತಾಡುವುದು ಅವರಿಗೆ ಶೋಭೆತರುವುದಲ್ಲ. ಅರ್ಹತೆ ಇದ್ದವರು ಮುಖ್ಯಮಂತ್ರಿ ಆಗುತ್ತಾರೆ. ಜಾತಿ, ಕುಟುಂಬ ಆಧಾರದಲ್ಲಿ ಸಿಎಂ ಆಗುವುದು ಜೆಡಿಎಸ್ ನಲ್ಲಿ ಮಾತ್ರ. ನಮ್ಮ ಪಕ್ಷದಲ್ಲಿ ಜಾತಿ, ಕುಟುಂಬದ ಆಧಾರವಲ್ಲ, ಪಕ್ಷನಿಷ್ಠೆ ಮತ್ತು ಅನುಭವ ಇದ್ದವರು ಸಿಎಂ ಆಗುತ್ತಾರೆ. ಯಾರದೋ ಮಗ, ಜಾತಿ ಎನ್ನುವುದರ ಕಾರಣಕ್ಕೆ ನಮ್ಮ ಪಕ್ಷದಲ್ಲಿ ಸಿಎಂ ಆಗುವುದೇ ಇಲ್ಲ ಎಂದರು.

ಉತ್ಸಾಹ ಹೆಚ್ಚಿದೆ:

ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಈಗಾಗಲೇ ಪುತ್ತೂರಿಗೆ ಹೋಗಿ ಸಮಾವೇಶ ನಡೆಯುವ  ಸ್ಥಳ  ಪರಿಶೀಲಿಸಲಾಗಿದೆ. ಕ್ಯಾಪ್ಕೋ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿಅಡಿಕೆ ಬೆಳೆಗಾರರ ಹಾಗೂ ಸಹಕಾರಿಗಳ ದೊಡ್ಡ ಸಮ್ಮೇಳನ ನಡೆಯುತ್ತಿದೆ. ಅಮಿತ್ ಶಾ ಬರುತ್ತಿರುವುದರಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ. ನಾಲ್ಕು ವಿಧಾನಸಭೆ ಕ್ಷೇತ್ರ ಹಾಗೂ ಇಡೀ ಜಿಲ್ಲೆಗೆ ದೊಡ್ಡ ಸಮಾವೇಶ. ಲಕ್ಷಕ್ಕೂ ಅಧಿಕ ಜನರು ಸೇರಲಿದ್ದಾರೆ. ಅಮಿತ್ ಶಾ ಬರುತ್ತಿರುವುದರಿಂದ ತಾನಾಗೀಯ ಚುನಾವಣೆ ರಂಗೇರಲಿದೆ. ಈ ಎರಡು‌ ಜಿಲ್ಲೆಯಲ್ಲಿ ಎಲ್ಲ ಕ್ಷೇತ್ರ ಗೆಲ್ಲಲು ತಯಾರಿ ಮಾಡುತ್ತಿದ್ದೇವೆ.

ಪದ್ಧತಿಯಂತೆ ನಡೆಯುತ್ತಿದೆ:

ಎಸ್ಕಾಂಗಳು ಪ್ರತಿ ವರ್ಷ ಮುಂದಿನ ಯೋಜನೆ ಹಾಗೂ ಬಜೆಟ್ ಆಧಾರದಲ್ಲಿ ವಿದ್ಯುತ್ ದರದ ನಿಗದಿ ಹೀಗೆ ಮಾಡಬೇಕು ಎಂಬುದರ ಅಭಿಪ್ರಾಯವನ್ನು ಕೆಆರ್ಸಿ ಮುಂದೆ ಇಡಲಿದೆ. ಕೆಆರ್ಸಿ ಅದಲತ್ ಮೂಲಕ ಸಾರ್ವಜನಿಕರ ಮುಂದಿಟ್ಟು, ಅವರ ಅಭಿಪ್ರಾಯ ಪಡೆಯಲಿದೆ. ಎಸ್ಕಾಂ ಮತ್ತು ಸಾರ್ವಜನಿಕರ ಅಭಿಪ್ರಾಯ ಕ್ರೋಢೀಕರಿಸಿ ಅನಂತರ ಕೆಆರ್ ಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಪ್ರತ್ಯೇಕ  ರಾಜ್ಯ ಕೇಳಿಲ್ಲ:

ರಾಜ್ಯದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ. ಕನ್ನಡ ಬಿಟ್ಟು ಬೇರ್ಯಾವುದೇ ಯೋಚನೆ ಮಾಡಲು ಸಾಧ್ಯವೇ ಇಲ್ಲ. ಕನ್ನಡದ ಎಲ್ಲ ಚಟುವಟಿಕೆ ಹಾಗೂ ಕನ್ನಡಿಗರ ಜತೆಗೆ ತುಳುನಾಡು ಅವಿನಾಭಾವ ಸಂಬಂಧ ಹೊಂದಿದೆ. ನಾವೇನು ಪ್ರತ್ಯೇಕ ತುಳುನಾಡು ಕೇಳುತ್ತಿಲ್ಲ ಮತ್ತು ಕೇಳಿಯೂ ಇಲ್ಲ.  ತುಳು ಬಾಷೆಗೆ ಎರಡನೇ ಆದ್ಯತೆ ನೀಡುವಂತೆ ಕೇಳಿದ್ದೇವೆ. ಕನ್ನಡಕ್ಕೆ ಮೊದಲ ಆದ್ಯತೆ ಮತ್ತು ಪರಮೋಚ್ಛ ಸ್ಥಾನಮಾನ. ತುಳು ಕನ್ನಡದ್ದೇ ಇನ್ನೊಂದು ಭಾಗವಾಗಿರುವುದರಿಂದ ಎರಡನೇ ಆದ್ಯತೆ ಕೇಳಿದ್ದೇವೆ. ಬೇರೆ ರಾಜ್ಯಗಳಲ್ಲಿ ಮೊದಲ ಆದ್ಯತೆ ಭಾಷೆಯ ಜತೆಗೆ ಬೇರೆ ಬೇರೆ ಭಾಷೆಗೂ ಆದ್ಯತೆ ನೀಡಿದ್ದಾರೆ. ಹೀಗಾಗಿ ಇಲ್ಲಿಯೂ ತುಳು ಭಾಷೆಗೆ ಎರಡನೇ ಆದ್ಯತೆ ನೀಡುವಂತೆ ಅನೇಕರು ಮನವಿ ಸಲ್ಲಿಸಿದ್ದಾರೆ. ಇದರ ಸಾಧಕ-ಬಾಧಕ ಚರ್ಚೆಗೆ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ಆಧಾರದಲ್ಲಿ ಸರಕಾರ ಮುಂದೆ ಕ್ರಮ ತೆಗೆದುಕೊಳ್ಳಲಿದೆ ಎಂದರು.

ಟಾಪ್ ನ್ಯೂಸ್

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.