ಅಧಿವೇಶನದಲ್ಲಿ ನಾಡಿನ ಸಮಸ್ಯೆಗಳ ಚರ್ಚೆಯಾಗಲಿ

Team Udayavani, Feb 10, 2023, 6:00 AM IST

ಅಧಿವೇಶನದಲ್ಲಿ ನಾಡಿನ ಸಮಸ್ಯೆಗಳ ಚರ್ಚೆಯಾಗಲಿ

ರಾಜ್ಯದ 15ನೇ ವಿಧಾನಸಭೆಯ ಕೊನೆಯ ಅಧಿವೇಶನ ಶುಕ್ರವಾರ ಆರಂಭಗೊಳ್ಳಲಿದೆ. ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋತ್‌ ಅವರು ವಿಧಾನ ಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುವ ಮೂಲಕ ಬಜೆಟ್‌ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ. ತಮ್ಮ ಭಾಷಣದಲ್ಲಿ ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ರಾಜ್ಯಪಾಲರು ಪಟ್ಟಿ ಮಾಡಲಿದ್ದಾರೆ. ಹಾಗೆಯೇ ರಾಜ್ಯ ವಿಧಾನಸಭೆ ಚುನಾವಣೆ ಸನಿಹದಲ್ಲಿಯೇ ಇರುವುದರಿಂದ ಈ ಬಾರಿಯ ಅಧಿವೇಶನ ಆಡಳಿತ ಮತ್ತು ವಿಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು ಅಧಿವೇಶನದ ಫ‌ಲಶ್ರುತಿಯ ಬಗೆಗೆ ರಾಜ್ಯದ ಜನತೆ ಹೆಚ್ಚಿನದೇನನ್ನೂ ನಿರೀಕ್ಷಿಸುವುದು ಕಷ್ಟಸಾಧ್ಯ. ಇತ್ತಂಡ ಗಳಿಂದಲೂ ಪರಸ್ಪರ ಆರೋಪ-ಪ್ರತ್ಯಾರೋಪಗಳ ವಿನಿಮಯ, ಆಡಳಿತ ಪಕ್ಷದ ಶಾಸಕರಿಂದ ಸರಕಾರದ ಸಮರ್ಥನೆ, ವಿಪಕ್ಷಗಳಿಂದ ಸರಕಾರದ ವೈಫ‌ಲ್ಯ, ಹಗರಣಗಳ ಬಗೆಗೆ ವಾಗ್ಧಾಳಿಯ ಹೊರತಾಗಿ ಸುಗಮ ಮತ್ತು ಸುಲಲಿತ ಕಲಾಪ ನಡೆದೀತು ಎಂದು ಊಹಿಸುವುದು ಭ್ರಮೆಯಾದೀತು.

ಹಾಲಿ ಸರಕಾರದ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳುವುದರಿಂದ ಹಾಲಿ ಸರಕಾರ ಮಂಡಿಸುವ ಬಜೆಟ್‌ ಹೆಚ್ಚು ಕಡಿಮೆ ಲೇಖಾನುದಾನದಂತೆ ಇರಲಿದೆ. ಆದರೂ  ಈ ಹಿಂದಿನ ಎಲ್ಲ ಸರಕಾರಗಳಂತೆ ಹಾಲಿ ಬಿಜೆಪಿ ಸರಕಾರವೂ ಪೂರ್ಣ ಪ್ರಮಾಣದ ಬಜೆಟ್‌ನ್ನು ಮಂಡಿಸುವ ಮೂಲಕ ರಾಜ್ಯದ ಜನರನ್ನು ಓಲೈಸುವ ಸಾಧ್ಯತೆ  ನಿಚ್ಚಳವಾಗಿದೆ. ಇದೇ ವೇಳೆ ವಿಪಕ್ಷಗಳು ಸರಕಾರದ ವಿರುದ್ಧ ಮುಗಿ ಬೀಳಲು ಸಜ್ಜಾಗಿದ್ದು ಅಧಿವೇಶನದ ಅವಧಿಯಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಶತಪ್ರಯತ್ನ ನಡೆಸಲಿರುವುದಂತೂ ಖಚಿತ.

ಫೆ.17ರಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ 2023- 24ನೇ ಸಾಲಿನ ಬಜೆಟ್‌ನ್ನು ಮಂಡಿಸಲಿದ್ದು ಇದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ಮಾಡಿ ಕೊಂಡಿದ್ದಾರೆ. ಚುನಾವಣ ವರ್ಷವಾದ್ದರಿಂದ ಈ ಬಾರಿಯ ಬಜೆಟ್‌ ಹಲವಾರು ಜನಪ್ರಿಯ ಘೋಷಣೆಗಳನ್ನು ಹೊಂದಿರುವ ಜತೆಯಲ್ಲಿ ಜನಕಲ್ಯಾಣ ಮತ್ತು ರಾಜ್ಯದ ಅಭಿವೃದ್ಧಿಯ ಬಗೆಗಿನ ತನ್ನ ದೃಷ್ಟಿಕೋನ ಮತ್ತು ನಿಲುವನ್ನು ಈ ಬಜೆಟ್‌ ಮೂಲಕ ರಾಜ್ಯದ ಜನರ ಮುಂದೆ ತೆರೆದಿಡುವ ಎಲ್ಲ ಸಾಧ್ಯತೆಗಳಿವೆ. ಹಾಲಿ ಸರಕಾರ ಮಂಡಿಸಲಿರುವ ಬಜೆಟ್‌ ಸರಕಾರದ ಎನ್ನುವುದಕ್ಕಿಂತಲೂ ಮುಖ್ಯವಾಗಿ ಬಿಜೆಪಿಯ ಮುನ್ನೋಟವಾಗಿರಲಿದೆ. ಏಕೆಂದರೆ ಚುನಾವಣೆ ನಡೆದು ಹೊಸ ಸರಕಾರ ರಚನೆಯಾದ ಬಳಿಕ ಮತ್ತೆ ಪೂರ್ಣ ಪ್ರಮಾಣದ ಬಜೆಟ್‌ ಮಂಡನೆ ಯಾಗಲಿದ್ದು ಅದುವೇ ಅಧಿಕೃತ ಬಜೆಟ್‌ ಆಗಿರಲಿದೆ. ಒಂದು ವೇಳೆ ಬಿಜೆಪಿಯೇ ಮರಳಿ ಅಧಿಕಾರಕ್ಕೆ ಬಂದರೂ ನೂತನ ಸರಕಾರ ಹೊಸದಾಗಿ ಬಜೆಟ್‌ ಮಂಡಿಸ ಲಿರುವುದರಿಂದ ಈ ಬಜೆಟ್‌ಗೆ ಅಷ್ಟೇನೂ ಮಹತ್ವವಿಲ್ಲ. ಆದರೆ ಚುನಾವಣ ಪೂರ್ವದಲ್ಲಿ ಹಾಲಿ ಸರಕಾರ ಮಂಡಿಸುವ ಬಜೆಟ್‌ ಬಗೆಗೆ ಸಹಜವಾಗಿಯೇ ಜನರಲ್ಲಿ ಒಂದಿಷ್ಟು ಕುತೂಹಲ ಮತ್ತು ನಿರೀಕ್ಷೆಗಳಿದ್ದೇ ಇರುತ್ತವೆ.

ಇತ್ತ ವಿಪಕ್ಷಗಳು ಬಿಜೆಪಿ ಸರಕಾರವನ್ನು ಹಣಿಯಲು ಈ ಅಧಿವೇಶನವನ್ನು ಬಳಸಿಕೊಳ್ಳಲು ಆತುರದಿಂದ ಕಾಯುತ್ತಿವೆ. ಚಳಿಗಾಲದ ಅಧಿವೇಶನದ ಬಳಿಕ ಹೊರಬಿದ್ದ ಸ್ಯಾಂಟ್ರೋ ರವಿ ಪ್ರಕರಣ ಸಹಿತ ರಾಜ್ಯ ಸರಕಾರದ ವಿರುದ್ಧದ ಹಲ ವಾರು ಭ್ರಷ್ಟಾಚಾರ ಆರೋಪಗಳು, ನೀರಾವರಿ ಯೋಜನೆಗಳ ಅನುಷ್ಠಾನ ಕುರಿತಂತೆ ಸರಕಾರ ನೀಡುತ್ತಿರುವ ವಿರೋಧಾಭಾಸದ ಹೇಳಿಕೆಗಳು, ಕಾನೂನು ಸುವ್ಯವಸ್ಥೆ, ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ನಿರ್ಲಕ್ಷ್ಯ ಮತ್ತಿತರ ವಿಚಾರಗಳನ್ನು ಸದನ ದಲ್ಲಿ ಪ್ರಸ್ತಾವಿಸುವ ಮೂಲಕ ಸರಕಾರದ ವಿರುದ್ಧ ಮುಗಿಬೀಳಲು ಸಜ್ಜಾಗಿವೆ.   ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವುದರಿಂದ ಈ ಬಾರಿಯ ಅಧಿವೇಶನದಲ್ಲಿ ಪೂರ್ಣಪ್ರಮಾಣದಲ್ಲಿ ಪಾಲ್ಗೊಳ್ಳುವ ಬಗೆಗೆ ಅನುಮಾನವಂತೂ ಇದ್ದೇ ಇದೆ.

ಇದು ವಿಧಾನಸಭೆಯ ಕೊನೆಯ ಅಧಿವೇಶನ ಆಗಿರುವುದರಿಂದ ಉಭಯ ಸದನಗಳಲ್ಲಿ ಜನರ ಸಮಸ್ಯೆ, ಬೇಡಿಕೆಗಳ ಬಗೆಗೆ ಹೆಚ್ಚಿನ ಚರ್ಚೆ ನಡೆಯಲಿ. ಹಾಗೆಯೇ, ಈ ಅಧಿವೇಶನ, ಆಡಳಿತ ಮತ್ತು ವಿಪಕ್ಷಗಳ ಮೇಲಾಟಕ್ಕೆ ವೇದಿಕೆಯಾಗದೇ ಜನಪರ ಚರ್ಚೆ ನಡೆಯಲಿ.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.