ಭ್ರಷ್ಟಾಚಾರ ಆರೋಪಕ್ಕೆ ಸೂಕ್ತ ದಾಖಲೆ, ನಿಖರ ಮಾಹಿತಿ ನೀಡಿ: ಎಡಿಜಿಪಿ 


Team Udayavani, Feb 10, 2023, 6:25 AM IST

tdy-47

ಮಂಗಳೂರು: ಪೊಲೀಸರ ಮೇಲೆ ಲೋಕಾಯುಕ್ತಕ್ಕೆ ದೂರು ನೀಡಿ ಭ್ರಷ್ಟಾಚಾರ ಆರೋಪ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಮತ್ತು ನಿಖರ, ಪ್ರಾಮಾಣಿಕ ಮಾಹಿತಿಯೊಂದಿಗೆ ದೂರು ನೀಡಿದಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಲೋಕ್‌ ಕುಮಾರ್‌ ಹೇಳಿದ್ದಾರೆ.

ಗುರುವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪೊಲೀಸರು ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸುವವರು ಎಲ್ಲಿ, ಯಾರಿಂದ ಹೇಗೆ ಹಣ ಪಡೆದಿದ್ದಾರೆ ಎಂದು ನಿರ್ದಿಷ್ಟ ಪ್ರಕರಣಗಳಿದ್ದರೆ ದಾಖಲೆ ಸಹಿತ ದೂರು ನೀಡಲಿ, ಪರಿಶೀಲಿಸಲಾಗುವುದು ಎಂದರು.

ಉಳ್ಳಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರಿನ ಪ್ರತಿ ನೋಡಿಲ್ಲ. ಲೋಕಾಯುಕ್ತ ಇಲಾಖೆ ಅದರ ತನಿಖೆ ನಡೆಸಿ ವರದಿ ನೀಡುವಂತೆ ಪೊಲೀಸ್‌ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುವಂತೆ ನೋಟಿಸ್‌ನಲ್ಲಿ ನನ್ನ ಹೆಸರನ್ನು ಉಲ್ಲೇಖೀಸಿದ್ದರೆ ನಾನು ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುತ್ತಿದ್ದೆ ಎಂದರು.

ಮೊಹಲ್ಲಾ, ಯೂತ್‌ ಕಮಿಟಿ  ಪರಿಣಾಮಕಾರಿ ಅನುಷ್ಠಾನ ಆಗಿಲ್ಲ:

ಮಂಗಳೂರು ನಗರ ಪೊಲೀಸ್‌ ವ್ಯಾಪ್ತಿಯಲ್ಲಿ ಸುರತ್ಕಲ್‌, ಬಂದರು, ಉಳ್ಳಾಲ, ಕಾವೂರು, ದ.ಕ. ಪೊಲೀಸ್‌ ವ್ಯಾಪ್ತಿಯಲ್ಲಿ ಬಂಟ್ವಾಳ, ಪುಂಜಾಲಕಟ್ಟೆ, ಪುತ್ತೂರು, ಬೆಳ್ತಂಗಡಿ ಕೋಮು ಸೂಕ್ಷ್ಮ ಠಾಣೆಗಳು. ಇಂಥ ಕಡೆಗಳಲ್ಲಿ ಮೊಹಲ್ಲಾ ಕಮಿಟಿ ಮತ್ತು ಯೂತ್‌ ಕಮಿಟಿ ಸಭೆಗಳನ್ನು ಕಾಲಕಾಲಕ್ಕೆ ಪರಿಣಾಮಕಾರಿಯಾಗಿ ಆಯೋಜಿಸಲು ಸೂಚಿಸಲಾಗಿತ್ತು. ಆದರೆ ಇದು ಜಿಲ್ಲೆಯಲ್ಲಿ ನಿರೀಕ್ಷಿಸಿದಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ ಅವರು, ಸಮಾಜದೊಂದಿಗೆ ಪೊಲೀಸರಿಗೆ ನೇರವಾದ ಸಂಪರ್ಕ ಇರಬೇಕು ಎನ್ನುವ ದೃಷ್ಟಿಯಿಂದ ಇದನ್ನು ಮಾಡಲಾಗಿದೆ ಎಂದರು.

10ಕ್ಕೂ ಅಧಿಕ ದೂರು:

ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯಿಂದ 10ಕ್ಕೂ ಅಧಿಕ ದೂರುಗಳನ್ನು ಜನರು ಹೇಳಿಕೊಂಡಿದ್ದಾರೆ. ಅವುಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಇಂಥ ಕುಂದು ಕೊರತೆ ಸಭೆಗಳನ್ನು ಇತರ ಜಿಲ್ಲೆಗಳಲ್ಲೂ ಆಯೋಜಿಸಲಾಗುವುದು ಎಂದರು.

ಇಂದು ಕಮಿಷನರೆಟ್‌ ವ್ಯಾಪ್ತಿ ಸಭೆ:

ಮಂಗಳೂರಿನ ಪಶ್ಚಿಮ ವಲಯ ಪೊಲೀಸ್‌ ಕಚೇರಿ ಯಲ್ಲಿ ಪಶ್ಚಿಮ ವಲಯ ಜಿಲ್ಲೆಗಳ ಪೊಲೀಸ್‌ ಪ್ರಗತಿ ಪರಿಶೀಲನೆ ಮತ್ತು ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಸಿದರು. ಹಿರಿಯ ಪೊಲೀಸ್‌ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಫೆ. 10ರಂದು ಬೆಳಗ್ಗೆ 11 ಗಂಟೆಗೆ ಕಮಿಷನರೆಟ್‌ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸುವುದಾಗಿ ಎಡಿಜಿಪಿ ತಿಳಿಸಿದ್ದಾರೆ.

ಪಶ್ಚಿಮ ವಲಯ ಐಜಿಪಿ ಡಾ| ಚಂದ್ರಗುಪ್ತ, ಎಸ್‌ಪಿ ವಿಕ್ರಮ್‌ ಅಮಟೆ ಇದ್ದರು.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.