![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 10, 2023, 11:18 PM IST
ಹುಬ್ಬಳ್ಳಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಮುಖ್ಯಮಂತ್ರಿ ಆಗಬಹುದು. ಬ್ರಾಹ್ಮಣ ಸಮಾಜದ ನಾಯಕ ಪ್ರಹ್ಲಾದ ಜೋಶಿ ಸಿಎಂ ಆಗುವುದರಲ್ಲಿ ತಪ್ಪಿಲ್ಲ. ಈ ರೀತಿಯ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಕುರಿತು ಪೇಶ್ವೆ ಸಂಸ್ಕೃತಿಯ ಡಿಎನ್‌ಎ ಮನೆತನದಿಂದ ಬಂದವರು ಎಂದು ಕುಮಾರಸ್ವಾಮಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ.
ಪ್ರಹ್ಲಾದ ಜೋಶಿ ಮುಖ್ಯಮಂತ್ರಿಯಾಗಲು ಯೋಗ್ಯ ನಾಯಕರಾಗಿದ್ದಾರೆ. ಬಿಜೆಪಿ ಹಿರಿಯ ನಾಯಕರಾದ ಅವರ ಬಗ್ಗೆ ಏಕವಚನದಲ್ಲಿ ಮಾತನಾಡುವುದು ಶೋಭೆ ತರುವುದಿಲ್ಲ. ಯಡಿಯೂರಪ್ಪ ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾದಾಗ ನಾನು ಮಂತ್ರಿಯಾಗಿದ್ದೆ. ಆ ಸಮಯದಲ್ಲಿ ಕುಮಾರಸ್ವಾಮಿ ಬಿಎಸ್‌ವೈ ಅವರನ್ನು ಯಾವ ರೀತಿ ನಡೆಸಿಕೊಂಡರು ಎಂಬುದು ಗೊತ್ತಿದೆ ಎಂದರು.
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮನವೊಲಿಸುವ ಕಾರ್ಯ ನಾವು ಮಾಡುತ್ತಿಲ್ಲ. ಈಗ ಚುನಾವಣೆ ಸಮೀಪಿಸಿದ್ದು, ನಮ್ಮ ಪಕ್ಷದ ಸಿದ್ಧಾಂತ ಪ್ರಕಾರ ಪ್ರಧಾನಿ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಮಾಡಿದ ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಜನರಲ್ಲಿ ಮತ ಕೇಳುವ ಕೆಲಸ ಮಾಡುತ್ತೇವೆ. ನಾನು ಬಳ್ಳಾರಿ ಜಿಲ್ಲೆಯಿಂದ ಸ್ಪರ್ಧೆ ಮಾಡುತ್ತೇನೆ ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.