ಕುರುಗೋಡು: ಬೇಡಿಕೆಗಳು ಈಡೇರಿಸುವುದಾಗಿ ಭರವಸೆಯಲ್ಲೇ ಕೈ ತೊಳೆದುಕೊಂಡ ಸಚಿವರು, ಶಾಸಕರು.!

ಸಚಿವ ಶ್ರೀರಾಮುಲು, ಶಾಸಕ ತುಕಾರಾಂ, ಸಂಸದ ದೇವೇಂದ್ರಪ್ಪ ವಿರುದ್ದ ಕಿಡಿಕಾರಿದ ಪ್ರತಿಭಟನೆಗಾರರು

Team Udayavani, Feb 11, 2023, 1:21 PM IST

4–kurugodu

ಕುರುಗೋಡು: ಸಮೀಪದ ಕುಡುತಿನಿಯಲ್ಲಿ ಭೂಮಿ ಕಳೆದುಕೊಂಡ ರೈತರು ನ್ಯಾಯಕ್ಕಾಗಿ ಕಾರ್ಖಾನೆಗಳ ವಿರುದ್ಧ ನಡೆಸುತ್ತಿರುವ ಮುಷ್ಕರ 56ನೇ ದಿನಕ್ಕೆ ಕಾಲಿಟ್ಟಿದೆ.

ಆದರೂ ಅಧಿಕಾರಿಗಳು ಮತ್ತು ಜನಪ್ರತಿನಿದಿಗಳು ಬಂದು ಬರೀ ಸುಳ್ಳು ಭರವಸೆ ನೀಡುತ್ತಿದ್ದಾರೆಯೆ ಹೊರತು ಸಮಸ್ಯೆ ಆಲಿಸಲು ಮುಂದಾಗುತ್ತಿಲ್ಲ ಎಂದು ಪ್ರತಿಭಟನೆಯಲ್ಲಿ ನಿರತರಾಗಿರುವ ಸಂತ್ರಸ್ತರು ಆಕ್ರೋಶ ಹೊರಹಾಕಿದರು.

56ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆಯ ಕಾವು ಜೋರಾಗಿ ಮುಂದುವರಿದಿದೆ.

ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಶಾಸಕ ತುಕಾರಾಂ ಅವರು ಚುನಾವಣೆ ಹತ್ತಿರ ಬಂದಿರುವುದರಿಂದ ಹೋರಾಟಗಾರರಿಗೆ ಮತ್ತು ಭೂಮಿ ಕಳೆದುಕೊಂಡ ರೈತರಿಗೆ ಇದನ್ನು ಸರಕಾರದ ಗಮನಕ್ಕೆ ತಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಶ್ರೀರಾಮುಲು ಕೇವಲ ಸುಳ್ಳು ಭರವಸೆ ನೀಡಿ ಕೈ ತೊಳೆದುಕೊಂಡಿದ್ದಾರೆ.

ಅದರಂತೆ ಶಾಸಕ ತುಕಾರಾಂ ಕೂಡ ಸರಕಾರದ ಒತ್ತಡಕ್ಕೆ, ಪ್ರತಿಭಟನಾಕಾರರಲ್ಲಿ, ನಿಮ್ಮ ಜೊತೆಗೆ ಹೋರಾಟ ಮಾಡಿ ಸಮಸ್ಯೆ ಇತ್ಯಾರ್ಥಗೊಳಿಸಿ ಮೊದಲು ನಾನೆ ನಿಮ್ಮ ಜಮೀನುಗಳಲ್ಲಿ ಕುಂಟೆ ಹೊಡೆಯುತ್ತೇನೆ ಎಂದು ಭರವಸೆ ನೀಡಿದವರು ಇನ್ನೂ ಇದುವರೆಗೂ ಇತ್ತ ಕಡೆ ತಲೆ ಹಾಕಿಲ್ಲ ಎಂದು ಸಾರಿಗೆ ಸಚಿವರ ಮತ್ತು ಶಾಸಕ ತುಕಾರಾಂ ಹಾಗೂ ಸರಕಾರದ ವಿರುದ್ದ ಘೋಷಣೆ ಕೂಗಿದರು.

ಪ್ರತಿಭಟನೆ 56ನೇ ದಿನಕ್ಕೆ ಕಾಲಿಟ್ಟರೂ ಕೂಡಾ ಸಂಸದ ವೈ. ದೇವೇಂದ್ರಪ್ಪ ಅವರು ಒಂದು ದಿನ ಕೂಡ ರೈತರ ಪ್ರತಿಭಟನೆ ಕಡೆಗೆ ತಲೆ ಹಾಕದೆ ಸಮಸ್ಯೆಗಳ ಅಹವಾಲು ಸ್ವೀಕರಿಸದೆ ಇರುವುದು ಶೋಭೆಯಲ್ಲ ಎಂದು, ದೇವೇಂದ್ರಪ್ಪ ರೈತ ವಿರೋಧಿ ಎಂದು ಪ್ರತಿಭಟನೆಯಲ್ಲಿ ಘೋಷಣೆ ಕೂಗಿದರು. ಆದ್ದರಿಂದ ರೈತರ ಬೇಡಿಕೆಗಳು ಈಡೇರುವವರೆಗೂ ನ್ಯಾಯ ಸಿಗುವವರೆಗೆ ಹೋರಾಟ ಕೈ ಬಿಡುವ ಪ್ರಶ್ನೆಯೆ ಇಲ್ಲ ಎಂದರು.

ಕುಡಿತಿನಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಕಾರ್ಖಾನೆಗಳಿಗೆ ಭೂಮಿ ನೀಡಿ 13 ವರ್ಷ ಕಳೆದಿದೆ. ಯಾವುದೇ ಕಾರ್ಖಾನೆ ಸ್ಥಾಪನೆಯಾಗದ ಹಿನ್ನೆಲೆಯಲ್ಲಿ ಮಾಲಿಕರ ವಿರುದ್ಧ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು.

ಇದರ ಬಗ್ಗೆ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಸಾಂತ್ವನ ಹೇಳುವ ಸೌಜನ್ಯ ಕೂಡ ಇಲ್ಲದಿರುವುದು ನಾಚಿಕೆ ಗೇಡಿನ ಸಂಗತಿಯಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.