ದೇಗುಲದ ಜೀರ್ಣೋದಾರಕ್ಕೆ 1.50 ಕೋಟಿ ರೂ. ದಾನ 


Team Udayavani, Feb 11, 2023, 2:13 PM IST

tdy-17

ಚನ್ನರಾಯಪಟ್ಟಣ: ತಾಲೂಕಿನ ನುಗ್ಗೇಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ಧ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಜೀರ್ಣೋದಾರಕ್ಕಾಗಿ 1.50 ಕೋಟಿ ರೂ. ಹಣವನ್ನು ನಾಗರತ್ನಮ್ಮ ನಾಗೇಂದ್ರ ದಂಪತಿ ಗಳು ದಾನ ನೀಡಿ ಭೂಮಿ ಪೂಜೆ ನೆರವೇರಿಸಿದರು.

ನಾಗರತ್ನ ನಾಗೇಂದ್ರ ಮಾತನಾಡಿ, ಪುರಾಣ ಪ್ರಸಿದ್ಧ ಲಕ್ಷ್ಮೀನರಸಿಂಹ ಸ್ವಾಮಿ ದೇವಾ ಲಯದ ಭಕ್ತರಾಗಿ ಅನೇಕ ವರ್ಷ ದಿಂದ ದೇಗುಲಕ್ಕೆ ಆಗಮಿಸುತ್ತಿದ್ದೆವು. ಮಳೆಯಿಂದ ದೇಗಿಲದ ಮೇಲ್ಛಾವಣಿ ಸೋರುತ್ತಿದೆ. ಇದರಿಂದ ಭಕ್ತರಿಗೆ ಸಾಕಷ್ಟು ತೊಂದ ರೆ ಆಗುವುದಲ್ಲದೇ, ನಮ್ಮನ್ನು ಕಾಪಾಡುವ ದೇವರು ನೆಲೆಸಿದ ಸ್ಥಾನ ಈ ರೀತಿ ಆಗಿರುವುದು ನೋಡಿ ನನಗೆ ಬೇಸರವಾಗಿಯಿತು. ಹಾಗಾಗಿ ಇದನ್ನು ಅಭಿವೃದ್ಧಿ ಪಡಿಸಲು ಮುಂದಾಗುತ್ತಿದ್ದೇವೆ ಎಂದರು.

ಪುರಾತತ್ವ, ಮುಜರಾಯಿ ಇಲಾಖೆ ನಿರ್ಲಕ್ಷ್ಯ: ಪುರಾತತ್ವ ಇಲಾಖೆ ಅಧೀನದಲ್ಲಿ ಹಾಗೂ ಧಾರ್ಮಿಕ ದತ್ತಿ ಇಲಾಖೆ ಸೇರಿದ ದೇವಾಲಯಗಳ ಪರಿಸ್ಥಿತಿ ಈ ರೀತಿಯಾದರೆ ಇದಕ್ಕೆ ಯಾರನ್ನು ಹೊಣೆ ಮಾಡಬೇಕು. ದೇವಾಲಯದಲ್ಲಿ ಹುಂಡಿಯಲ್ಲಿನ ಹಣ ಧಾರ್ಮಿಕ ದತ್ತಿ ಇಲಾಖೆಗೆ ಸೇರುತ್ತಿದೆ. ಇನ್ನೂ ದೇವಾಲಯ ಶಿಥಿಲವಾದರೆ ರಿಪೇರಿ ಮಾಡಿಸಬೇಕು ಎಂಬ ಕನಿಷ್ಠ ಸೌಜನ್ಯ ಅಧಿಕಾರಿಗಳು ಹೊಂದಿಲ್ಲದೆ ಇರುವುದು ವಿಷಾದಕರ ಸಂಗತಿ ಎಂದರು.

ಗ್ರಾಮಸ್ಥರು ಹೆಚ್ಚಿನ ಸಹಕಾರ ಕೊಡಿ: ಈ ಹಿಂದೆ ವೈಯಕ್ತಿಕ ಕಾರಣಕ್ಕಾಗಿ ದೇವರಿಗೆ ಹರಕೆ ಮಾಡಿದ್ದು, ಅದು ಈಡೇರಿದ್ದರಿಂದ ದೇಗುಲದ ಜೀ ರ್ಣೋದ್ಧಾರಕ್ಕೆ ಏನಾದರೂ ಸಹಾಯ ಮಾಡಬೇಕೆಂದು ತಿಳಿದು 1.50 ಕೋಟಿ ದೇಣಿಗೆಯನ್ನು ಪುರಾತತ್ವ ಇಲಾಖೆಗೆ ನೀಡಿ ಇಲಾಖೆಯ ಸಹಯೋಗದಲ್ಲಿ ದೇವಾಲಯದ ಜೀರ್ಣೋದ್ಧಾರದ ಕೆಲಸ ನಡೆಯಲಿದೆ. ಕ್ಷೇತ್ರದ ಶಾಸ ಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಹಕಾರ ಕೊಡುವಂತೆ ಕೋರಲಾಗಿದೆ ಎಂದರು.

ದೇಗುಲದ ಅಭಿವೃದ್ಧಿಗೆ ನೆರವು ನೀಡಿ: ಶಾಸಕ ಸಿ.ಎನ್‌.ಬಾಲಕೃಷ್ಣ ಮಾತನಾಡಿ, ದಾನಿಗಳಾದ ನಾಗರತ್ನಮ್ಮ ನಾಗೇಂದ್ರ ದಂಪತಿಗಳು ದೇವಾಲ ಯದ ಜೀರ್ಣೋದ್ಧಾರಕ್ಕೆ ಆರ್ಥಿಕ ಸಹಕಾರ ನೀಡುತ್ತಿರುವುದು ಶ್ಲಾಘನೀಯ. ತಾಲೂಕು ಆಡಳಿತ ದಂಪತಿಗಳಿಗೆ ಅಭಾರಿಯಾಗಿದೆ. ಶಿಥಿಲಾವಸ್ಥೆಯಲ್ಲಿನ ದೇವಾಲಯ ಅಭಿವೃದ್ಧಿಗೆ ಆರ್ಥಿಕವಾಗಿ ಸ್ಥಿತಿವಂತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಬೆಂಗಳೂರು ಪುರಾತತ್ವ ಇಲಾಖೆ ಹಿರಿಯ ಅಧಿಕಾರಿ ಬಿಪಿನ್‌ ಚಂದ್ರ, ಪುರಾತತ್ವ ಇಲಾಖೆ ಎಂಜಿನಿಯರ್‌ ಗೌತಮ್, ತಾಲೂಕು ದಂಡಾಧಿಕಾರಿ ಗೋವಿಂದ್‌ ರಾಜ್‌, ಲಕ್ಷ್ಮೀ ನರಸಿಂಹ ಸ್ವಾಮಿ ಸೇವಾ ಸಮಿತಿ ಖಜಾಂಚಿ ನಾರಾಯಣ್, ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಛಾಯ ಮಣಿ, ಉಪಾಧ್ಯಕ್ಷ ಎನ್‌ .ಸಿ.ವಿಶ್ವನಾಥ್‌, ನಿರ್ದೇಶಕ ಜಿತೇಂದ್ರ ಕುಮಾರ್‌, ಗ್ರಾಪಂ ಉಪಾಧ್ಯಕ್ಷ ವಿಠ್ಠಲ್‌ ಕುಮಾರ, ಸದಸ್ಯರಾದ ಹೊನ್ನೇಗೌಡ, ಮಂಜುನಾಥ, ಶಿವಕುಮಾರ, ನಾಗರಿಕ ವೇದಿಕೆ ಅಧ್ಯಕ್ಷ ನಾಗರಾಜು, ಕೃಷಿ ಸಂಘದ ಅಧ್ಯಕ್ಷ ದೊರೆಸ್ವಾಮಿ, ನಿರ್ದೇಶಕರಾದ ಪಟೇಲ್‌ ಕುಮಾರ, ಎಚ್‌.ಬಿ.ರಂಗಸ್ವಾಮಿ, ಸಂಪತ್‌ ಕುಮಾರ, ಪ್ರಮುಖರಾದ ಮುರಳಿ, ನಾರಾಯಣ್, ಗಿರೀಶ, ಜಾವಿದ್‌, ಪ್ರಸನ್ನ ಕೇಶವಾಚಾರ್ಯ, ಜಗನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.