ಪಕ್ಷ ಸಂಘಟನೆಯಲ್ಲಿ ಎಸ್‌ಸಿ ಮೋರ್ಚಾ ಸಕ್ರಿಯ: ಛಲವಾದಿ
Team Udayavani, Feb 11, 2023, 10:00 PM IST
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140ರಿಂದ 150 ಕ್ಷೇತ್ರ ಗೆಲ್ಲುವುದಕ್ಕೆ ನೆರವಾಗುವ ರೀತಿಯಲ್ಲಿ ಎಸ್‌ಸಿ ಮೋರ್ಚಾ ತನ್ನ ಕಾರ್ಯಚಟುವಟಿಕೆ ನಡೆಸಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಕರೆ ನೀಡಿದರು.
ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪದ್ಮಶ್ರೀ ಪ್ರಶಸ್ತಿ ಭಾಜನರಾದ ಹಿರಿಯ ತಮಟೆ ಕಲಾವಿದ ಚಿಕ್ಕಬಳ್ಳಾಪುರ ಜಿಲ್ಲೆಯ ಮುನಿವೆಂಕಟಪ್ಪ ಅವರನ್ನು ಸಮ್ಮಾನಿಸಿ ಮಾತನಾಡಿದ ಅವರು, ಇವತ್ತು ಎಸ್‌ಸಿ ಮೋರ್ಚಾದ 8ನೇ ರಾಜ್ಯ ಕಾರ್ಯಕಾರಿಣಿ ಸಭೆ ನಡೆದಿದೆ. ರಥಯಾತ್ರೆ, ಸಮಾವೇಶಗಳಲ್ಲಿ ಎಸ್‌ಸಿ ಮೋರ್ಚಾವು ಸಕ್ರಿಯವಾಗಿ ಭಾಗವಹಿಸಲು ನಿರ್ಧರಿಸಿದೆ. ಪ್ರತಿ ಜಿಲ್ಲೆಗಳ ಸಮಾವೇಶದಲ್ಲಿ 25 ಸಾವಿರಕ್ಕೂ ಮೀರಿ ನಮ್ಮ ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ತಿಳಿಸಿದರು.
ಎಸ್‌ಸಿ ಮೋರ್ಚಾ ರಾಷ್ಟ್ರೀಯ ಪ್ರಭಾರಿ ಸೋಗಲ್ ಕುಮಾರ್ ಅವರು ಆಗಮಿಸಿದ್ದಾರೆ. ಬಡತನದಲ್ಲಿರುವ ಕಲಾವಿದ ಮುನಿವೆಂಕಟಪ್ಪರಿಗೆ ಸಮ್ಮಾನ ಮಾಡಿ 25 ಸಾ. ರೂ. ಗೌರವಧನ ನೀಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಸರಕಾರ ಮುನಿವೆಂಕಟಪ್ಪ ಅವರನ್ನು ಗುರುತಿಸುವ ಮೂಲಕ ಇಡೀ ದಲಿತ ಸಮುದಾಯವನ್ನೇ ಗೌರವಿಸಿದಂತಾಗಿದೆ ಎಂದರು.
ಚುನಾವಣೆಗೆ ಪಕ್ಷವನ್ನು ಸಿದ್ಧಗೊಳಿಸುವ ಉದ್ದೇಶದಿಂದ ಸಭೆ ನಡೆದಿದೆ. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವ ದಲಿತ ಸಮುದಾಯಗಳು ಮನಸು ಮಾಡಿದರೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಾಧ್ಯವಿದೆ. ಇದುವರೆಗೆ ಬೇರೆಬೇರೆ ಪಕ್ಷಗಳಿಗೆ ಅವರು ಮತದಾನ ಮಾಡುತ್ತಿದ್ದರು. ಕಾಂಗ್ರೆಸ್ ಸುಡುವ ಮನೆ, ಅಲ್ಲಿ ನಿಮಗೆ ಭವಿಷ್ಯ ಇಲ್ಲ ಎಂದು ಡಾ. ಅಂಬೇಡ್ಕರರು ಹೇಳಿದ್ದನ್ನು ಗಮನಿಸಿ, ಬಾಬಾ ಸಾಹೇಬರನ್ನು ಗೌರವಿಸಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಬಿಜೆಪಿ ಎಸ್. ಸಿ.ಮೋರ್ಚಾ ಉಪಾಧ್ಯಕ್ಷ ದೊಡ್ಡೇರಿ ವೆಂಕಟೇಶ್ ಮತ್ತು ಪಕ್ಷದ ಹಾಗೂ ಮೋರ್ಚಾದ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
MUST WATCH
ಹೊಸ ಸೇರ್ಪಡೆ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.