ಫೆ. 15: ಧರ್ಮಸ್ಥಳದಲ್ಲಿ ನವಜೀವನ ಸಮಾವೇಶ
Team Udayavani, Feb 12, 2023, 6:00 AM IST
ಬೆಳ್ತಂಗಡಿ: ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಫೆ. 15ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ವ್ಯಸನಮುಕ್ತರ ನವಜೀವನ ಸಮಾವೇಶವನ್ನು ಆಯೋಜಿಸಿದ್ದು, 4,000 ವ್ಯಸನಮುಕ್ತರು ಮತ್ತು ಅವರ ಕುಟುಂಬದವರು ಭಾಗವಹಿಸಲಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈವರೆಗೆ ರಾಜ್ಯದೆಲ್ಲೆಡೆ 1,644 ಮದ್ಯವರ್ಜನ ಶಿಬಿರಗಳ ಮೂಲಕ 1,13,103 ಮಂದಿಯನ್ನು ವ್ಯಸನ ಮುಕ್ತರನ್ನಾಗಿಸಲಾಗಿದೆ. 8 ದಿನಗಳ ಶಿಬಿರದಲ್ಲಿ ಭಜನೆ, ಪ್ರಾರ್ಥನೆ, ಯೋಗಾಭ್ಯಾಸ, ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಇತ್ಯಾದಿ ಚಟುವಟಿಕೆಗಳ ಮೂಲಕ ಮನಃಪರಿವರ್ತನೆ ಮಾಡಲಾಗುತ್ತದೆ. ಪಾನ ಮುಕ್ತ ಸಾಧಕರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಶಾಲಾ ಕಾಲೇಜುಗಳಲ್ಲಿ 13,211 ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಮೂಲಕ 10,21,229 ವಿದ್ಯಾರ್ಥಿಗಳಿಗೆ ವ್ಯಸನಮುಕ್ತರಾಗುವ ಬಗ್ಗೆ ಅರಿವು, ಜಾಗೃತಿ ಮೂಡಿಸಲಾಗಿದೆ ಎಂದರು.
ರಾಜ್ಯಪಾಲರು ಭಾಗಿ
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದಲ್ಲಿ ಜಾಗತಿಕ ಮಟ್ಟದಲ್ಲಿ ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಉತ್ತಮ ಸೇವೆ ಮಾಡಿದ ಡಾ| ಥಾಮಸ್ ಸ್ಕರಿಯ ಅವರಿಗೆ ಜನಜಾಗೃತಿ ಜೀವಮಾನ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಸಚಿವ ವಿ. ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್ ಮತ್ತು ಕೆ. ಪ್ರತಾಪ ಸಿಂಹ ನಾಯಕ್ ಹಾಗೂ ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾದ ಜಯಮೋನಪ್ಪ ಗೌಡ ಮುಖ್ಯ ಅತಿಥಿಗಳಾಗಿ ಭಾಗ ವಹಿಸುವರು ಎಂದರು.
ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್, ದ.ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಕಾರ್ಯದರ್ಶಿ ವಿವೇಕ್ ವಿ. ಪಾಸ್, ಯೋಜನಾಧಿಕಾರಿಗಳಾದ ಮೋಹನ, ಸುರೇಂದ್ರ, ಯಶವಂತ್, ಜೈವಂತ್ ಪಟಗಾರ್ ಮತ್ತು ತಿಮ್ಮಯ್ಯ ನಾಯ್ಕ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.