ಜಾತ್ಯಾತೀತತೆ ಮೇಲೆ ನಂಬಿಕೆ ಇಲ್ಲದ ಜೆಡಿಎಸ್ ಜೊತೆ ಕಾಂಗ್ರೆಸ್ ಹೋಲಿಕೆ ಸಲ್ಲದು: ಸಿದ್ದರಾಮಯ್ಯ
Team Udayavani, Feb 12, 2023, 1:05 PM IST
ವಿಜಯಪುರ : ಕಾಂಗ್ರೆಸ್-ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಅರ್ಥಹೀನ. ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಜಾತ್ಯಾತೀತ ವ್ಯವಸ್ಥೆ ಮೇಲೆ ನಂಬಿಕೆಯೇ ಇಲ್ಲದ ಜೆಡಿಎಸ್ ಪಕ್ಷವನ್ನು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೇಲೆ ನಂಬಿಕೆ ಇರುವ ಕಾಂಗ್ರೆಸ್ ಪಕ್ಷದೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರಿಗೇಟು ನೀಡಿದ್ದಾರೆ.
ಪ್ರಜಾಧ್ವನಿ ಯಾತ್ರೆ ಹಿನ್ನೆಲೆಯಲ್ಲಿ ನಗರದಲ್ಲಿ ವಾಸ್ತವ್ಯ ಹೂಡಿದ್ದ ಅವರು, ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿ,ಕಾಂಗ್ರೆಸ್ ಸಂವಿಧಾನ ಮೇಲೆ ನಂಬಿಕೆ ಇಟ್ಟಿರುವ ಪಕ್ಷ. ಬಿಜೆಪಿ ಸಂವಿಧಾನಕ್ಕೆ ಗೌರವ, ನಂಬಿಕೆ ಇಲ್ಲದ ವಿರೋಧಿ ಪಕ್ಷ. ಜಾತ್ಯಾತೀತ ತತ್ವವೇ ಗೊತ್ತಿಲ್ಲದ ಜೆಡಿಎಸ್ ಜಾತ್ಯಾತೀತ ಪಕ್ಷವಾಗಲು ಸಾಧ್ಯವಿಲ್ಲ. ಹೀಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಒಂದೇ ಎಂಬುದು ಸರಿಯಲ್ಲ. ಇದೇ ಬಿಜೆಪಿ ನಾಯಕರು ಜೆಡಿಎಸ್ ಸೇರಿ ಸರ್ಕಾರ ಮಾಡಿದ್ದರಲ್ಲ ಎಂದು ಕುಟುಕಿದ್ದಾರೆ.
ಟಿಪ್ಪು ಸುಲ್ತಾನ್ ಆರಾಧನೆ ಮಾಡುವ ಕಾಂಗ್ರೆಸ್ ಗೆ ಮತ ಹಾಕಬೇಡಿ ಎಂದು ಅಮಿತ್ ಶಾ ಹೇಳಿದ್ದಾರೆ. ಮಹಾತ್ಮಾ ಗಾಂಧೀಜಿ ಅವರನ್ನು ಕೊಂದಿರುವ ಗೋಡ್ಸೆ, ಸ್ವಾತಂತ್ರ್ಯ ಬ್ರಿಟಿಷರಿಂದ ಪಿಂಚಣಿ ಪಡೆಯುತ್ತಿದ್ದ ಸಾವರ್ಕರ್ ಪೂಜೆ ಮಾಡುವರಿಂದ ನಾವೇನೂ ಕಲಿಯಬೇಕಾದುದು ಇಲ್ಲ. ಇಂಥವರು ನಮಗೇನು ಪಾಠ ಹೇಳಿಕೊಡುತ್ತಾರೆ ಎಂದು ಅಮಿತ್ ಶಾ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಬಿಜೆಪಿ ನಾಯಕರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪರಾಕ್ರಮ ತೋರಿದ ಕಿತ್ತೂರು ರಾಣಿ ಚನ್ನಮ್ಮ ಅವರಿಗೆ ಎಂದಾದರೂ ಗೌರವ ಕೊಟ್ಟಿದ್ದಾರಾ. ಟಿಪ್ಪು ಸುಲ್ತಾನ್ ಓರ್ವ ದೇಶಪ್ರೇಮಿ ಎಂದು ನಂಬಿಕೆ ಇಟ್ಟುಕೊಂಡಿದ್ದೇವೆ. ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವ, ಬೆಳವಡಿ ಮಲ್ಲಮ್ಮ, ರಾಣಿ ಅಬ್ಬಕ್ಕ ಇವರೆಲ್ಲರೂ ದೇಶಪ್ರೇಮಿಗಳು. ನಾವು ದೇಶ ಪ್ರೇಮಿಗಳನ್ನು ಗೌರವಿಸುತ್ತೇವೆ ಎಂದು ಅಮಿತ್ ಶಾ ವಿರುದ್ಧ ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.