ಮೂಡಿಗೆರೆ ಉತ್ಸವಕ್ಕೆ ಚಾಲನೆ


Team Udayavani, Feb 12, 2023, 2:25 PM IST

Crackers

ಮೂಡಿಗೆರೆ: ಪಟ್ಟಣದಲ್ಲಿ ತಾಲೂಕು ಆಡಳಿತ ಮತ್ತು ಮೂಡಿಗೆರೆ ಉತ್ಸವ ಸಮಿತಿ ವತಿಯಿಂದ ಫೆ.11ರಿಂದ 14ರವರೆಗೆ ನಡೆಯುತ್ತಿರುವ ಮೂಡಿಗೆರೆ ಉತ್ಸವ ಕಾರ್ಯಕ್ರಮಕ್ಕೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಶನಿವಾರ ಸಂಜೆ ಮರವಣಿಗೆ  ಮೂಲಕ ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌, ಶಾಸಕ ಎಂ.ಪಿ. ಕುಮಾರಸ್ವಾಮಿ ಸೇರಿದಂತೆ ವಿವಿಧ ಪಕ್ಷದ ಮುಖಂಡರು ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪಸಭಾಪತಿ ಪ್ರಾಣೇಶ್‌ ಅವರು, ಮೂಡಿಗೆರೆ ಉತ್ಸವಕ್ಕೆ ಪಕ್ಷಬೇಧ ಮರೆತು ಎಲ್ಲರೂ ಒಗ್ಗೂಡಿ ಬೆಂಬಲ ನೀಡಿರುವುದು ಮತ್ತಷ್ಟು ಹುರುಪು ನೀಡಿದೆ. ಎಲ್ಲರೂ ಶ್ರಮ ವಹಿಸುತ್ತಿರುವುದು ಕಾರ್ಯಕ್ರಮ ಕಳೆಗಟ್ಟಲು ಸಹಕಾರಿಯಾಗಿದೆ. ತಳಮಟ್ಟದ ಕೆಲಸಗಾರರಿಂದ ಹಿಡಿದು ಉನ್ನತ ಸ್ಥಾನಮಾನದ ಪ್ರತಿಯೊಬ್ಬರೂ ಮೂಡಿಗೆರೆ ಉತ್ಸವದ ಯಶಸ್ಸಿನ ಹಿಂದಿದ್ದಾರೆ. ತಾಲೂಕಿನ ಪ್ರತಿಯೊಬ್ಬ ವ್ಯಕ್ತಿಯೂ ಉತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.

ನಂತರ ಮಾತನಾಡಿದ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು, ಮೂಡಿಗೆರೆ ಉತ್ಸವ ತಾಲೂಕಿನ ಪ್ರತೀ ಪ್ರಜೆಯ ಹೆಮ್ಮೆಯ ಸಂಕೇತವಾಗಿದೆ. ತಾಲೂಕಿನಲ್ಲಿ ಉತ್ಸವ ಆಚರಣೆ ಹೊಸ ಸಂಸ್ಕೃತಿಯನ್ನು ಹುಟ್ಟುಹಾಕುತ್ತಿದೆ. ನಮ್ಮ ಸಂಸ್ಕೃತಿ, ಭಾಷೆ ಸ್ಥಳೀಯತೆಯನ್ನು ಎಲ್ಲರಿಗೂ ಸಾರುವ ಜೊತೆಗೆ ಪ್ರತಿಯೊಬ್ಬರೂ ಸಂಭ್ರಮಿಸುವ ಉತ್ಸಾಹಭರಿತ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿರುವುದು ನಮ್ಮೆಲ್ಲರ ಪೂರ್ವಜನ್ಮದ ಪುಣ್ಯ ಎಂದರು.

ಮೂಡಿಗೆರೆ ಉತ್ಸವಕ್ಕೂ ಆರಂಭದ ಮೊದಲ ಕಾರ್ಯಕ್ರಮವಾದ ಹೆಲಿ ಟೂರಿಸಂಗೆ ಬೆಳಗ್ಗೆ 10ಗಂಟೆಗೆ ತೆರಳುವ ಪ್ರಯಾಣಿಕರು ಹೆಲಿಕ್ಯಾಪ್ಟರ್‌ನಲ್ಲಿ ಕುಳಿತು ತಾಲೂಕಿನ ವಿವಿಧ ಪ್ರವಾಸಿ ತಾಣಗಳನ್ನು ವೀಕ್ಷಿಸುವ ಮೂಲಕ ಸಂಭ್ರಮಿಸಿದರು. ಸಂಜೆ ಮರವಣಿಗೆಯಲ್ಲಿ ವಿವಿಧ ತಂಡಗಳಿಂದ ಕೃತಕ ಕೋಳಿ, ಸಿಂಹ, ಕರಡಿ ಸೇರಿದಂತೆ ವಿವಿಧ ಬಗೆಯ ಕಲಾಕೃತಿಗಳು ಹಾಗೂ ಡೊಳ್ಳು, ವೀರಗಾಸೆ, ಕಹಳೆ ಸೇರಿದಂತೆ ವಿವಿಧ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಬೃಹತ್‌ ಮೆರವಣಿಗೆ ನಡೆಸಲಾಯಿತು.

 

ಟಾಪ್ ನ್ಯೂಸ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

Areca

Arecanut Growers: ಎರಡು ವರ್ಷಕ್ಕೊಮ್ಮೆ ಅಡಿಕೆ ಫ‌ಸಲು ಏರಿಳಿತ

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

Pashu-Sanjevani

Mangaluru: ಕರಾವಳಿ ಹೈನುಗಾರರ ಮನ ಗೆದ್ದ ಮನೆ ಬಾಗಿಲಿಗೆ ಪಶು ಸಂಜೀವಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

21-

Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ

Mundugaru-pejavara-sri2

Mundugaru:ನಕ್ಸಲ್‌ ಪೀಡಿತ ಪ್ರದೇಶದಲ್ಲಿ ಪೇಜಾವರ ಶ್ರೀಗಳ ಸಂಚಾರ; ಕಾಡಿನಲ್ಲಿ ರಾಮಮಂತ್ರ ಘೋಷ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.