ವೈದ್ಯಕೀಯ ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ: ಕೇಂದ್ರ ಸರ್ಕಾರ
Team Udayavani, Feb 12, 2023, 10:40 PM IST
ಗಾಂಧಿನಗರ: ಮುಂದಿನ ನಾಲ್ಕು ವರ್ಷಗಳಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು ಸಮಾನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಇದರಿಂದ ಎಲ್ಲಾ ಎಂಬಿಬಿಎಸ್ ಪದವೀಧರರು ಪಿಜಿ ಕೋರ್ಸ್ಗಳಿಗೆ ಸೇರಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಹೇಳಿದರು.
ಗುಜರಾತ್ನ ಗಾಂಧಿನಗರದಲ್ಲಿ ನಡೆದ ಭಾರತೀಯ ಮೂಲದ ವೈದ್ಯರ ಜಾಗತಿಕ ಸಂಘದ(ಜಿಎಪಿಐಒ) 13ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಸ್ಪತ್ರೆಗಳ ಸ್ಥಾಪನೆಗೆ ಹೂಡಿಕೆ ಮಾಡುವಂತೆ ಇದೇ ವೇಳೆ ಭಾರತೀಯ ಮೂಲದ ವೈದ್ಯರನ್ನು ಆಹ್ವಾನಿಸಿದರು.
“ನಾವು ಒಂದು ಆಸ್ಪತ್ರೆಯನ್ನು ಆರಂಭಿಸಿದರೆ ಅದಕ್ಕೆ ವೈದ್ಯರು ಕೂಡ ಅಗತ್ಯ. ಎಂಟು ವರ್ಷಗಳ ಹಿಂದೆ ದೇಶದಲ್ಲಿ 51,000 ಎಂಬಿಬಿಎಸ್ ಸೀಟುಗಳು ಇದ್ದವು. ಈಗ ಅದು 1,00,226ಕ್ಕೆ ಏರಿಕೆಯಾಗಿದೆ. ಅದೇ ರೀತಿ 34,000 ಇದ್ದ ವೈದ್ಯಕೀಯ ಪಿಜಿ ಸೀಟುಗಳ ಸಂಖ್ಯೆ ಇದೀಗ 64,000ಕ್ಕೆ ಏರಿಕೆಯಾಗಿದೆ,’ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.