ರಾಜ್ಯಪಾಲರ ನೇಮಕದಲ್ಲೂ ಕೇಂದ್ರದಿಂದ ಚಾಣಾಕ್ಷ ನಡೆ

Team Udayavani, Feb 13, 2023, 6:00 AM IST

ರಾಜ್ಯಪಾಲರ ನೇಮಕದಲ್ಲೂ ಕೇಂದ್ರದಿಂದ ಚಾಣಾಕ್ಷ ನಡೆ

ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗವರ್ನರ್‌ಗಳಿಗೆ ವಿಶೇಷ ಸ್ಥಾನಮಾನವಿದೆ. ರಾಜ್ಯಪಾಲರು ಆಯಾಯ ರಾಜ್ಯಗಳ ಪ್ರಥಮ ಪ್ರಜೆಯಾಗಿದ್ದು ಇವರನ್ನು ಕೇಂದ್ರ ಸರಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ಅವರು ನೇಮಕ ಮಾಡುತ್ತಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ನಡುವಣ ಕೊಂಡಿಯಾಗಿ ರಾಜ್ಯಪಾಲರು ಕರ್ತವ್ಯ ನಿರ್ವಹಿಸುತ್ತಾರೆ. ರಾಜ್ಯದಲ್ಲಿ ಯಾವುದೇ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾದಾಗ ರಾಜ್ಯಪಾಲರ ಪಾತ್ರ ಅತೀ ಮಹತ್ವದ್ದಾಗಿರುತ್ತದೆ.

ರವಿವಾರದಂದು ಕೇಂದ್ರ ಸರಕಾರದ ಶಿಫಾರಸಿನಂತೆ ಹೊಸದಾಗಿ ಆರು ಮಂದಿಯನ್ನು ರಾಷ್ಟ್ರಪತಿ ಅವರು ವಿವಿಧ ರಾಜ್ಯಗಳ ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದರೆ ಇನ್ನು ಏಳು ಮಂದಿ ರಾಜ್ಯಪಾಲರನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ.

ಹೊಸದಾಗಿ ರಾಜ್ಯಪಾಲರಾಗಿ ನೇಮಕಗೊಂಡವರು ಮತ್ತು ವರ್ಗಾವಣೆಗೊಂಡ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗವರ್ನರ್‌ ಅವರ ಹೆಸರುಗಳನ್ನು ಗಮನಿಸಿದಾಗ ಕೇಂದ್ರ ಸರಕಾರ ಚಾಣಾಕ್ಷ ನಡೆ ಇರಿಸಿರುವುದು ಸ್ಪಷ್ಟವಾಗುತ್ತದೆ. ಹೊಸದಾಗಿ ರಾಜ್ಯಪಾಲರಾಗಿ ನೇಮಕಗೊಂಡ ಕೆಲವು ಹೆಸರುಗಳು ಅಚ್ಚರಿ ತರಿಸಿದರೂ ಇದರ ಹಿಂದೆ ಪಕ್ಕಾ ರಾಜಕೀಯ ಲೆಕ್ಕಾಚಾರ, ಚುನಾವಣ ತಂತ್ರಗಾರಿಕೆ, ದೂರದೃಷ್ಟಿ ಇರುವುದು ಗೋಚರವಾಗುತ್ತದೆ.
ರಾಜ್ಯಪಾಲರ ನೇಮಕದ ಸಂದರ್ಭದಲ್ಲಿ ಬಿಜೆಪಿ ಅಳೆದೂ ತೂಗಿ ತನ್ನ ಮನೆಯನ್ನು ಸುವ್ಯವಸ್ಥಿತವಾಗಿ ಇರಿಸಿಕೊಳ್ಳಲು ಆದ್ಯತೆ ನೀಡಿರುವುದು ಸ್ಪಷ್ಟವಾಗುತ್ತದೆ. ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಸದ್ಯ ವಿಪಕ್ಷ ನಾಯಕರಾಗಿರುವ ಗುಲಾಬ್‌ಚಂದ್‌ ಕಟಾರಿಯಾಗೆ ರಾಜ್ಯಪಾಲ ಹುದ್ದೆ ನೀಡಲಾಗಿದೆ. ಇದು ರಾಜ್ಯದಲ್ಲಿ ಬಿಜೆಪಿಯ ಬಣ ರಾಜಕೀಯಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಕೈಗೊಂಡ ಕ್ರಮವೆನ್ನಲಾಗಿದೆ. ಇನ್ನು ಈಗಾಗಲೇ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ಚುನಾವಣ ಪ್ರಕ್ರಿಯೆಗಳು ನಡೆಯುತ್ತಿರುವ ರಾಜ್ಯಗಳಾದ ಮೇಘಾಲಯ, ನಾಗಾಲ್ಯಾಂಡ್‌ಗೆ ಅನುಭವಿಗಳನ್ನು ವರ್ಗಾಯಿಸಿ ರಾಜಕೀಯ ಲೆಕ್ಕಾಚಾರದ ಜತೆಯಲ್ಲಿ ಸಂಭಾವ್ಯ ಬೆಳವಣಿಗೆ ಎದುರಿಸಲು ಬಿಜೆಪಿ ಸಜ್ಜಾಗಿರುವಂತೆ ಭಾಸವಾಗುತ್ತಿದೆ.

ತಮಿಳುನಾಡಿನ ಬಿಜೆಪಿ ಹಿರಿಯ ನಾಯಕ ಸಿ.ಪಿ.ರಾಧಾಕೃಷ್ಣನ್‌ಗೂ ಗೌರವಾನ್ವಿತ ಹುದ್ದೆ ಕೊಡಲಾಗಿದೆ. ಈ ಮೂಲಕ ತಮಿಳುನಾಡು ಬಿಜೆಪಿಯ ಮೇಲೆ ಪೂರ್ಣ ಹಿಡಿತ ಸಾಧಿಸಲು ಕೆ.ಅಣ್ಣಾಮಲೈ ಅವರಿಗೆ ಪಕ್ಷದ ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ. ರಾಜ್ಯಸಭೆಯಲ್ಲಿ ಬಿಜೆಪಿ ವಿಪ್‌ ಆರ್‌ಎಸ್‌ಎಸ್‌ ಹಿನ್ನೆಲೆಯ ಶಿವಪ್ರತಾಪ್‌ ಶುಕ್ಲಾರನ್ನು ಇತ್ತೀಚೆಗಷ್ಟೇ ಕಾಂಗ್ರೆಸ್‌ ಮರಳಿ ಅಧಿಕಾರಕ್ಕೇರಿರುವ ಹಿಮಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಛತ್ತೀಸ್‌ಗಢದ ರಾಜ್ಯಪಾಲರಾಗಿದ್ದ ಅನಸೂಯಾರನ್ನು ಮಣಿಪುರಕ್ಕೆ ವರ್ಗಾಯಿಸುವ ಮೂಲಕ ಮೀಸಲಾತಿ ಮಸೂದೆ ವಿಚಾರವಾಗಿ ಛತ್ತೀಸ್‌ಗಢ ಬಿಜೆಪಿ ನಾಯಕರಲ್ಲಿ ಉಂಟಾಗಿರುವ ಅಸಮಾಧಾನವನ್ನು ತಣಿಸುವ ಪ್ರಯತ್ನವನ್ನು ಕೇಂದ್ರ ಮಾಡಿದೆ.

ಅಚ್ಚರಿಯ ಆಯ್ಕೆ ಎಂಬಂತೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕರ್ನಾಟಕ ಮೂಲದ ಎಸ್‌. ಅಬ್ದುಲ್‌ ನಝೀರ್‌ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಅಯೋಧ್ಯೆ ವಿವಾದ ಮತ್ತು ತ್ರಿವಳಿ ತಲಾಖ್‌ ರದ್ದು ವಿರುದ್ಧದ ಅರ್ಜಿಯ ಪ್ರಕರಣದ ವಿಚಾರಣ ಪೀಠದ ಭಾಗವಾಗಿದ್ದ ಅವರಿಗೆ ನಿವೃತ್ತರಾದ ಐದು ವಾರಗಳಲ್ಲೇ ಈ ಹುದ್ದೆ ಲಭಿಸಿದೆ. ಕರ್ನಾಟಕ ವಿಧಾನಸಭೆಗೆ ಇದೇ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು ಈ ನೇಮಕಾತಿ ಒಂದಿಷ್ಟು ಕುತೂಹಲ ಮೂಡಿಸಿದೆ. ಸದಾ ಒಂದಿಲ್ಲೊಂದು ಕಾರಣದಿಂದಾಗಿ ರಾಜ್ಯ ಸರಕಾರ – ರಾಜ್ಯಪಾಲರ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿರುವ ತಮಿಳುನಾಡು, ತೆಲಂಗಾಣ ಮತ್ತು ಕೇರಳ ರಾಜ್ಯಪಾಲರು ವಿಪಕ್ಷಗಳ ವಾಗ್ಧಾಳಿಗೆ ತುತ್ತಾಗುತ್ತಿದ್ದರೂ ತಲೆಕೆಡಿಸಿಕೊಳ್ಳದ ಕೇಂದ್ರ ಯಥಾಸ್ಥಿತಿ ಕಾಯ್ದುಕೊಳ್ಳುವ ಮೂಲಕ ಆಯಾಯ ರಾಜ್ಯಗಳಲ್ಲಿನ ಆಡಳಿತ ಪಕ್ಷಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಟಾಪ್ ನ್ಯೂಸ್

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.