ಭಾರತ ಜಾಗತಿಕ ನಾಯಕವಾಗಲು ಕರ್ನಾಟಕ ಅತ್ಯಂತ ದೊಡ್ಡ ಕೊಡುಗೆ ನೀಡಲಿದೆ: ಸಿಎಂ ಬೊಮ್ಮಾಯಿ
Team Udayavani, Feb 13, 2023, 11:47 AM IST
ಬೆಂಗಳೂರು: ಭಾರತವನ್ನು ಜಾಗತಿಕ ನಾಯಕವಾಗಿಸಲು ಕರ್ನಾಟಕ ಅತ್ಯಂತ ದೊಡ್ಡ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಚಾಲನೆಗೊಂಡ ಏರೋ ಇಂಡಿಯಾ ಶೋ 2023 ಕಾರ್ಯಕ್ರಮದಲ್ಲಿ ಪ್ರಧಾನಿಗಳೊಂದಿಗೆ ಪಾಲ್ಗೊಂಡು ಮಾತನಾಡಿದರು.
ಈ ಕಾರ್ಯಸಾಧನೆಗೆ ಪ್ರಧಾನಿಗಳ ಆಶಯದಂತೆ ಕರ್ನಾಟಕ ಆರ್ಥಿಕತೆ, ಸಾಮಾಜಿಕ ವ್ಯವಸ್ಥೆ ಹಾಗೂ ರಕ್ಷಣಾ ವಲಯದಲ್ಲಿ ಕೊಡುಗೆ ನೀಡಲಿದೆ. ಏರೋ ಇಂಡಿಯಾ ಶೋ 14ನೇ ಆವೃತ್ತಿಯು ಗಾತ್ರ, ಪ್ರದರ್ಶನ ಮತ್ತು ಕಾರ್ಯವೈಖರಿಯ ದೃಷ್ಟಿಯಿಂದ ಅತ್ಯಂತ ವಿಶೇಷ ಆವೃತ್ತಿಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದ ಅತಿ ದೊಡ್ಡ ಏರ್ ಶೋ ಆಗಿದೆ. ರಕ್ಷಣಾ ವಲಯ ಹಾಗೂ ಏರ್ ಶೋ ಪ್ರದರ್ಶನದಲ್ಲಿ ಭಾರತ ತನ್ನ ಸಾಮರ್ಥ್ಯವನ್ನು ನಿರೂಪಿಸಿದೆ. ಕೋವಿಡ್ ಸಂದರ್ಭದಲ್ಲಿ ಪ್ಯಾರಿಸ್ ಏರ್ ಶೋ ನಡೆಯದಿದ್ದಾಗ, ನಮ್ಮ ಏರ್ ಶೋ ಯಶಸ್ವಿಯಾಗಿ ಜರುಗಿತು. ಈ ಬಾರಿ ವಸ್ತು ಪ್ರದರ್ಶನದ ವಿಸ್ತೀರ್ಣ, ಪ್ರದರ್ಶಕರ ಸಂಖ್ಯೆಯೂ ಹೆಚ್ಚಾಗಿದೆ ಎಂದರು.
ಕರ್ನಾಟಕ ಹಿಂತಿರುಗಿ ನೋಡಿಲ್ಲ: ಕರ್ನಾಟಕದಲ್ಲಿ 1940 ರಲ್ಲಿ ಎಚ್.ಎ.ಎಲ್, 1950 ರಲ್ಲಿ ಬಿ.ಎಚ್.ಇ.ಎಲ್, ಬಿ.ಇ.ಎಲ್, ಡಿ.ಆರ್.ಡಿ.ಒ ಸ್ಥಾಪನೆಗೊಂಡವು. 1960 ರಲ್ಲಿ ಇಸ್ರೋ ಕಾರ್ಯಾರಂಭ ಮಾಡಿದರೆ, 1970 ರಲಿ ಮೊದಲ ಸ್ಯಾಟಲೈಟ್ ಆರ್ಯಭಟ ಉಪಗ್ರಹವನ್ನು ಬೆಂಗಳೂರಿನಲ್ಲಿ ತಯಾರಿಸಲಾಯಿತು. ಅಲ್ಲಿಂದ ನಾವು ಹಿಂತಿರುಗಿ ನೋಡಿಲ್ಲ. ಈಗ ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ರಕ್ಷಣಾ ವಲಯದ ಶೇ 65 ಉತ್ಪಾದನೆ ಬೆಂಗಳೂರಿನಲ್ಲಿ ಆಗುತ್ತಿದೆ ಎಂದರು.
45 ಸಾವಿರಕ್ಕೂ ಹೆಚ್ಚು ಯುವಕರ ಬಳಕೆ: ರಾಜ್ಯದಲ್ಲಿ ಏರೋಸ್ಪೇಸ್ ಹಾಗೂ ರಕ್ಷಣಾ ನೀತಿಯು ಜಾರಿಯಲ್ಲಿದ್ದು, ರಕ್ಷಣಾ ಹಾಗೂ ಏರೋಸ್ಪೇಸ್ ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸಲು 45 ಸಾವಿರಕ್ಕೂ ಹೆಚ್ಚು ಯುವಕರನ್ನು ತೊಡಗಿಸಿಕೊಳ್ಳಲಾಗುವುದು ಎಂದರು.
ಕರ್ನಾಟಕ 14 ನೇ ಏರೋ ಶೋ ಆಯೋಜಿಸಲು ಅವಕಾಶ ಮಾಡಿಕೊಟ್ಟಿರುವ ಪ್ರಧಾನಿಗಳು ಹಾಗೂ ರಕ್ಷಣಾ ಸಚಿವರಿಗೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದರು. ರಕ್ಷಣಾ ವಲಯದ ಶಕ್ತಿ ಹಾಗೂ ಸಾಮರ್ಥ್ಯ ವೃದ್ಧಿಗೆ ಕರ್ನಾಟಕ ತನ್ನ ಕೊಡುಗೆಯನ್ನು ನಿರಂತರವಾಗಿ ನೀಡಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.