ತೇರದಾಳ:ಮಕ್ಕಳಲ್ಲಿ ಓದುವಿಕೆ ವೃದ್ಧಿಗೆ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿ

ಪ್ರಾಯೋಗಿಕ ಕಲಿಕೆಗೆ ಮಕ್ಕಳು ಆಸಕ್ತಿ ಹೊಂದಿರುತ್ತಾರೆ

Team Udayavani, Feb 13, 2023, 1:15 PM IST

ತೇರದಾಳ:ಮಕ್ಕಳಲ್ಲಿ ಓದುವಿಕೆ ವೃದ್ಧಿಗೆ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿ

ತೇರದಾಳ: ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಳ್ಳುವ ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳಲ್ಲಿ ಹೊಸ ವಿಷಯಗಳ ಆವಿಷ್ಕಾರ ಮತ್ತು ಅವಿಷ್ಕಾರಕ್ಕಾಗಿ ಪುಸ್ತಕ ಓದಿಗೆ ಕಾರಣವಾಗುತ್ತವೆ. ಹೊರತು ಖರ್ಚುದಾಯಕವೆಂದು ಯಾರೂ ಭಾವಿಸಬಾರದೆಂದು ರಬಕವಿಯ ನಿವೃತ್ತ ಮುಖ್ಯಶಿಕ್ಷಕ ಉಮೇಶ ಹನಗಂಡಿ ಹೇಳಿದರು.

ಪಟ್ಟಣದ ಸಿದ್ಧೇಶ್ವರ ವಿದ್ಯಾವರ್ಧಕ ಸಂಘದ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಷನಲ್‌ ಪಬ್ಲಿಕ್‌ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಂತರ ಶಾಲಾ ಮಟ್ಟದ ವಿಜ್ಞಾನ ಹಾಗೂ ಕಲಾ ವಿಭಾಗದ ವಸ್ತು ಪ್ರದರ್ಶನ ಹಾಗೂ ಆಹಾರ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಾಲೆಗಳಲ್ಲಿ ಮಕ್ಕಳ ಜ್ಞಾನವಿಕಾಸಕ್ಕೆ ನಡೆಯುವ ಎಲ್ಲ ಚಟುವಟಿಕೆಗಳಿಗೆ ಪಾಲಕರ ಬೆಂಬಲ ಅವಶ್ಯವಿದ್ದು, ಶಿಕ್ಷಕರು ಮಕ್ಕಳಲ್ಲಿನ ಸೂಪ್ತ ಜ್ಞಾನವನ್ನು ಅರಿತು ಅವರಿಗೆ ಟಾಸ್ಕ್ ಕೊಡಬೇಕು. ಪ್ರಾಯೋಗಿಕ ಕಲಿಕೆಗೆ ಮಕ್ಕಳು ಆಸಕ್ತಿ ಹೊಂದಿರುತ್ತಾರೆ ಎಂದರು.

ಸಿಬಿಎಸ್‌ಇ ಶಾಲೆಯ ಚೇರಮನ್‌ ಶಂಕರ ಮಂಗಸೂಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ವಸ್ತು ಪ್ರದರ್ಶನದಲ್ಲಿ ತೇರದಾಳದ ಅಲ್ಲಮಪ್ರಭು ನೂತನ ದೇವಸ್ಥಾನದ ಮಾದರಿ, ಸೌರಚಾಲತ ಯಂತ್ರ, ಲಂಡನ್‌ ಸೇತುವೆ, ಸಾವಯವ ಕೃಷಿ ವಿಧಾನ, ಗ್ರಾಮೀಣ ಸೊಗಡಿನ ಮನೆ, ಸ್ವಯಂ ಚಾಲಿತ ಯಂತ್ರಗಳು, ಕನ್ನಡ ಸಾಹಿತ್ಯಕ್ಕೆ ಸಂಬಂಧಿಸಿದ ಮಾದರಿ ಚಿತ್ರ ಪಟಗಳು, ವಿಜ್ಞಾನದ ಮಾದರಿಗಳು ಗಮನ ಸೆಳೆದವು. ಕಿರಿಯರ ವಿಭಾಗಕ್ಕೆ ಏರ್ಪಡಿಸಲಾಗಿದ್ದ ಆಹಾರ ಮೇಳ ಹಾಗೂ ಮಕ್ಕಳ ಸಂತೆಯಲ್ಲಿ ಸಾಕಷ್ಟು ಮಕ್ಕಳು ತರಹೇವಾರಿ ತಿಂಡಿ, ತರಕಾರಿ, ಹಣ್ಣು, ಶಾಲಾ ಸಾಮಗ್ರಿಗಳನ್ನು ಮಾರಾಟ ಮಾಡಿದರು.

ದೊಡ್ಡ ಸಂತೆಯನ್ನು ನಾಚಿಸುವಂತೆ ಮಕ್ಕಳು ದೊಡ್ಡ ಧ್ವನಿಯಲ್ಲಿ ಗ್ರಾಹಕರನ್ನು ತಮ್ಮ ಮಳಿಗೆಗಳಿಗೆ ಕರೆದು ವಸ್ತುಗಳನ್ನು ಮಾರಾಟ ಮಾಡಿದ್ದು ವಿಶೇಷವಾಗಿತ್ತು. ಸಾಕಷ್ಟು ಪಾಲಕರು ಬಗೆಬಗೆಯ ತಿಂಡಿಗಳನ್ನು ಸವಿದು ತಲೆದೂಗಿದರು. ಸಾಂಪ್ರದಾಯಿಕ ಮಾರಾಟಗಾರರಂತೆ ಮಕ್ಕಳು ತಲೆಗೆ ಕಾಗದದ ಟೋಪಿ ಧರಿಸಿದ್ದರು. 25 ಸಾವಿರಕ್ಕೂ ಹೆಚ್ಚು ವ್ಯಾಪಾರ ವಹಿವಾಟು ನಡೆಸಿದ ಮಕ್ಕಳು ಪಾಲಕ ಹಾಗೂ ಶಿಕ್ಷಕರಿಂದ ಮೆಚ್ಚುಗೆ ಪಡೆದರು.

ಶಾಲಾ ಆಡಳಿತ ಮಂಡಳಿಯ ರಮೇಶ ಅವರಾದಿ, ಈರಪ್ಪ ಯಾದವಾಡ, ಶಿವಾನಂದ ನಿವರಗಿ, ಪ್ರಕಾಶ ಕಾಲತಿಪ್ಪಿ, ಪರಪ್ಪ ಅಥಣಿ, ಸಿದ್ದು ಅಮ್ಮಣಗಿ, ಮಲ್ಲಪ್ಪ ಮುಕರಿ, ಅರುಣ ಮುಕುಂದ, ಪ್ರಾಚಾರ್ಯ ಜಾಯ್‌ ಸೆಬ್‌ಸ್ಟಿನ್‌, ಡಿ.ಆರ್‌. ಮೊಮಿನ್‌, ಮುತ್ತು ಹುಕ್ಕೇರಿ, ನವೀನ ಬುರ್ಶಿ ಇದ್ದರು.

ಟಾಪ್ ನ್ಯೂಸ್

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.