ಬಾದನಹಟ್ಟಿ ಗ್ರಾಮದ ದೇವಿಯ ಕುಂಭೋತ್ಸವ: ಬರುವವರೇ ಎಚ್ಚರ!
ಕಸದ ರಾಶಿ; ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳ ಭೀತಿ
Team Udayavani, Feb 13, 2023, 7:24 PM IST
ಕುರುಗೋಡು : ಸಾರ್ವಜನಿಕರೇ, ವೃದ್ದರೆ, ಗರ್ಭಿಣಿಯರೇ, ಜನಪ್ರತಿನಿದಿನಗಳೆ ಬಾದನಹಟ್ಟಿ ಗ್ರಾಮದ ಊರು ದೇವರಿಗೆ ಬರಬೇಕೆಂದರೆ ಹುಷಾರ್.! ಹೌದು, ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ನಾಳೆ ಫೆ. 14 ರಂದು ಊರು ದೇವರು ಉಡುಸಲಮ್ಮ ದೇವಿಯ ಕುಂಭೋತ್ಸವ ಜರುಗಲಿದ್ದು, ಈ ಗ್ರಾಮದಲ್ಲಿ ಪ್ರತಿವರ್ಷ ಅದ್ದೂರಿಯಾಗಿ ಊರು ದೇವರು ಯಾವುದೇ ಸಮಸ್ಯೆಗೆ ಈಡಾಗದೆ ಸಾವಿರಾರು ಜನರ ಸಮ್ಮುಖದಲ್ಲಿ ನೆರವೇರುತ್ತದೆ. ಆದರೆ ಗ್ರಾಮ ಮಾತ್ರ ಆಡಳಿತ ನಾಟಕೀಯ ಸ್ವಚ್ಚತಾ ಕಾರ್ಯ ಮಾಡುವಲ್ಲಿ ತರಾ ತೂರಿಗೆ ಮುಂದಾಗಿರುವುದು ಕಂಡು ಬಂದಿದೆ.
ಬಾದನಹಟ್ಟಿ ಗ್ರಾಮದಲ್ಲಿ ಜರುಗುವ ಊರು ದೇವರಿಗೆ ಕುರುಗೋಡು, ಬಳ್ಳಾರಿ, ಸಿರುಗುಪ್ಪ, ಹೊಸಪೇಟೆ, ಸಂಡೂರು, ಕಂಪ್ಲಿ, ಇತರೆ ತಾಲೂಕು ಮತ್ತು ಜಿಲ್ಲೆ ಗಳಿಂದ ಸಾವಿರಾರು ಸಂಖ್ಯೆ ಯಲ್ಲಿ ಜನರು ಬಂದು ಭಾಗವಹಿಸುತ್ತಿದ್ದು ಇದಕ್ಕೆ ಗ್ರಾಪಂ ಆಡಳಿತ ಮಾತ್ರ ಸೂಕ್ತ ವ್ಯವಸ್ಥೆ ಒದಗಿಸುವಲ್ಲಿ ಹಿಂದೇಟು ಹಾಕಿದೆ. ಗ್ರಾಪಂ ಅಧಿಕಾರಿಗಳು ಮಾತ್ರ ಸಾರ್ವಜನಿಕರು ಪ್ರತಿಯೊಂದು ಏನೇ ಪ್ರಶ್ನೆ ಕೇಳಿದರು ಉಡಾಫೆ ಉತ್ತರ ನೀಡುತ್ತಾರೆ.
ಗ್ರಾಮದ ಚರಂಡಿ ಪಕ್ಕದಲ್ಲಿ ಬ್ಲಿಚಿಂಗ್ ಪೌಡರ್, ವಾರ್ಡ್ ಗಳಿಗೆ ಕುಡಿಯುವ ನೀರು, ಸ್ವಚ್ಛತೆ, ಚರಂಡಿ ಕ್ಲಿನಿಂಗ್, ರಸ್ತೆ ದುರಸ್ತಿ ಗಳು ಸೇರಿದಂತೆ ಇತರೆ ಕಾರ್ಯ ಗಳು ಸುಸಜ್ಜಿತವಾಗಿ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ.
ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಎಲ್ಲೆಡೆ ಸ್ವಚ್ಛತೆ ಪಾಠ ಬೋಧಿಸ ಲಾಗುತ್ತಿದ್ದರೂ ಸ್ಥಳಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಾತ್ರ ಚರಂಡಿಗಳ ಸ್ವಚ್ಛತೆ, ಸಮರ್ಪಕ ವಿಲೇವಾರಿ ಯಾಗದೇ ರೋಗಗಳ ಭೀತಿ ಆವರಿಸಿದೆ.
ರಸ್ತೆಗೆ ಚರಂಡಿ ನೀರು
ಗ್ರಾಮದಲ್ಲಿ ಹದಗೆಟ್ಟ ಚರಂಡಿ ವ್ಯವಸ್ಥೆಯಿಂದ ಕಲುಷಿತ ವಾತಾವರಣ ಸೃಷ್ಟಿಯಾಗಿದೆ. ತ್ಯಾಜ್ಯ, ನೀರು ಹರಿಯದೆ ಮಡುಗಟ್ಟಿನಿಂತಿದ್ದು, ರಸ್ತೆಯ ಮೇಲೆ ಕೊಳೆತು ನಿಂತಿರುವ ಕೊಳಚೆ ನೀರಿನಿಂದ ದುರ್ವಾಸನೆ ಬೀರುತ್ತಿದೆ. ಸಾಂಕ್ರಾಮಿಕ ರೋಗದ ಭೀತಿ ತಲೆದೋರಿದೆ. ಆದರೆ ಸ್ಥಳೀಯ ಆಡಳಿತ ಮಾತ್ರ ಸಂಪೂರ್ಣ ನಿರ್ಲಕ್ಷ್ಯವಹಿಸಿದೆ.ಬಾದನಹಟ್ಟಿ ಗ್ರಾಪಂನ ವಿವಿಧ ವಾಡ್ ಗಳಿಗೆ ತೆರಳುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯದೆ ರಸ್ತೆ ತುಂಬೆಲ್ಲಾ ನಿಂತಿದೆ.
ಸೊಳ್ಳೆ ಕಾಟ ಹೆಚ್ಚಳ
ನಿತ್ಯ ನೂರಾರು ಮಂದಿ ಓಡಾಡುವ ಈ ರಸ್ತೆಯಲ್ಲಿ ಕೊಳಚೆ ನೀರು ತುಂಬಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿದೆ ನಿರ್ಲಕ್ಷ್ಯ ತೋರಿದ್ದಾರೆ. ಚರಂಡಿ ಸ್ವಚ್ಛಗೊಳಿಸದೆ ದುರ್ವಾಸನೆ ಇದ್ದು ಸೊಳ್ಳೆ ಕಾಟ ಹೆಚ್ಚಾಗಿದೆ. ಸೊಳ್ಳೆ ಕಾಟಕ್ಕೆ ಸಂಜೆಯಾಗುತ್ತಿದ್ದಂತೆ ಮನೆಯಿಂದ ಹೊರ ಬರಲು ಜನ ಹಿಂದೇಟು ಹಾಕುತ್ತಾರೆ. ಕೊರೊನಾದಂತಹ ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳುವ ಭೀತಿ ಜನರಲ್ಲಿ ಎದುರಾಗಿದೆ.
ಗ್ರಾಮದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ತುಂಬಿದ್ದು ಸ್ವಚ್ಛ ಭಾರತ ಅಭಯಾನದ ಅಡಿ ಗ್ರಾಮೀಣ ಭಾಗದ ಪ್ರತಿಗ್ರಾಮಗಳಲ್ಲೂ ಕಸ ವಿಲೇವಾರಿಗೆ ಪಂಚಾಯಿತಿಗಳು ಸೂಕ್ತ ಕ್ರಮ ಕೈಗೊಂಡಿದೆ. ಆದರೆ ಬಾದನಹಟ್ಟಿ ಗ್ರಾಪಂ ಯಲ್ಲಿ ಕಸ ಸಂಗ್ರಹಿಸುತ್ತಿದ್ದರೂ ರಸ್ತೆ ಬದಿಗಳಲ್ಲಿ ಕಸ ಸುರಿಯುವ ಪ್ರವೃತ್ತಿ ಮಾತ್ರ ಕಡಿಮೆಯಾಗಿಲ್ಲ. ರಸ್ತೆ ಬದಿ ಕಸ ಹಾಕುವವರಿಗೆ ನೋಟಿಸ್ ನೀಡದೆ ಕ್ರಮ ಕೈಗೊಳ್ಳದೆ ಕಾನೂನುಗಳಿಗೆ ಯಾವುದೇ ಬೆಲೆ ಇಲ್ಲದಂತಾಗಿದೆ.
ತ್ಯಾಜ್ಯ ಕೊಡುವುದೇ ಇಲ್ಲ, ಮತ್ತಷ್ಟು ಮಂದಿ ಕೊಡುತ್ತಿದ್ದರೂ ಮಧ್ಯೆಮಧ್ಯೆ ವಾಹನವೇ ಬರುವುದಿಲ್ಲ ಎನ್ನುವ ದೂರು ವ್ಯಾಪಕವಾಗಿ ಕೇಳಿ ಬರುತ್ತಿದೆ. ಇನ್ನೊಂದೆಡೆ ಕಸದ ವಾಹನ ಬೆಳಗ್ಗೆಯೋ, ಮಧ್ಯಾಹ್ನವೋ, ಸಂಜೆಯೋ ಯಾವಾಗ ಬರುತ್ತದೆ ಎನ್ನುವುದು ಗೊತ್ತಾಗುವುದಿಲ್ಲ ಎಂದು ಜನರು ಕಾದು ಕಾದು ರಸ್ತೆಬದಿಯನ್ನೇ ತ್ಯಾಜ್ಯ ರಾಶಿ ಮಾಡಿಬಿಟ್ಟಿದ್ದಾರೆ.
ಹೀಗಾಗಿ ರಸ್ತೆ ಬದಿಗಳಲ್ಲಿ ಸಾರ್ವಜನಿಕರು ಕಸ ಸುರಿಯುತ್ತಿದ್ದಾರೆ ಎಂಬ ದೂರಿದೆ. ಒಟ್ಟಾರೆ ಒಂದೆಡೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸಾರ್ವಜನಿಕರಿಗೆ ತ್ಯಾಜ್ಯದಿಂದಾಗುವ ದುಷ್ಪರಿಣಾಮಗಳ ಅರಿವಿಲ್ಲದಾಗಿದೆ.
ಇದರ ಸ್ಥಿತಿ ತೋರಿಸಿದರೂ ಊರಿನ ಹದಗೆಟ್ಟ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಹೊಣೆಗಾರಿಕೆ ಪ್ರದರ್ಶಿಸುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಕೂಡ ಉದ್ದಟತನದಿಂದ ವರ್ತಿಸುತ್ತಿದ್ದಾರೆ. ಊರಿನಲ್ಲಿ ರೋಗ ಉಲ್ಬಣಿಸಿ ಸಾವು ಸಂಭವಿಸಿದರೆ ಅದಕ್ಕೆ ಯಾರು ಹೊಣೆ, ಎಂಬುವುದು ಸಾರ್ವಜನಿಕರ ಪ್ರಶ್ನೆ ಯಾಗಿದೆ. ಕಸ ಬಿಸಾಡುವ ಜನರಿಗೆ ಜಾಗೃತಿ ಮೂಡಿಸುವಲ್ಲಿ ಗ್ರಾಪಂ ವಿಫಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.