5 ವರ್ಷದಲ್ಲಿ ಅಭಿವೃದ್ಧಿ ಕಾರ್ಯ ಮಾಡದಿದ್ದರೆ ಹೆಸರು ಬದಲು: ಸಚಿವ ಅಶ್ವತ್ಥ ನಾರಾಯಣ
Team Udayavani, Feb 15, 2023, 6:15 AM IST
ಮಂಡ್ಯ: 50 ವರ್ಷಗಳಲ್ಲಿ ಮಾಡದ ಅಭಿವೃದ್ಧಿ ಕಾರ್ಯಗಳನ್ನು ಕೇವಲ ಐದೇ ವರ್ಷಗಳಲ್ಲಿ ಮಾಡದಿದ್ದರೆ ನನ್ನ ಹೆಸರನ್ನೇ ಬದಲಾಯಿಸಿಕೊಳ್ಳುತ್ತೇನೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸವಾಲು ಹಾಕಿದರು.
ತಾಲೂಕಿನ ಸಾತನೂರಿನ ಕಂಬದ ನರಸಿಂಹಸ್ವಾಮಿ ದೇವಾಲಯ ಆವರಣದಲ್ಲಿ ಬಿಜೆಪಿ ವತಿಯಿಂದ ಕಸಬಾ ಮಹಾಶಕ್ತಿ ಕೇಂದ್ರ ಉದ್ಘಾಟಿಸಿ ಮಾತನಾಡಿ, ಮೈಸೂರು ಮಹಾರಾಜರ ಕಾಲದಲ್ಲಿ ಉತ್ತಮ ಆಡಳಿತ ನೀಡಿ, ಅಭಿವೃದ್ಧಿ ಕೆಲಸ ಮಾಡಿದ್ದರು. ಅವರ ಕೊಡುಗೆಗಳು ವಿಶ್ವವೇ ಎದುರು ನೋಡುವ ಆಡಳಿತ ಕೊಟ್ಟಿದ್ದರು. ಅಂತಹ ಸಾಧನೆಯನ್ನು ಯಾರೂ ಮಾಡಲಿಲ್ಲ ಎಂದು ಪರೋಕ್ಷವಾಗಿ ಜೆಡಿಎಸ್ ವಿರುದ್ಧ ಹರಿಹಾಯ್ದರು.
ಜಿಲ್ಲಾ ಉಸ್ತುವಾರಿ ವಹಿಸಿಕೊಳ್ಳಲು ಹಿಂದೇಟು:
ಕಂದಾಯ ಸಚಿವ ಆರ್.ಅಶೋಕ್, ಮಂಡ್ಯ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ವಿಮುಕ್ತಿಗೊಳಿಸಿದ ಬಳಿಕ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ವಹಿಸಿಕೊಳ್ಳಲಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಅವರು ಸಹ ಮಂಡ್ಯ ಜಿಲ್ಲಾ ಉಸ್ತುವಾರಿ ವಹಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ.
ಮಂಗಳವಾರ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಬಗ್ಗೆ ಪ್ರೀತಿ ಹಾಗೂ ಬಾಂಧವ್ಯ ಎರಡೂ ಇದೆ. ಉಸ್ತುವಾರಿ ನಿಭಾಯಿಸಲು ಬೊಮ್ಮಾಯಿ ಸಂಪುಟದಲ್ಲಿ ಹಲವು ಸಮರ್ಥ ಸಚಿವರಿದ್ದು, ಜಿಲ್ಲೆಯ ಬಗ್ಗೆ ಅಭಿಮಾನವೇ ಬೇರೆ, ಜವಾಬ್ದಾರಿಯಾಗಿ ಆಡಳಿತ ನಿರ್ವಹಿಸುವುದೇ ಬೇರೆ ಎನ್ನುವ ಮೂಲಕ ಪರೋಕ್ಷವಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ವಹಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ.
ಹೆಚ್ಚಿನ ಮಾಹಿತಿ ಇಲ್ಲ:
ತಾಲೂಕಿನ ಸಾತನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಉಸ್ತುವಾರಿ ನಿಶ್ಚಯ ಮಾಡುವುದು ಮುಖ್ಯಮಂತ್ರಿಗಳು. ಈ ವಿಚಾರದಲ್ಲಿ ಹೆಚ್ಚಿನ ಮಾಹಿತಿ ಇಲ್ಲ. ಮಂಡ್ಯ ಜಿಲ್ಲೆ ವಿಚಾರದಲ್ಲಿ ಪಕ್ಷ ಸಂಘಟನೆ ಜವಾಬ್ದಾರಿಯನ್ನಷ್ಟೇ ನಾನು ವಹಿಸಿಕೊಂಡಿದ್ದು, ಉಸ್ತುವಾರಿ ಕೇಳುವುದು ಅಥವಾ ಬೇಡ ಎನ್ನುವುದು ನನಗೆ ಸಂಬಂಧಿಸಿದ್ದಲ್ಲ. ಅದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.