![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 15, 2023, 7:23 AM IST
ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿಸಿರುವ ಚುನಾವಣಾ ಉಸ್ತುವಾರಿಗಳ ಜತೆಗೆ ಬಿಜೆಪಿ ಹಿರಿಯ ನಾಯಕರ ಸಭೆ ಬೆಂಗಳೂರಿನಲ್ಲಿ ಬುಧವಾರ ನಡೆಯಲಿದೆ.
ಈ ಸಭೆಗೆ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಆಗಮಿಸುತ್ತಾರೆಂದು ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ ಕೊನೇ ಹಂತದಲ್ಲಿ ಅವರ ಪ್ರವಾಸ ರದ್ದಾಗಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಖಾಸಗಿ ಹೊಟೇಲ್‌ನಲ್ಲಿ ನಡೆಯುವ ಈ ಸಭೆಯಲ್ಲಿ 224 ಕ್ಷೇತ್ರಗಳ ಉಸ್ತುವಾರಿಗಳು ಭಾಗವಹಿಸಲಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಗವಹಿಸುವರು. ಈ ಸಭೆಯ ಬಳಿಕ ಉಸ್ತುವಾರಿಗಳಿಗೆ ಒಂದು ತಿಂಗಳ “ಟಾಸ್ಕ್ ‘ ನೀಡಲಾಗುತ್ತದೆ.
ವಿಸ್ತಾರಕರ ರೀತಿ ಉಸ್ತುವಾರಿಗಳೂ ಕೆಲಸ ಮಾಡುವ ಜತೆಗೆ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಇರುವ ಗೊಂದಲ ಶಮನ ಮಾಡಿ. ಸಂಭಾವ್ಯ ಆದರೆ ಗೆಲ್ಲುವ ಅಭ್ಯರ್ಥಿಯ ಹೆಸರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರಿಗೆ ಮುಚ್ಚಿದ ಲಕೋಟೆಯಲ್ಲಿ ತಲುಪಿಸುವಂತೆ ಸೂಚಿಸಲಾಗಿದೆ.
ಶಾಸಕಾಂಗ ಪಕ್ಷದ ಸಭೆ :
ಅದೇ ರೀತಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯೂ ಬುಧವಾರ ಸಂಜೆ ಆರು ಗಂಟೆಗೆ ನಡೆಯಲಿದೆ. ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿದೆ. ಇದರ ಜತೆಗೆ ಚುನಾವಣೆ ಸಿದ್ಧತೆ ಹಾಗೂ ಇನ್ನಿತರ ವಿದ್ಯಮಾನಗಳ ಬಗ್ಗೆಯೂ ಇಲ್ಲಿ ಚರ್ಚಿಸಲಾಗುತ್ತದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.