ಹುಬ್ಬಳ್ಳಿ: ಫೆ.16ರಿಂದ ಈಶ್ವರ ದೇಗುಲ ಶತಮಾನೋತ್ಸವ
ಗುರುನಾಥಾರೂಢ ಸ್ವಾಮಿಗಳ ಹಾಗೂ ಈಶ್ವರ ದೇವರ ರಥೋತ್ಸವ ನಡೆಯಲಿದೆ
Team Udayavani, Feb 15, 2023, 2:35 PM IST
ಹುಬ್ಬಳ್ಳಿ: ಬಮ್ಮಾಪುರ ಚಿತ್ರಗಾರ ಓಣಿ ಈಶ್ವರ ದೇವಸ್ಥಾನದ ಶತಮಾನೋತ್ಸವ ನಿಮಿತ್ತ ಫೆ.16ರಿಂದ 22ರ ವರೆಗೆ ಧರ್ಮ ಜಾಗೃತಿ ಕಾರ್ಯಕ್ರಮ ಮತ್ತು ರಥೋತ್ಸವ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಸ್ಥಾನದ ಗೌರವಾಧ್ಯಕ್ಷ ಪ್ರಕಾಶ ಬೆಂಡಿಗೇರಿ, ಈಶ್ವರ ದೇವಸ್ಥಾನ ಸದ್ಗುರು ಸಿದ್ಧಾರೂಢ ಸ್ವಾಮಿಗಳ ಅಮೃತ ಹಸ್ತದಿಂದ ಸ್ಥಾಪಿಸಲ್ಪಟ್ಟು ಈಗ 100 ವರ್ಷ ಪೂರ್ಣಗೊಂಡಿದ್ದರಿಂದ ಶತಮಾನೋತ್ಸವ ಸಂಭ್ರಮದಲ್ಲಿದ್ದೇವೆ. ಆ ನಿಮಿತ್ತ ಜನಜಾಗೃತಿ ಧರ್ಮ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.’
ಫೆ.16ರಿಂದ 22ರ ವರೆಗೆ ಪ್ರತಿದಿನ ಬೆಳಗ್ಗೆ 7 ಗಂಟೆಗೆ ಶ್ರೀ ಈಶ್ವರ ದೇವರಿಗೆ ರುದ್ರಾಭಿಷೇಕ ನಡೆಯಲಿದೆ. 16ರಂದು ಬೆಳಗ್ಗೆ 8 ಗಂಟೆಗೆ ಸಿದ್ಧಾರೂಢ ಮಠದ ಕೈಲಾಸ ಮಂಟಪದಿಂದ 108 ಪೂರ್ಣ ಕುಂಭದೊಂದಿಗೆ ಮೆರವಣಿಗೆ ನಡೆಯಲಿದೆ. ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಶಾಂತಿ ಅವರು ಮೆರವಣಿಗೆ ಉದ್ಘಾಟಿಸಲಿದ್ದಾರೆ. ಐರಣಿ ಹೊಳೆಮಠದ ಶ್ರೀ ಸದ್ಗುರು ಬಸವರಾಜ ದೇಶಿಕೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ.
ಅತಿಥಿಗಳಾಗಿ ಶ್ರೀ ಮಠದ ಟ್ರಸ್ಟ್ ಸಮಿತಿ ಸದಸ್ಯರು ಪಾಲ್ಗೊಳಲಿದ್ದಾರೆ. ಸಂಜೆ 4:30 ಗಂಟೆಗೆ ದೇವಸ್ಥಾನದ ಬಳಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹಾಗೂ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಅತಿಥಿಗಳಾಗಿ ಶಾಸಕ ಪ್ರಸಾದ ಅಬ್ಬಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
17ರಂದು ಸಂಜೆ 4:30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಮಣಕವಾಡ ಶ್ರೀ ಅಭಿನವ ಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಪಾಲ್ಗೊಳ್ಳಲಿದ್ದಾರೆ. ನಂತರ ಪ್ರಸಾದ ಸೇವೆ ನಡೆಯಲಿದೆ. 18ರಂದು ಮಧ್ಯಾಹ್ನ 1 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಪ್ರಸಾದ ಸೇವೆ ನಡೆಯಲಿದೆ. ಸಂಜೆ 4:30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಶಿರಕೋಳ ಶ್ರೀ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಅತಿಥಿಗಳಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
19ರಂದು ಸಂಜೆ 4:30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸುಳ್ಳ ಪಂಚಗ್ರಹ ಹಿರೇಮಠ ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪಾಲ್ಗೊಳ್ಳಲಿದ್ದಾರೆ. 20ರಂದು ಮಹಾಶಿವರಾತ್ರಿ ಅಮವಾಸ್ಯೆ ಬೆಳಗ್ಗೆ 7 ಗಂಟೆಗೆ ದೇವರಿಗೆ ರುದ್ರಾಭಿಷೇಕ ನಡೆಯಲಿದೆ. ಅಮ್ಮಿನಬಾವಿ ಶ್ರಿ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಸಚಿವ ಶಂಕರಪಾಟೀಲ ಮುನೇನಕೊಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು.
21ರಂದು ಸಂಜೆ 4:30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸೂಡಿ ಶ್ರೀ ಕೊಟ್ಟೂರ ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಪ್ರವಚನ ನೀಡಲಿದ್ದಾರೆ. ಕೆಎಲ್‌ಇ ಸಂಸ್ಥೆ ಶಂಕರಣ್ಣ ಮುನವಳ್ಳಿ ಪಾಲ್ಗೊಳ್ಳಲಿದ್ದಾರೆ. 22ರಂದು ಸಾಯಂಕಾಲ 4:30 ಗಂಟೆಗೆ ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿ, ಗುರುನಾಥಾರೂಢ ಸ್ವಾಮಿಗಳ ಹಾಗೂ ಈಶ್ವರ ದೇವರ ರಥೋತ್ಸವ ನಡೆಯಲಿದೆ. ಸಂಜೆ 7 ಗಂಟೆಗೆ ಶತಮಾನೋತ್ಸವ ಸಮಾರಂಭದ ಸಮಾರೋಪ ನಡೆಯಲಿದ್ದು, ಮೂರುಸಾವಿರಮಠದ ಜಗದ್ಗುರು ಡಾ| ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.ಮಹೇಶ ಮುರಗೋಡ, ಮಲ್ಲಿಕಾರ್ಜುನ ಶಿರಗುಪ್ಪಿ, ಬಾಲಕೃಷ್ಣ ಸೂರ್ಯವಂಶಿ, ಗಣೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.