ಸಕಲೇಶಪುರ: ಕಾಡ್ಗಿಚ್ಚು ನಂದಿಸಲು ಹೋದ ಅರಣ್ಯ ಸಿಬಂದಿಗಳಿಬ್ಬರು ಚಿಂತಾಜನಕ
ಇಬ್ಬರಿಗೆ ಗಾಯ, ಇಬ್ಬರು ಪಾರು
Team Udayavani, Feb 16, 2023, 7:09 PM IST
ಸಕಲೇಶಪುರ : ಕಾಡ್ಗಿಚ್ಚನ್ನು ನಂದಿಸಲು ಹೋದ ಆರು ಜನ ಅರಣ್ಯ ಇಲಾಖೆ ಸಿಬಂದಿಗಳಲ್ಲಿ ಇಬ್ಬರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರು ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತಾಲೂಕಿನ ಕಾಡುಮನೆ ಸಮೀಪ ಗುರುವಾರ ನಡೆದಿದೆ.
ಕಾಡುಮನೆ ಸಮೀಪ ಮಣಿಬೀಡು ದೇವಸ್ಥಾನದ ಸಮೀಪವಿರುವ ಪಶ್ಚಿಮ ಘಟ್ಟದ ಕಾಡಿನಲ್ಲಿ ಅಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯನ್ನು ನಂದಿಸಲು ಹೋದ ಅರಣ್ಯ ಇಲಾಖೆಯ ಸಿಬಂದಿಗಳು ಬೆಂಕಿಗೆ ಸಿಲುಕಿಕೊಂಡ ಪರಿಣಾಮ ಫಾರೆಸ್ಟರ್ ಮಂಜುನಾಥ್, ಅರಣ್ಯ ರಕ್ಷಕ ಸುಂದರೇಶ್ ಗಂಭೀರವಾಗಿ ಸುಟ್ಟ ಗಾಯಗಳೊಂದಿಗೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಅರಣ್ಯ ವೀಕ್ಷಕ ತುಂಗೇಶ್ ಹಾಗೂ ಮಹೇಶ್ ಗೆ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.
ಗುರುವಾರ ಮಧ್ಯಾಹ್ನ ಸುಮಾರು 1.30 ರ ವೇಳೆಯಲ್ಲಿ ಈ ಘಟನೆ ನಡೆದಿದೆ.ಬೆಂಕಿಯಲ್ಲಿ ಕಾಡಿನ ನಡುವೆ ಸಿಲುಕಿದ ಅರಣ್ಯ ಇಲಾಖೆ ಸಿಬಂದಿಗಳು ಕಾಡಿನಿಂದ ಗ್ರಾಮಸ್ಥರು ಹಾಗೂ ಇತರ ಅರಣ್ಯ ಇಲಾಖೆ ಸಿಬಂದಿಗಳ ನೆರವಿನಿಂದ ಸುಮಾರು 12 ಕಿ.ಮೀ ದೂರ ಗಾಯಾಳುಗಳನ್ನು ಎತ್ತಿಕೊಂಡು ಬಂದು ನಂತರ ಆ್ಯಂಬುಲೆನ್ಸ್ ಮುಖಾಂತರ ಪಟ್ಟಣದ ಕ್ರಾಫರ್ಡ್ ಅಸ್ಪತ್ರೆಗೆ ಚಿಕಿತ್ಸೆಗಾಗಿ ಕರೆ ತಂದು ಹಾಸನದ ಜಿಲ್ಲಾಸ್ಫತ್ರೆಗೆ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.