Budget 2023: ಖಬರಸ್ತಾನ್ ಅಭಿವೃದ್ಧಿಗೆ 10 ಕೋಟಿ-ಅಲ್ಪಸಂಖ್ಯಾತ ಸಮುದಾಯಕ್ಕೆ ಸಿಕ್ಕಿದ್ದೇನು
ರಾಜ್ಯದಲ್ಲಿ 40,000ಕ್ಕಿಂತಲೂ ಹೆಚ್ಚು ವಕ್ಫ್ ಆಸ್ತಿಗಳಿವೆ
Team Udayavani, Feb 17, 2023, 6:01 PM IST
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು ಶೇಕಡ 97ರಷ್ಟು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಶೇಕಡ 90ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಇಂತಹ ವಿದ್ಯಾರ್ಥಿಗಳ ಗುಣಾತ್ಮಕ ಉನ್ನತ ಶಿಕ್ಷಣ ಒದಗಿಸಲು ಮೆಟ್ರಿಕ್ ನಂತರದ 100 ವಿದ್ಯಾರ್ಥಿ ನಿಲಯಗಳಲ್ಲಿ ಸಂಖ್ಯಾಬಲವನ್ನು 2,500ಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಆಯವ್ಯಯ ಮಂಡನೆಯಲ್ಲಿ ಘೋಷಿಸಿದ್ದಾರೆ.
*ರಾಜ್ಯದ 29 ಸ್ಥಳಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ 6ರಿಂದ 12ನೇ ತರಗತಿಯವರೆಗೆ ಸಿಬಿಎಸ್ ಇ ಪಠ್ಯಕ್ರಮದೊಂದಿಗೆ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಈ ಶಾಲೆಗಳನ್ನು 25 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ.
*ಪ್ರಸಕ್ತ ಸಾಲಿನಲ್ಲಿ 96 ಕೋಟಿ ರೂ.ಅನುದಾನದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ವ್ಯಾಪ್ತಿಯ 31 ವಸತಿ ಶಾಲೆಗಳು, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಸುಮಾರು 7,800 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
*ಅಲ್ಪಸಂಖ್ಯಾತರ ನಿರ್ದೇಶನಾಲಯದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ತರಬೇತಿ ನೀಡಲು 2 ಕೋಟಿ ರೂಪಾಯಿ ಒದಗಿಸಲಾಗುವುದು.
*ವಿಶ್ವದಲ್ಲಿ 250ರೊಳಗೆ ಯೂನಿರ್ವಸಿಟಿ Ranking ಹೊಂದಿರುವ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗವನ್ನು ವಿದೇಶದಲ್ಲಿ ಮಾಡಲು ಇಚ್ಚಿಸುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ.ನಂತೆ ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಲು ಬಡ್ಡಿ ಸಹಾಯಧನ ನೀಡಲಾಗುವುದು.
*ಅಲ್ಪಸಂಖ್ಯಾತರ ಪದವೀಧರ ಮಹಿಳೆಯರು ಉತ್ತಮ ಉದ್ಯೋಗಾವಕಾಶ ಪಡೆಯಲು ಹಾಗೂ ಸ್ವಂತ ಉದ್ದಿಮೆ ಪ್ರಾರಂಭಿಸಲು ಪ್ರತಿಷ್ಠಿತ ಸಂಸ್ಥೆಯಾದ ಐಐಎಂಬಿ ಬೆಂಗಳೂರಿನಲ್ಲಿ 300 ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿಯನ್ನು 3 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು.
*ರಾಜ್ಯದಲ್ಲಿ 40,000ಕ್ಕಿಂತಲೂ ಹೆಚ್ಚು ವಕ್ಫ್ ಆಸ್ತಿಗಳಿದ್ದು, ಇವುಗಳ ಸಂರಕ್ಷಣೆಗೆ ಮತ್ತು ಅಭಿವೃದ್ಧಿಗಾಗಿ 2023-24ನೇ ಸಾಲಿನಲ್ಲಿ 10 ಕೋಟಿ ರೂ. ಮತ್ತು ಖಬರಸ್ತಾನ್ ಗಳ ಅಭಿವೃದ್ಧಿಗಾಗಿ 10 ಕೋಟಿ ರೂ. ಅನುದಾನ ಒದಗಿಸಲಾಗುವುದು.
*ಅಲ್ಪಸಂಖ್ಯಾತರಲ್ಲಿ ಅತೀ ಹಿಂದುಳಿದ ಪಿಂಜಾರ, ದರ್ವೇಸು ಮತ್ತು ನದಾಫ್ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಎಲ್ಲಾ ಯೋಜನೆಗಳಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು.
*ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಕಳೆದ ಆಯವ್ಯಯದಲ್ಲಿ 60 ಕೋಟಿ ರೂ. ಒದಗಿಸಲಾಗಿದ್ದು, ಪ್ರಸಕ್ತ ಆಯವ್ಯಯದಲ್ಲಿ ಈ ಮೊತ್ತವನ್ನು 110 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ. ನಿಗಮಕ್ಕೆ ನೀಡಿರುವ ಹೆಚ್ಚುವರಿ ಅನುದಾನ ಮತ್ತು ಈಗಾಗಲೇ ಲಭ್ಯವಿರುವ ಮೊತ್ತವೂ ಸೇರಿದಂತೆ 2023-24ರಲ್ಲಿ, 306 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.