ರಾಜ್ಯ ಬಜೆಟ್: ಅಗ್ನಿಶಾಮಕ ದಳಕ್ಕೆ ಹೈಟೆಕ್ ಸ್ಪರ್ಶ
Team Udayavani, Feb 17, 2023, 9:00 PM IST
ಬೆಂಗಳೂರು: ಬೆಂಕಿ ಅನಾಹುತ ಸಂಭವಿಸಿದಾಗ ಆಪ್ತಮಿತ್ರರಂತೆ ಧಾವಿಸಿ, ಜನರ ಪ್ರಾಣ-ಆಸ್ತಿಪಾಸ್ತಿ ಹಾನಿ ತಪ್ಪಿಸುವಂಥ ಅಗ್ನಿಶಾಮಕ ದಳಕ್ಕೆ ಹೈಟೆಕ್ ಸ್ಪರ್ಶ ನೀಡುವ ಕೆಲಸವನ್ನು ಸರ್ಕಾರ ಮುಂದುವರಿಸಿದೆ.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಕೆ-ಸೇಫ್-2 ಯೋಜನೆ ಅಡಿ ಕಳೆದ ಮೂರು ವರ್ಷಗಳಲ್ಲಿ 125 ಕೋಟಿ ರೂ. ಒದಗಿಸಲಾಗಿದೆ.
ರಾಜ್ಯದಲ್ಲಿ ಪ್ರಥಮ ಬಾರಿಗೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ತಡೆಯಲು ಹಾಗೂ ರಕ್ಷಣಾ ಕಾರ್ಯ ನಿರ್ವಹಿಸಲು 90 ಮೀಟರ್ ಎತ್ತರ ತಲುಪಬಲ್ಲ “ಏರಿಯಲ್ ಲ್ಯಾಡರ್ ಫ್ಲಾಟ್‌ಫಾರಂ ವಾಹನ’ ಖರೀದಿಸಲಾಗಿದೆ. ಈ ಕ್ರಮಗಳಿಂದ ಪ್ರಸ್ತುತ ಸಾಲಿನಲ್ಲಿ ಅಗ್ನಿಶಾಮಕ ಇಲಾಖೆಯಿಂದ 3,521 ಮಾನವ ಜೀವ ಹಾಗೂ 794.6 ಕೋಟಿ ರೂ. ಮೊತ್ತದ ಆಸ್ತಿ ಪಾಸ್ತಿ ರಕ್ಷಣೆ ಮಾಡಲು ಸಾಧ್ಯವಾಗಿದೆ.
ಈ ಬಾರಿ ಈ ಯೋಜನೆಗೆ 100 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ. ಇನ್ನು ದಾವಣಗೆರೆ ನಗರದಲ್ಲಿ ಹೊಸ ಎಸ್‌ಡಿಆರ್‌ಎಫ್ ಕಂಪನಿ ಮಂಜೂರು ಮಾಡಲಾಗಿದೆ. ರಾಜ್ಯದಲ್ಲಿನ ಎಸ್‌ಡಿಆರ್‌ಎಫ್ ಪಡೆಗಳಿಗೆ 30 ಕೋಟಿ ರೂ. ಮೊತ್ತದ ಶೋಧನಾ ಮತ್ತು ರಕ್ಷಣಾ ಉಪಕರಣಗಳನ್ನು ಒದಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.