ಬಿಬಿಸಿಯಿಂದ ತೆರಿಗೆ ವಂಚನೆ ದೃಢ: ಸಿಬಿಡಿಟಿ
ಮೂರು ದಿನಗಳ ಸಮೀಕ್ಷೆ ಬಗ್ಗೆ ಹೇಳಿಕೆ ಬಿಡುಗಡೆ
Team Udayavani, Feb 18, 2023, 6:20 AM IST
ನವದೆಹಲಿ:ದೇಶದಲ್ಲಿ ಕಾರ್ಯವೆಸಗುವ ಬಿಬಿಸಿಯ ಮುಂಬೈ, ನವದೆಹಲಿ ಕಚೇರಿಗಳಿಂದ ನಿಯಮಿತವಾಗಿ ತೆರಿಗೆ ಪಾವತಿ ಆಗಿಲ್ಲ. ಜತೆಗೆ, ಆದಾಯ ಮತ್ತು ಲಾಭಕ್ಕೆ ಸಂಬಂಧಿಸಿದಂತೆ ಭಾರೀ ವ್ಯತ್ಯಾಸಗಳು ಪತ್ತೆಯಾಗಿವೆ ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಶುಕ್ರವಾರ ಸ್ಪಷ್ಟನೆ ನೀಡಿದೆ. ಮಂಗಳವಾರ ಶುರುವಾಗಿದ್ದ ಸಮೀಕ್ಷೆ ಗುರುವಾರ ಮುಕ್ತಾಯವಾಗಿತ್ತು.
ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿದ ಬಳಿಕ ಮಂಡಳಿ ಈ ಹೇಳಿಕೆ ನೀಡಿದೆ. ಆದರೆ, ಈ ಹೇಳಿಕೆಯಲ್ಲಿ ಬಿಬಿಸಿಯ ಕಚೇರಿಯ ಹೆಸರನ್ನೇ ಉಲ್ಲೇಖಿಸಲಾಗಿಲ್ಲ. ಎರಡೂ ಕಚೇರಿಗಳಲ್ಲಿ ಕೆಲಸ ಮಾಡುತ್ತಿರುವವರ ಹೇಳಿಕೆ, ಡಿಜಿಟಲ್ ದಾಖಲೆಗಳು, ದಾಖಲೆಗಳನ್ನು ಪರಿಶೀಲನೆ ನಡೆಸಿದ ಬಳಿಕ ದೇಶದಲ್ಲಿ ಕಾರ್ಯವೆಸಗುವ ಬಿಬಿಸಿ ಹಾಗೂ ಸಹವರ್ತಿ ಸಂಸ್ಥೆಗಳಿಗೆ ಬರುವ ಲಾಭಕ್ಕೆ ಸಂಬಂಧಿಸಿದಂತೆ ಕೆಲವು ತೆರಿಗೆ ಪಾವತಿ ಮಾಡಲಾಗಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಸಂಸ್ಥೆ ದೇಶದಲ್ಲಿ ನಡೆಸುತ್ತಿರುವ ವಹಿವಾಟಿಗೆ ಅನ್ವಯವಾಗುವಂತೆ ತೆರಿಗೆ ಮಾಹಿತಿ ಸಲ್ಲಿಕೆ ಮಾಡಲಾಗಿಲ್ಲ ಎಂದು ಸಿಬಿಡಿಟಿ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಿತ ಸಾಕ್ಷ್ಯ ಚಿತ್ರವನ್ನು ಪ್ರಸಾರ ಮಾಡಿ, ಬಿಬಿಸಿ ವಿವಾದಕ್ಕೆ ಗುರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.