ಬೆಳ್ತಂಗಡಿ: ಜಾಂಡಿಸ್ ಉಲ್ಬಣಗೊಂಡು ಯುವಕ ಸಾವು
Team Udayavani, Feb 17, 2023, 11:50 PM IST
ಬೆಳ್ತಂಗಡಿ: ಜಾಂಡಿಸ್ ಕಾಯಿಲೆ ಉಲ್ಬಣಿಸಿದ ಪರಿಣಾಮ ನಾವೂರು ಗ್ರಾಮದ ನಿರ್ದಿಂ ನಿವಾಸಿ ಅಬ್ದುಲ್ ಮುತ್ತಲಿಬ್ ಮತ್ತು ಝುಬೈದಾ ದಂಪತಿ ಪುತ್ರ ಮುಹಮ್ಮದ್ ಹನೀಫ್ (22) ಅವರು ಫೆ. 15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬೆಳ್ತಂಗಡಿಯ ಚಿನ್ನದ ಮಳಿಗೆಯಲ್ಲಿ ಮಾರುಕಟ್ಟೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರಿಗೆ ಕೆಲವು ದಿನಗಳಿಂದ ಅನಾರೋಗ್ಯ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆದುಕೊಂಡಿದ್ದರು. ಹೀಗಿರುವಂತೆಯೇ ಅವರಿಗೆ ರೋಗ ಉಲ್ಬಣಿಸಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಾದವರು ಮೃತಪಟ್ಟಿದ್ದಾರೆ. ಮುಹಮ್ಮದ್ ಹನೀಫ್ ಅವರು ಎಸ್ಸೆಸ್ಸೆಫ್ ಸಂಘಟನೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.