ನೈಜ ಘಟನೆ ಮೇಲೊಂದು ಚಿತ್ರ: ಮಂಸೋರೆ ನಿರ್ದೇಶನದ ‘19.20.21′
Team Udayavani, Feb 18, 2023, 4:39 PM IST
ಮಂಸೋರೆ ನಿರ್ದೇಶನದ, ದೇವರಾಜ್ ಆರ್. ನಿರ್ಮಾಣದ “19.20.21′ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರ ಮಾರ್ಚ್ 3ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡ ಟ್ರೇಲರ್ ಬಿಡುಗಡೆ ಮಾಡಿದ್ದು, ಹೋರಾಟಗಾರ್ತಿ ಅಕ್ಕೆ„ ಪದ್ಮಶಾಲಿ ಹಾಗೂ ನಿರ್ದೇಶಕ ಹಂಸಲೇಖ ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದರು.
ನಿರ್ದೇಶಕ ಮಂಸೋರೆ ಮಾತನಾಡಿ, “ನೈಜ ಘಟನೆ ಆಧರಿಸಿದ ಸಿನಿಮಾ ಇದಾಗಿದ್ದು, ಕರಾವಳಿಯಲ್ಲಿ ಎರಡು ದಶಕಗಳ ಕಾಲ ಒಂದು ಸಮುದಾಯ ಅನುಭವಿಸಿದ ನೋವು, ಆ ನೋವಿನ ವಿರುದ್ಧ ನಡೆಸಿದ ಹೋರಾಟ ಈ ಸಿನಿಮಾ ಮಾಡಲು ಸ್ಫೂರ್ತಿ. ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಕಲೆ ಹಾಕಿದ್ದೇನೆ. 2021ರಲ್ಲಿ ಘಟನೆಗೆ ಸಂಬಂಧಿಸಿದ ತೀರ್ಪು ಬಂದ ಮೇಲೆ ಸಿನಿಮಾ ಮಾಡಲು ನಿರ್ಧರಿಸಿ, ವೀರೇಂದ್ರ ಮಲ್ಲಣ್ಣ ಮತ್ತು ಸಂತೋಷ್ ಜೊತೆ ಸೇರಿ ಈ ಘಟನೆಗೆ ಸಂಬಂಧಿಸಿದ ಮಾಹಿತಿ ಕಲೆ ಹಾಕಿ ಸ್ಕ್ರಿಪ್ಟ್ ಮಾಡಿದ್ದೇವೆ. ಸಮುದಾಯದ ಒಬ್ಬ ಹುಡುಗನ ಹೋರಾಟದ ಕಥೆ ಇದು.
ನಿರ್ಮಾಪಕರಾದ ದೇವರಾಜ್ ಹಾಗೂ ಸಹ ನಿರ್ಮಾಪಕರಾದ ಸತ್ಯ ಹೆಗ್ಡೆ ಕಥೆ ಕೇಳಿ ಸಿನಿಮಾ ನಿರ್ಮಾಣಕ್ಕೆ ಒಪ್ಪಿಕೊಂಡರು. ಮಾರ್ಚ್ 3ರಂದು ಸಿನಿಮಾ ಬಿಡುಗಡೆಯಾಗುತ್ತಿದೆ’ ಎಂದರು.
ಸಹ ನಿರ್ಮಾಪಕರಾದ ಸತ್ಯ ಹೆಗ್ಡೆ ಮಾತನಾಡಿ, “ಚಿತ್ರದ ಸ್ಕ್ರಿಪ್ಟ್ ತುಂಬಾ ಇಷ್ಟ ಆಯ್ತು. ರೆಗ್ಯೂಲರ್ ಸಿನಿಮಾ ಬಿಟ್ಟು ನೈಜ ಘಟನೆ ಆಧಾರಿತ ಹಾಗೂ ಪ್ರಯೋಗಾತ್ಮಕ ಸಿನಿಮಾ ಮಾಡೋಣ ಎಂದು ನಿರ್ಧರಿಸಿದೆವು. ಒಂದೊಳ್ಳೆ ಕಥೆಗೆ, ಚಿತ್ರತಂಡಕ್ಕೆ ಸಪೋರ್ಟ್ ಆಗಿದ್ದೇನೆ’ ಎಂದು ತಿಳಿಸಿದರು.
ಚಿತ್ರದಲ್ಲಿ ರಂಗಭೂಮಿ ಕಲಾವಿದ ಶೃಂಗ ಬಿ. ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ವಿಶ್ವಕರ್ಣ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ.
ಶಿವು ಬಿ. ಕೆ. ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಚಿತ್ರಕ್ಕಿದ್ದು, ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ.
ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ಈ ಹಿಂದೆ “ಉದ್ಘರ್ಷ’, “ಆ್ಯಕ್ಟ್ 1979′ ಮೊದಲಾದ ಸಿನಿಮಾಗಳನ್ನು ನಿರ್ಮಿಸಿದ್ದ ದೇವರಾಜ್ ಆರ್ “19.20.21′ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.