ಆ್ಯಂಬುಲೆನ್ಸ್ನಲ್ಲೇ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
Team Udayavani, Feb 19, 2023, 7:24 AM IST
ರೈಸನ್: ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಆ್ಯಂಬುಲೆನ್ಸ್ನಲ್ಲಿ 24 ವರ್ಷದ ಗರ್ಭಿಣಿಯೊಬ್ಬರು ತ್ರಿವಳಿ ಗಂಡು ಶಿಶುಗಳಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಪಿಪ್ಲಿಯಾ ಗೋಲಿ ಗ್ರಾಮದ ಜ್ಯೋತಿ ಬಾಯಿ ಅವರು ಹೊಟ್ಟೆ ನೋವೆಂದು ಶುಕ್ರವಾರ ಸಂಜೆ ಗೋಹರ್ಗಂಜ್ ಪ್ರಾಥಮಿಕ ಆಸ್ಪತ್ರೆಗೆ ಬಂದಿದ್ದರು. ತಪಾಸಣೆ ನಡೆಸಿದ ವೈದ್ಯರು, ಮಹಿಳೆಯ ಪರಿಸ್ಥಿತಿ ಗಮನಿಸಿ, ಶೀಘ್ರ ಬೋಪಾಲ್ನ ಸುಲ್ತಾನಿಯಾ ಸರ್ಕಾರಿ ಆಸ್ಪತ್ರೆ ತೆರಳುವಂತೆ ತಿಳಿಸಿದರು.
ಅಲ್ಲದೇ 108 ಆ್ಯಂಬುಲೆನ್ಸ್ನಲ್ಲಿ ಸ್ವತಃ ಡಾ. ಸಂದೀಪ್ ಮಾರನ್ ಅವರು ಜತೆಯಲ್ಲಿ ತೆರಳಿದರು. ಮಾರ್ಗ ಮಧ್ಯದಲ್ಲೇ ಆಕೆ ತ್ರಿವಳಿ ಶಿಶುಗಳಿಗೆ ಜನ್ಮ ನೀಡಿದ್ದಾರೆ.
ತಾಯಿ-ಶಿಶುಗಳು ಆರೋಗ್ಯವಾಗಿದ್ದು, ಸದ್ಯ ಸುಲ್ತಾನಿಯಾ ಆಸ್ಪತ್ರೆಯ ನಿಗಾ ಘಟಕದಲ್ಲಿ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.