ಆ್ಯಸಿಡ್‌ ಸುರಿದ ಪಾಗಲ್‌ ಪ್ರೇಮಿ ಸೆರೆ

Team Udayavani, Feb 19, 2023, 2:55 PM IST

tdy-10

ಕನಕಪುರ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಬಿ.ಕಾಂ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್‌ ಎರಚಿದ್ದ ಪಾಗಲ್‌ ಪ್ರೇಮಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಗರದ ಕುರುಪೇಟೆಯ ಸುಮಂತ್‌ ಅಲಿಯಾಸ್‌ ಅಪ್ಪು (22) ಆ್ಯಸಿಡ್‌ ದಾಳಿ ನಡೆಸಿದ್ದ ಆರೋಪಿ ಎಂದು ಗುರುತಿಸಲಾಗಿದೆ.

ಆರೋಪಿ ಸುಮಂತ್‌ ಹಲವಾರು ದಿನಗಳಿಂದ ಯುವತಿಯ ಹಿಂದೆ ಬಿದ್ದು ಪ್ರೀತಿ ಮಾಡುವಂತೆ ಪೀಡಿಸುತ್ತಿದ್ದ. ಈ ನಡುವೆ ಶುಕ್ರವಾರ ಸಂಜೆ ಯವತಿ ಹಾಗೂ ಆಕೆಯ ಸಹೋದರ ಇಬ್ಬರು ನಗರದ ಬೈಪಾಸ್‌ ರಸ್ತೆಯಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಅವರನ್ನು ಆರೋಪಿ ಅಡ್ಡಗಟ್ಟಿ ಪ್ರೀತಿಸುವಂತೆ ಬೇಡಿಕೊಂಡಿದ್ದಾನೆ. ಆ್ಯಸಿಡ್‌ ದಾಳಿ ಮಾಡಲು ಮೊದಲೇ ಸಿದ್ಧತೆ ಮಾಡಿಕೊಂಡು ಬಂದಿದ್ದ. ಈ ವೇಳೆ ಪ್ರೀತಿಯನ್ನು ನಿರಾಕರಿಸಿದ ಕೂಡಲೇ ತನ್ನ ಪ್ಯಾಂಟಿನ ಪಾಕೆಟ್‌ನಲ್ಲಿದ್ದ ಆ್ಯಸಿಡನ್ನು ಯುವತಿಯ ಮುಖದ ಮೇಲೆ ಎರಚಿ ಪರಾರಿಯಾಗಿದ್ದ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಸುಮಂತ್‌ ಅಲಿಯಾಸ್‌ ಅಪ್ಪು ಮೆಕ್ಯಾನಿಕ್‌ ಕೆಲಸ ಮಾಡುತ್ತಿದ್ದ. ಕಳೆದ ಒಂದು ವರ್ಷದಿಂದ ಯುವಕ- ಯುವತಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಇಬ್ಬರ ನಡುವೆ ಗಲಾಟೆ ನಡೆದು ವಿದ್ಯಾರ್ಥಿನಿ ಪ್ರೀತಿ ನಿರಾ ಕರಿಸಿದ್ದಳು. ಹೀಗಾಗಿ ಆ್ಯಸಿಡ್‌ ಎರಚಿದ್ದ. ಕಾರ್‌ ಎಂಜಿನ್‌ ಶುಚಿಗೊಳಿಸಲು ಬಳಸುತ್ತಿದ್ದ ಆ್ಯಸಿಡ್‌ ಅನ್ನು ಮುಖದ ಮೇಲೆ ಎರಚಿದ್ದ. ಘಟನೆಯಲ್ಲಿ ಯುವತಿಯ ಎಡಭಾಗದ ಕಣ್ಣಿಗೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ಮಿಂಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.