ಡಾ| ಶ್ರೀಧರ ಭಂಡಾರಿ ಯಕ್ಷದೇಗುಲ ಪ್ರಶಸ್ತಿ ಪ್ರದಾನ


Team Udayavani, Feb 20, 2023, 6:45 AM IST

ಡಾ| ಶ್ರೀಧರ ಭಂಡಾರಿ ಯಕ್ಷದೇಗುಲ ಪ್ರಶಸ್ತಿ ಪ್ರದಾನ

ಪುತ್ತೂರು: ಯಕ್ಷಗಾನದ ಸಿಡಿಲಮರಿ, ಶತ ಧಿಗಿಣಗಳ ಸರದಾರ ಖ್ಯಾತಿಯ ಪುತ್ತೂರು ಡಾ| ಶ್ರೀಧರ ಭಂಡಾರಿ ಅವರ ಸಂಸ್ಮರಣೆ ಹಾಗೂ “ಡಾ| ಶ್ರೀಧರ ಭಂಡಾರಿ ಯಕ್ಷದೇಗುಲ ಪ್ರಶಸ್ತಿ’ ಪ್ರದಾನ ಸಮಾರಂಭವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ರವಿವಾರ ನಡೆಯಿತು.

ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿ, ಯಕ್ಷಗಾನ ರಂಗದಲ್ಲಿ ತನ್ನದೇ ಆದ ಶೈಲಿಯನ್ನು ತೋರಿಸಿಕೊಟ್ಟು ಕಲೆಯನ್ನು ಇನ್ನೊಂದು ಪೀಳಿಗೆಗೆ ವರ್ಗಾಯಿಸಿ ಅವರಲ್ಲಿ ಅಭಿರುಚಿ ಮೂಡಿಸಿದ ಮಹಾನ್‌ ಕಲಾವಿದ ಡಾ| ಶ್ರೀಧರ ಭಂಡಾರಿ ಎಂದು ಸ್ಮರಿಸಿದರು.

ವ್ಯಕ್ತಿಯ ಕಾಲಾನಂತರ ವರ್ಷ ದಿಂದ ವರ್ಷಕ್ಕೆ ನೆನಪು ಮಾಸುತ್ತದೆ. ಆದರೆ ಶ್ರೀಧರ ಭಂಡಾರಿ ಅವರ ನೆನಪು ವರ್ಷದಿಂದ ವರ್ಷಕ್ಕೆ ಹೆಚುತ್ತಿರುವುದು ಅವರು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಸೇವೆಯ ಫಲ ಎಂದರು.

ಶಾಸಕ ಸಂಜೀವ ಮಠಂದೂರು ಮತ್ತು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಕಲಾವಿದನ ಬದುಕು ಸಮೃದ್ಧ ಬದುಕು ಎಂಬು ದನ್ನು ತೋರಿಸಿಕೊಟ್ಟಿರುವ ಶ್ರೀಧರ ಭಂಡಾರಿ ಅವರು ಹಳ್ಳಿಯ ಮೂಲೆ ಯಿಂದ ವಿಶ್ವಕ್ಕೆ ಯಕ್ಷಗಾನದ ಸೊಬ ಗನ್ನು ಪಸರಿಸಿದವರು ಎಂದರು.

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಡಾ| ಟಿ. ಶ್ಯಾಮ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಶ್ರೀ ಮಹಾ ಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‌ ಮುಳಿಯ, ಜಕ್ಕೂರು ಯಕ್ಷ ಸಿಂಚನ ಕಲಾವೃಂದದ ಸಂಸ್ಥಾಪಕ ಚೇವಾರು ಚಿದಾನಂದ ಕಾಮತ್‌, ನ್ಯಾಯವಾದಿ ಮಹೇಶ್‌ ಕಜೆ, ಉಷಾ ಶ್ರೀಧರ ಭಂಡಾರಿ, ಉದ್ಯಮಿ ಸಚ್ಚಿದಾನಂದ ಶೆಟ್ಟಿ, ಶ್ರೀದೇವಿ ಪ್ರಕಾಶ್‌ ಭಂಡಾರಿ, ಕೋಕಿಲ ಜಯವರ್ಧನ, ಶಾಂತಲಾ ಸಚ್ಚಿದಾನಂದ ಶೆಟ್ಟಿ ಮೊದಲಾದವರಿದ್ದರು.

ಅನಿಲಾ ದೀಪಕ್‌ ಶೆಟ್ಟಿ ಪ್ರಸ್ತಾ ವನೆಗೈದರು. ಅರ್ಪಿತಾ ಪ್ರಶಾಂತ್‌ ಶೆಟ್ಟಿ ಕಟಪಾಡಿ ನಿರೂಪಿಸಿ ವಂದಿ ಸಿದರು. ಹನುಮಗಿರಿಯ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದ ರಿಂದ “ಶ್ರೀದೇವಿ ಮಹಾತ್ಮೆ’ ಪ್ರದರ್ಶಿಸಲ್ಪಟ್ಟಿತು.

ಕುರಿಯ ಅವರಿಗೆ ಪ್ರಶಸ್ತಿ
ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರೀ ಅವರಿಗೆ ಡಾ| ಶ್ರೀಧರ ಭಂಡಾರಿ ಯಕ್ಷ ದೇಗುಲ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದು ಎಲ್ಲ ಯಕ್ಷಗಾನ ಕಲಾವಿದರಿಗೆ ಸಂದ ಗೌರವ ಎಂದು ಗಣಪತಿ ಶಾಸ್ತ್ರೀ ಕೃತಜ್ಞತೆ ಸಲ್ಲಿಸಿದರು.

ಯಕ್ಷರಕ್ಷ ನಿಧಿ ಸಮರ್ಪಣೆ
ವೇಣೂರು ಆಶಾ ವಾಮನ ಕುಮಾರ್‌ ಅವರಿಗೆ ಯಕ್ಷರಕ್ಷ ನಿಧಿಯನ್ನು ಸಮರ್ಪಿಸಲಾಯಿತು.

ಟಾಪ್ ನ್ಯೂಸ್

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.