ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ವಿಧಿವಶ
Team Udayavani, Feb 20, 2023, 8:44 AM IST
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಶ್ರಿನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಸೋಮವಾರ (ಫೆ.20 ರಂದು) ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
1966 ರಲ್ಲಿ ಬಂದ ʼಸಂಧ್ಯಾರಾಗʼ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನಿರ್ದೇಶಕರಾಗಿ ಕನ್ನಡದಲ್ಲಿ ʼಕಸ್ತೂರಿ ನಿವಾಸʼ, ʼಎರಡು ಕನಸುʼ, ʼಬಯಲು ದಾರಿʼ, ʼಜೀವನ ಚೈತ್ರʼ,ʼಗಾಳಿ ಮಾತುʼ, ʼಹೊಸ ಬೆಳಕುʼ, ʼಆಪರೇಷನ್ ಡೈಮಂಡ್ ರಾಕೆಟ್ʼ, ʼಜೇಡರ ಬಲೆʼ, ʼಗೋವಾದಲ್ಲಿ ಸಿಐಡಿ999ʼ, ಹೀಗೆ ಅನೇಕ ಚಿತ್ರಗಳನ್ನು ಮಾಡಿ ಸೂಪರ್ ಹಿಟ್ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು. ಡಾ. ರಾಜ್ ಕುಮಾರ್ ಅವರೊಂದಿಗೆ ಬಂದ ಭಗವಾನ್ ಅವರ ಸಿನಿಮಾಗಳು ಆ ಕಾಲದಲ್ಲಿ ಮೋಡಿ ಮಾಡಿತ್ತು. 2019 ರಲ್ಲಿ ಸಂಚಾರಿ ವಿಜಯ್ ಅವರ ʼಆಡುವ ಗೊಂಬೆʼ ಚಿತ್ರವನ್ನು ನಿರ್ದೇಶನ ಮಾಡಿದ್ದರು.
ನಿರ್ದೇಶಕ ದೊರೈರಾಜ್ ಜೊತೆಗೂಡಿ ಅನೇಕ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದರು. ದೊರೈ – ಭಗವಾನ್ ಎಂದೇ ಇವರು ಖ್ಯಾತಿಯಾಗಿದ್ದರು.
ಬೆಂಗಳೂರಿನ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.