ವಿಮಾನದಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ ಪ್ರಯಾಣಿಕ… ಬಳಿಕ ಆದದ್ದೇ ಬೇರೆ
Team Udayavani, Feb 20, 2023, 7:15 PM IST
ಹೈದರಾಬಾದ್ : ವಿಮಾನ ನಿಲ್ದಾಣಕ್ಕೆ ತೆರಳಲು ತಡವಾಯಿತು ಇನ್ನೇನು ವಿಮಾನ ಹೊರಟೆ ಹೋಗುತ್ತದೆ ಎಂದು ಭಾವಿಸಿ ಪ್ರಯಾಣಿಕನೋರ್ವ ವಿಮಾನದಲ್ಲಿ ಬಾಂಬ್ ಇದೆ ಎಂದು ಹುಸಿಬಾಂಬ್ ಕರೆ ಮಾಡಿ ಪೊಲೀಸರ ಅತಿಥಿಯಾದ ಘಟನೆ ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಘಟನೆ ವಿವರ: ಹೈದರಾಬಾದ್ ನಿಂದ ಚೆನ್ನೈ ಗೆ ತೆರಳಬೇಕಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂದು ವ್ಯಕ್ತಿಯೊಬ್ಬನಿಂದ ವಿಮಾನ ನಿಲ್ದಾಣಕ್ಕೆ ಕರೆ ಬಂದಿದೆ, ಇದರ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಬಿಗಿ ಭದ್ರತೆ ಏರ್ಪಡಿಸಿದ್ದಾರೆ, ಅಲ್ಲದೆ ಬಾಂಬ್ ಕರೆ ಬಂದ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ವಿಮಾನವನ್ನು ತಪಾಸಣೆ ನಡೆಸಿದ್ದಾರೆ ಆದರೆ ವಿಮಾನದಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಲಿಲ್ಲ. ಅಲ್ಲದೆ ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಲಾಯಿತಾದರೂ ಯಾವುದೇ ಕುರುಹುಗಳು ಸಿಗಲಿಲ್ಲ ಬಳಿಕ ಅಧಿಕಾರಿಗಳು ಇದೊಂದು ಹುಸಿ ಬಾಂಬ್ ಕರೆ ಎಂದು ನಿರ್ಧರಿಸಿ, ಕರೆ ಬಂದ ಜಾಡನ್ನು ಪರಿಶೀಲಿಸಿದಾಗ ಪತ್ತೆಯಾಗಿದ್ದು ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಬೇಕಿದ್ದ ವ್ಯಕ್ತಿಯೇ ಹುಸಿ ಬಾಂಬ್ ಕರೆ ಮಾಡಿರುವುದು ಗೊತ್ತಾಗಿದೆ.
ಪೊಲೀಸರ ತಂಡ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನೂ ಅದೇ ವಿಮಾನದಲ್ಲಿ ಹೈದರಾಬಾದ್ ಗೆ ತೆರಳಬೇಕಿತ್ತು ಆದರೆ ತಾನು ಹೊರಡುವಾಗ ವಿಳಂಭವಾದ ಕಾರಣ ವಿಮಾನ ಕೈತಪ್ಪುತ್ತೇ ಎಂಬ ಭಯದಿಂದ ವಿಮಾನದಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದರೆ ವಿಮಾನ ಹಾರಾಟ ನಡೆಸಲು ವಿಳಂಬವಾಗುತ್ತದೆ ಈ ವೇಳೆ ನಾನು ವಿಮಾನ ನಿಲ್ದಾಣವನ್ನು ತಲುಪಬಹುದು ಎಂದು ಆಲೋಚಿಸಿ ಈ ರೀತಿ ಮಾಡಿದೆ ಎಂದು ಹೇಳಿಕೊಂಡಿದ್ದಾನೆ.
ಸದ್ಯ ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಶಾ ಅವರಿಗೆ ‘ಮೊಗಾಂಬೋ’ ಎಂದ ಉದ್ಧವ್ ಠಾಕ್ರೆಗೆ ತಿರುಗೇಟು ನೀಡಿದ ಬಿಜೆಪಿ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.